Showing posts with label ಡಾ.ಎಂ.ಎಂ ಕಲ್ಬುರ್ಗಿ. Show all posts
Showing posts with label ಡಾ.ಎಂ.ಎಂ ಕಲ್ಬುರ್ಗಿ. Show all posts

19 March 2013

* ಡಾ.ಎಂ.ಎಂ ಕಲ್ಬುರ್ಗಿ


ಇತ್ತೀಚೆಗೆ, ಸಾಹಿತ್ಯದ `ಮರು ಓದು' ಹವ್ಯಾಸ ವಿದ್ವಾಂಸರಲ್ಲಿ ಬೆಳೆಯುತ್ತಲಿದೆ. ಇದು ಸ್ವಾಗತಾರ್ಹವಾದರೂ, ಈ ವರೆಗೆ ವಿದ್ವಾಂಸರು ಮಂಡಿಸಿರುವ ನಿಜನಿರ್ಣಯಗಳನ್ನು ಪ್ರಶ್ನಿಸುವ ವಿತಂಡವಾದಗಳು ಕೆಲವರಿಂದ ಆಗಾಗ ವ್ಯಕ್ತವಾಗುತ್ತಲಿವೆ. ಇವುಗಳಲ್ಲಿ ಬಾಲಗಂಗಾಧರ, ಡಂಕಿನ್ ಝಳಕಿ ಮತ್ತು ರಾಜಾರಾಮ್ ಹೆಗಡೆಯವರು ಮಂಡಿಸಿದ, ವಚನಸಾಹಿತ್ಯ ವೈದಿಕ ವಿರೋಧಿ ಅಲ್ಲ; ವಚನ ಸಾಹಿತ್ಯದಲ್ಲಿ ಜಾತಿ ವಿರೋಧಿ ನಿಲುವು ಕಂಡುಬರುವುದಿಲ್ಲ -ಎಂಬ ಎರಡು ಪ್ರಶ್ನೆಗಳು ಮುಖ್ಯವಾಗಿವೆ. ಇದು ಶರಣ ಚಳವಳಿಯ ಮೂಲ ಉದ್ದೇಶವನ್ನೇ  ಸ್ಫೋಟಿಸುವ ತಂತ್ರದ ಹಾಗೆ ಕಾಣುತ್ತದೆ.

ಇವರು ಹೀಗೆ ಹೇಳಲು ಎರಡು ಕಾರಣಗಳಿರಬಹುದು. ಒಂದು ವಚನಸಾಹಿತ್ಯದ ಸರಿಯಾದ ಸಿದ್ಧಾಂತ ಗೊತ್ತಿಲ್ಲದಿರುವುದು. ಎರಡು: ಗೊತ್ತಿದ್ದೂ ಯಾವುದೋ ಪೂರ್ವಗ್ರಹ ಪೀಡಿತರಾಗಿರುವುದು. ಬಹುಶಃ ಇವರಲ್ಲಿ ಈ ಎರಡೂ ಇರುವಂತೆ ತೋರುತ್ತದೆ.