Showing posts with label ದೇವನೂರು ಮಹಾದೇವ. Show all posts
Showing posts with label ದೇವನೂರು ಮಹಾದೇವ. Show all posts

17 May 2013

* ಪ್ರೊ.ರಾಜಾರಾಮ ಹೆಗಡೆ

(ದೇವನೂರು ಮಹಾದೇವ ಅವರ ಲೇಖನ ಇಲ್ಲಿ ಓದಿ) 

ಸನ್ಮಾನ್ಯ ದೇವನೂರು ಮಹಾದೇವರ ಪ್ರತಿಕ್ರಿಯೆಯನ್ನು ಓದಿದ ನಂತರ, ಹಾಗೂ ಅವರು ಏನನ್ನು ಹೇಗೆ ಹೇಳಿದ್ದಾರೆ ಎಂಬುದನ್ನು ಕಂಡ ನಂತರ, ಅವರನ್ನು ಕಾಡಿದ ಹೇಗೆ ಹೇಳಲಿ ಎಂಬ ಪ್ರಶ್ನೆಯು ಈಗ ನನ್ನದೇ ಆಗಿದೆ. ದೇವನೂರರ ಕಥನದ ಭಾಷೆ ನನಗೆ ತುಂಬಾ ಇಷ್ಟ. ಆದರೆ ಇಲ್ಲಿ ಅವರು ನಮ್ಮ ಕುರಿತು ಏಕೆ ಇಂಥ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದೂ ಸ್ಪಷ್ಟ. ಅವರಿಗೆ ನಮ್ಮ ಮೇಲೆ ಸಿಟ್ಟಿದೆ. ದೇವನೂರರು ಒಂದು ಸಮೂಹದ ಹಿತದೃಷ್ಟಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೀವನ ಈ ಕುರಿತಾಗಿಯೇ ಒಂದು ಹೋರಾಟ ಎಂದರೂ ತಪ್ಪಿಲ್ಲ. ಇಷ್ಟನ್ನು ಖಚಿತವಾಗಿ ಹೇಳಬಲ್ಲಷ್ಟು ನಾನು ಅವರನ್ನು ಬಲ್ಲೆ. ಹಾಗೂ ಅದನ್ನು ಗಮನಿಸುವುದು ಮುಂದಿನ ಸಂವಾದಕ್ಕೆ ನಿರ್ಣಾಯಕ ಎಂಬುದಾಗಿ ನನಗನಿಸುತ್ತದೆ. ಏಕೆಂದರೆ ಯಾರದೇ ಪ್ರಾಮಾಣಿಕತೆಯ ಮೇಲೆ ಅಪನಂಬಿಕೆಯನ್ನಿಟ್ಟು ಬೌದ್ಧಿಕ ಚರ್ಚೆಯನ್ನು ಪ್ರಾರಂಭಿಸುವುದರಿಂದ ಚರ್ಚಿಸತಕ್ಕ ವಿಷಯಕ್ಕೆ ನ್ಯಾಯ ಸಲ್ಲುವುದಿಲ್ಲ.
ನಮ್ಮ ದುರುದ್ದೇಶದ ಕುರಿತು ಅವರು ಕಟ್ಟಿಕೊಂಡಿರುವ ಚಿತ್ರಗಳನ್ನು ಅವರ ಲೇಖನದ ಮೂಲಕ ಗ್ರಹಿಸುತ್ತ ಹೋದಾಗ ನಮ್ಮ ಕುರಿತು ಯಾವ ರೀತಿಯ ಚಿತ್ರಣವು ಅವರ ವಲಯದಲ್ಲಿ ಗಟ್ಟಿಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ದೃಷ್ಟಾಂತ ಸಿಕ್ಕಂತಾಯಿತು. ಹಾಗಂತ ಇದೇನೂ ನನಗೆ ಆಘಾತ ನೀಡಲಿಲ್ಲ. ಈ ಥೆರಪಿಯನ್ನು ನನಗೆ ಹಾಗೂ ನನ್ನ ಗುಂಪಿಗೆ ನಾವು ಬಾಲು ಜೊತೆ ಸೇರಿ ಸಂಶೋಧನೆ ಪ್ರಾರಂಭಿಸಿದಾಗಿನಿಂದಲೂ ನೀಡಲಾಗುತ್ತಿದೆ.
ಸಂಶೋಧನೆ ಮಾಡುವುದು ಕೇವಲ ಬೌದ್ಧಿಕ ಪ್ರಶ್ನೆಯೊಂದೇ ಅಲ್ಲ, ಅದು ಪ್ರವಾಹದ ವಿರುದ್ಧ ಈಜುವ ಕೆಲಸ ಕೂಡ ಆಗಿದೆ ಎಂಬುದು ನಮಗೆ ಈಗಾಗಲೇ ಅನುಭವ ವೇದ್ಯವಾಗಿದೆ.

ಸಾಮಾಜಿಕ ಸಂಶೋಧನೆ ಯಾಕಾಗಿ?

*  ಪ್ರೊ.ಜೆ.ಎಸ್.ಸದಾನಂದ


(ಪ್ರಜಾವಾಣಿಯಲ್ಲಿ ಪ್ರಕಟವಾದ ದೇವನೂರು ಮಹಾದೇವ ಅವರ ಲೇಖನಕ್ಕೆ ಪ್ರತಿಕ್ರಿಯೆ)
(ಪ್ರೊ.ರಾಜಾರಾಮ ಹೆಗಡೆ ದೇವನೂರು ಮಹಾದೇವ ಅವರ ಲೇಖನಕ್ಕೆ ಬರೆದಿರುವ ಪ್ರತಿಕ್ರಿಯೆ ಓದಿ


ದೇವನೂರು ಮಹಾದೇವ ಅವರ ಲೇಖನದಲ್ಲಿ (ಪ್ರಜಾವಾಣಿ ದಿನಾಂಕ: 29/4/2013) ನಮಗೆ ಕಾಣುವುದು ನಮ್ಮ ಸಂಶೋಧನೆಯ ಬಗ್ಗೆ ಇರುವ ಕೋಪ, ಅಸಹನೆ ಹಾಗೂ ತಿರಸ್ಕಾರ. ಇದಕ್ಕೆ ಕಾರಣವೇನು? ಅವರನ್ನು ಸ್ವಲ್ಪಮಟ್ಟಿಗೆ ಬಲ್ಲ ನನಗೆ ಅನಿಸುವುದಿಷ್ಟು. ಇಂತಹ ಸಿಟ್ಟು ಅಸಹನೆಗೆ ಮೂಲ ಕಾರಣ ಸಮಾಜದಲ್ಲಿರುವ ಅನ್ಯಾಯ, ಶೋಷಣೆ ಮುಂತಾದ ನಕಾರಾತ್ಮಕ ಅಂಶಗಳನ್ನು ಬುಡಸಮೇತ ಕಿತ್ತೊಗೆಯಬೇಕೆಂಬ ಗುರಿಯ ಬಗ್ಗೆ ಅವರಿಗಿರುವ ಬದ್ಧತೆ ಹಾಗೂ ಅಂತಹ ಅನ್ಯಾಯ, ಶೋಷಣೆಗಳಿಗೆ ಮೂಲ ಕಾರಣ ಯಾವುದು ಎನ್ನುವುದು ಎನ್ನುವುದರ ಕುರಿತು ಅವರಿಗಿರುವ ದೃಢ ನಂಬಿಕೆ. ಜಾತಿ ವ್ಯವಸ್ಥೆಯನ್ನು ಕಿತ್ತೊಗೆಯದ ಹೊರತು ನಮ್ಮ ಸಮಾಜದ ಅನ್ಯಾಯಗಳನ್ನು ಸರಿಪಡಿಸಲಾಗದು ಎನ್ನುವುದರ ಬಗ್ಗೆ ಅವರಿಗೆ ಯಾವ ಸಂಶಯವೂ ಇಲ್ಲ. ಅವರು ಮುಟ್ಟಬೇಕಾದ ಗುರಿ ಹಾಗೂ ಆ ನಿಟ್ಟಿನಲ್ಲಿ ಅವರು ಸಾಗುತ್ತಿರುವ ಮಾರ್ಗದ ನಡುವೆ ಯಾವ ವ್ಯತ್ಯಾಸವೂ ಅವರಿಗೆ ಕಾಣಿಸುವುದಿಲ್ಲ. ಹಾಗಾಗಿ ಸಾಗುತ್ತಿರುವ ಮಾರ್ಗದ ಕುರಿತು ಎತ್ತಲಾಗುವ ಪ್ರಶ್ನೆಗಳು ಮುಟ್ಟಬೇಕಾದ ಗುರಿಯನ್ನೇ ಪ್ರಶ್ನಾರ್ಹಗೊಳಿಸುವಂತೆ ಅಥವಾ ಅಂತಹ ಗುರಿಗಳಿಂದ ನಮ್ಮನ್ನು ವಿಮುಖಗೊಳಿಸುವ ಹುನ್ನಾರದಂತೆ ಅವರಿಗನಿಸುತ್ತಿದೆ.

ಹೇಗೆ ಹೇಳಲಿ? ಏನು ಹೇಳಲಿ?

* ಪ್ರೊ.ರಾಜಾರಾಮ ಹೆಗಡೆ


(ದೇವನೂರು ಮಹಾದೇವರವರ ಲೇಖನಕ್ಕೆ ಪ್ರತಿಕ್ರಿಯೆ)
(ಪ್ರೊ.ಜೆ.ಎಸ್.ಸದಾನಂದ ಅವರು ದೇವನೂರು ಲೇಖನಕ್ಕೆ ಪ್ರತಿಕ್ರಿಯಿಸಿದ್ದಾರೆ)

ದೇವನೂರು ಮಹಾದೇವರ ಪ್ರತಿಕ್ರಿಯೆಯನ್ನು ಓದಿದ ನಂತರ, ಅವರು ಏನನ್ನು ಹೇಗೆ ಹೇಳಿದ್ದಾರೆ ಎಂಬುದನ್ನು ಕಂಡ ನಂತರ ಅವರನ್ನು ಕಾಡಿದ ಆ “ಹೇಗೆ ಹೇಳಲಿ? ಏನು ಹೇಳಲಿ?” ಎಂಬ ಪ್ರಶ್ನೆ ಈಗ ಅವರದಕ್ಕಿಂತ ನನ್ನದೇ ಆಗಿದೆ. ಅವರು ನಮ್ಮ ಕುರಿತು ಏಕೆ ಇಂಥ ಭಾಷೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟ. ಅವರಿಗೆ ಸಿಟ್ಟಿದೆ. ದೇವನೂರರು ಒಂದು ಸಮೂಹದ ಹಿತದೃಷ್ಟಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರ ಜೀವನ ಈ ಕುರಿತಾಗಿಯೇ ಒಂದು ಹೋರಾಟ ಎಂದರೂ ತಪ್ಪಿಲ್ಲ. ಇಷ್ಟನ್ನು ಖಚಿತವಾಗಿ ಹೇಳಬಲ್ಲಷ್ಟು ನಾನು ಅವರನ್ನು ಬಲ್ಲೆ. ಹಾಗೂ ಅದನ್ನು ಗಮನಿಸುವುದು ಮುಂದಿನ ಸಂವಾದಕ್ಕೆ ನಿರ್ಣಾಯಕ ಎಂಬುದಾಗಿ ನನಗನಿಸುತ್ತದೆ. ಏಕೆಂದರೆ ಯಾರದೇ ಪ್ರಾಮಾಣಿಕತೆಯ ಮೇಲೆ ಅಪನಂಬಿಕೆಯನ್ನಿಟ್ಟು ಬೌದ್ಧಿಕ ಚರ್ಚೆಯನ್ನು ಪ್ರಾರಂಭಿಸುವುದರಿಂದ ಚರ್ಚಿಸತಕ್ಕ ವಿಷಯಕ್ಕೆ ನ್ಯಾಯ ಸಲ್ಲುವುದಿಲ್ಲ.

ನಮ್ಮ ದುರುದ್ದೇಶದ ಕುರಿತು ಅವರು ಕಟ್ಟಿಕೊಂಡಿರುವ ಚಿತ್ರಗಳನ್ನು ಅವರ ಲೇಖನದ ಮೂಲಕ ಗ್ರಹಿಸುತ್ತ ಹೋದಾಗ ನಮ್ಮ ಕುರಿತು ಯಾವ ರೀತಿಯ ಚಿತ್ರಣವು ಅವರ ವಲಯದಲ್ಲಿ ಗಟ್ಟಿಯಾಗುತ್ತಿದೆ ಎಂಬುದಕ್ಕೆ ಮತ್ತೊಂದು ದೃಷ್ಟಾಂತ ಸಿಕ್ಕಂತಾಯಿತು. ಹಾಗಂತ ಇದೇನೂ ನನಗೆ ಆಘಾತ ನೀಡಲಿಲ್ಲ.
* ಡಂಕಿನ್ ಝಳಕಿ

ಇದು ರಾಜೇಂದ್ರ ಚೆನ್ನಿಯವರು ಲಡಾಯಿ ಬ್ಲಾಗ್‌ನಲ್ಲಿ ಬರೆದ ಲೇಖನಕ್ಕೆ (ರಾಜೇಂದ್ರ ಚೆನ್ನಿಯವರ ಲೇಖನ ಓದಲು ಕ್ಲಿಕ್‌ ಮಾಡಿ) ನನ್ನ ಪ್ರತಿಕ್ರಿಯೆ. ಅವರ ಲೇಖನ ಸಾಕಷ್ಟು ಉದ್ದವಿದ್ದರೂ ಅದರಲ್ಲಿ ಉತ್ತರ ಕೊಡಲು ಯೋಗ್ಯವಾದ ವಿಚಾರಗಳಿರುವುದು ಎರಡು ಅಥವಾ ಮೂರು ಮಾತ್ರ. ಉಳಿದದ್ದೆಲ್ಲಾ ವೈಯುಕ್ತಿಕ ನಿಂದನೆಗಳು, ಆಧಾರ ರಹಿತ ಆಪಾದನೆಗಳು, ಮತ್ತು ಬಾಲಿಶ ಹಾಸ್ಯಗಳು. ಅವುಗಳಿಗೆ ಉತ್ತರ ಕೊಡುವುದು ಘನತೆಯ ವಿಚಾರವಲ್ಲ.

೧.ಮೇಲುಚಲನೆಯ ಕುರಿತು: ಡಾ.ಷಣ್ಮುಖರವರು ಹೇಳುವ ನನ್ನ “ಪ್ರಬಂಧದಲ್ಲಿ ಎಲ್ಲೂ ಈಗ ಇರುವ ವಚನಗಳು ಜಾತಿ(ವ್ಯವಸ್ಥೆ) ವಿರೋಧಿ ಚಳುವಳಿ ಎಂಬ ಕಥೆಯನ್ನು ವೀರಶೈವರು ತಮ್ಮ ಮೇಲುಚಲನೆಗಾಗಿ ಹರಡಿದರು ಎನ್ನುವ ವಾದವಿಲ್ಲ” ಎಂಬುದನ್ನು ಅಲ್ಲಗಳೆಯುತ್ತಾ ಚೆನ್ನಿಯವರು ನಾನು ನನ್ನ ಪ್ರಬಂಧದಲ್ಲಿ ತನ್ನ ಅಸ್ಮಿತೆ ಹಾಗೂ ಸಂಘಟನೆಯನ್ನು ಬಲಪಡಿಸುವ ಪ್ರಯತ್ನದಲ್ಲಿ ಬ್ರಿಟಿಷರು ಕಟ್ಟಿಕೊಟ್ಟ ಚಿತ್ರಣಗಳನ್ನು ತನಗೆ ಅಪ್ಯಾಯಮಾನವಾಗಿ ಕಂಡಿದ್ದರಿಂದ ಆಧುನಿಕ ವೀರಶೈವ ಶಿಕ್ಷಿತ ವರ್ಗವು ಒಪ್ಪಿಕೊಂಡಿತು ಎಂದು ವಾದಿಸುತ್ತೇನೆ ಎಂದು ಹೇಳುತ್ತಾರೆ.

ಈ ಕುರಿತು ಈಗಾಗಲೇ ಬಹಳಷ್ಟು ತಪ್ಪು ಅಭಿಪ್ರಾಯಗಳು ಚಲಾವಣೆಗೆ ಬಂದಿರುವುದರಿಂದ, ನನ್ನ ವಾದ ಏನು ಎಂಬುದನ್ನು ಮತ್ತೊಮ್ಮೆ ವಿಶದ ಪಡಿಸುತ್ತೇನೆ.

16 May 2013

* ರಾಜೇಂದ್ರ ಚೆನ್ನಿ 


ಎಚ್.ಎಸ್. ಶಿವಪ್ರಕಾಶರ ಅಂಕಣ ಲೇಖನದಿಂದ ಆರಂಭವಾದ ಚರ್ಚೆಗಳನ್ನು ಕುತೂಹಲ ಮತ್ತು ಆಶ್ಚರ್ಯದಿಂದ ಓದುತ್ತಾ ಬಂದಿದ್ದೇನೆ. ಆಶ್ಚರ್ಯದಿಂದ ಏಕೆಂದರೆ ಡಂಕಿನ್ ಝಳಕಿಯವರ ಹಾಗೂ ಅವರು ತಮ್ಮ ತಾತ್ವಿಕ ಚೌಕಟ್ಟಾಗಿ ಬಳಸುವ ಎಸ್.ಎನ್.ಬಾಲಗಂಗಾಧರ ಅವರ ವಾದಗಳು ವಚನ ಸಾಹಿತ್ಯದ ಮರುಓದಿಗೆ ಮತ್ತು ಜೊತೆಗೆ ಜಾತಿ ವ್ಯವಸ್ಥೆಯ ಕುರಿತು ಮರುಚರ್ಚೆಗೆ ಕಾರಣವಾಗಬಹುದಾದ ಸ್ವಂತಿಕೆ ಹಾಗೂ ವಿವೇಚನಾ ಸಾಮರ್ಥ್ಯವನ್ನು ಹೊಂದಿವೆ ಎನ್ನುವ ತಪ್ಪು ಕಲ್ಪನೆಯ ಮೇಲೆ ಈ ಸಂವಾದವು ನಡೆಯುತ್ತಿದೆ.

`ಜಗತ್ತಿನ ಬೌದ್ಧಿಕ ವಲಯದಲ್ಲಿಯೇ ಒಂದು ಮೂಲಭೂತವಾದ ಪಲ್ಲಟವನ್ನು ಮತ್ತು ಭಾರತೀಯ ಸಾಮಾಜಿಕ ವಿಜ್ಞಾನಗಳ ಮೂಲಸ್ವರೂಪವನ್ನೇ ಪುನರ್‌ರಚಿಸುವ ಸೈದ್ಧಾಂತಿಕ, ತಾತ್ವಿಕ ಪಲ್ಲಟಗಳು ಈ ವಾದಗಳಿಂದ ಆಗಿವೆ, ಆಗಬೇಕು' ಎಂದು ಕುವೆಂಪು ವಿಶ್ವವಿದ್ಯಾಲಯದ ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದ ಒಂದು ಗುಂಪು ಪ್ರತಿಪಾದಿಸುತ್ತಾ ಬಂದಿದೆ. ಅಲ್ಲದೇ  `ಇದನ್ನು ಅರ್ಥಮಾಡಿಕೊಳ್ಳಲಾಗದ  `ಕನ್ನಡ ಬುದ್ಧಿಜೀವಿಗಳು'  ತಿರಸ್ಕಾರಕ್ಕೆ ಯೋಗ್ಯರೆಂದು'  ವಾದಿಸುತ್ತಾ ಬಂದಿದೆ.

15 May 2013

* ಡಂಕಿನ್ ಝಳಕಿ


ಇಂದಿನ (04/05/2013) ಪ್ರಜಾವಾಣಿಯಲ್ಲಿ ಜಿ.ಬಿ. ಹರೀಶರು ಬರೆದ ಲೇಖನ ಮತ್ತು ಇದುವರೆಗೂ ಬಂದಿರುವ ಇನ್ನಿತರ ಪ್ರತಿಕ್ರಿಯೆಗಳಲ್ಲಿ  ಸಂಶೋಧನೆ ಎಂದರೇನು ಎಂಬ ವಿಚಾರದ ಕುರಿತು ಬಹಳಷ್ಟು ಗೊಂದಲವನ್ನು ನಾವು ಕಾಣಬಹುದು. ನಮ್ಮ ವಿಶ್ವವಿದ್ಯಾಲಯಗಳಲ್ಲಿನ ಸಂಶೋಧನೆಯಲ್ಲಿ ನಾವು ಪದೇಪದೇ ಕಾಣುವ ಹಲವು ಸಣ್ಣ ದೊಡ್ಡ ತಪ್ಪುಗಳು ಈ ಪ್ರತಿಕ್ರಿಯೆಗಳ ತುಂಬಾ ಕಾಣಿಸುತ್ತವೆ. ಅಂತಹ ಕೆಲವು ಸಮಸ್ಯೆಗಳನ್ನು ಕುರಿತು ಚರ್ಚಿಸುವುದೇ ಈ ಪುಟ್ಟ ಲೇಖನದ ಉದ್ದೇಶ.

(೧) ಸಂಶೋಧನೆಗಳು ಮತ್ತು ಉಲ್ಲೇಖಗಳು: ನಾನು ನನ್ನ ಲೇಖನ ಮತ್ತು ಪ್ರಬಂಧಗಳಲ್ಲಿ ಯಾರನ್ನು ಮತ್ತು ಎಷ್ಟು ಮಂದಿಯನ್ನು ಉಲ್ಲೇಖಿಸುತ್ತೇನೆ ಮತ್ತು ಉಲ್ಲೇಖಿಸುವುದಿಲ್ಲ ಎಂಬ ವಿಚಾರವನ್ನು ಕುರಿತು ಮಾತನಾಡುತ್ತಾ ಹರೀಶರು ಹೀಗೆ ಹೇಳುತ್ತಾರೆ “ವಚನ ಸಾಹಿತ್ಯದ ಬಗ್ಗೆ ಅಪಾರ ಒಳನೋಟವಿರುವ ಬರಹಗಳನ್ನು ಬರೆದಿರುವ ಜ.ಚ.ನಿ. ಸಿದ್ದೇಶ್ವರಸ್ವಾಮಿಗಳಾಗಲಿ, ಕಪಟರಾಳ ಕೃಷ್ಣರಾವ್, ಎಂ.ಆರ್. ಶ್ರಿನಿವಾಸಮೂರ್ತಿಯವರಾಗಲಿ, ಈ ಬರಹದುದ್ದಕ್ಕೂ ಎಲ್ಲೂ ಕಾಣಿಸುವುದಿಲ್ಲ. ಕಿ.ರಂ. ನಾಗರಾಜರೂ ಇಲ್ಲಿ ಗೈರುಹಾಜರಿ.”

14 May 2013

ಸಾಮಾಜಿಕ ಸಂಶೋಧನೆ ಯಾಕಾಗಿ?

* ಪ್ರೊ.ಜೆ.ಎಸ್.ಸದಾನಂದ
(ಪ್ರಜಾವಾಣಿಯಲ್ಲಿ ಪ್ರಕಟವಾದ ದೇವನೂರು ಮಹಾದೇವ ಅವರ ಲೇಖನಕ್ಕೆ ಪ್ರತಿಕ್ರಿಯೆ) 
ದೇವನೂರು ಮಹಾದೇವ ಅವರ ಲೇಖನದಲ್ಲಿ (ಪ್ರಜಾವಾಣಿ ದಿನಾಂಕ: 29/4/2013) ನಮಗೆ ಕಾಣುವುದು ನಮ್ಮ ಸಂಶೋಧನೆಯ ಬಗ್ಗೆ ಇರುವ ಕೋಪ, ಅಸಹನೆ ಹಾಗೂ ತಿರಸ್ಕಾರ. ಇದಕ್ಕೆ ಕಾರಣವೇನು? ಅವರನ್ನು ಸ್ವಲ್ಪಮಟ್ಟಿಗೆ ಬಲ್ಲ ನನಗೆ ಅನಿಸುವುದಿಷ್ಟು. ಇಂತಹ ಸಿಟ್ಟು ಅಸಹನೆಗೆ ಮೂಲ ಕಾರಣ ಸಮಾಜದಲ್ಲಿರುವ ಅನ್ಯಾಯ, ಶೋಷಣೆ ಮುಂತಾದ ನಕಾರಾತ್ಮಕ ಅಂಶಗಳನ್ನು ಬುಡಸಮೇತ ಕಿತ್ತೊಗೆಯಬೇಕೆಂಬ ಗುರಿಯ ಬಗ್ಗೆ ಅವರಿಗಿರುವ ಬದ್ಧತೆ ಹಾಗೂ ಅಂತಹ ಅನ್ಯಾಯ, ಶೋಷಣೆಗಳಿಗೆ ಮೂಲ ಕಾರಣ ಯಾವುದು ಎನ್ನುವುದು ಎನ್ನುವುದರ ಕುರಿತು ಅವರಿಗಿರುವ ದೃಢ ನಂಬಿಕೆ. ಜಾತಿ ವ್ಯವಸ್ಥೆಯನ್ನು ಕಿತ್ತೊಗೆಯದ ಹೊರತು ನಮ್ಮ ಸಮಾಜದ ಅನ್ಯಾಯಗಳನ್ನು ಸರಿಪಡಿಸಲಾಗದು ಎನ್ನುವುದರ ಬಗ್ಗೆ ಅವರಿಗೆ ಯಾವ ಸಂಶಯವೂ ಇಲ್ಲ. ಅವರು ಮುಟ್ಟಬೇಕಾದ ಗುರಿ ಹಾಗೂ ಆ ನಿಟ್ಟಿನಲ್ಲಿ ಅವರು ಸಾಗುತ್ತಿರುವ ಮಾರ್ಗದ ನಡುವೆ ಯಾವ ವ್ಯತ್ಯಾಸವೂ ಅವರಿಗೆ ಕಾಣಿಸುವುದಿಲ್ಲ. ಹಾಗಾಗಿ ಸಾಗುತ್ತಿರುವ ಮಾರ್ಗದ ಕುರಿತು ಎತ್ತಲಾಗುವ ಪ್ರಶ್ನೆಗಳು ಮುಟ್ಟಬೇಕಾದ ಗುರಿಯನ್ನೇ ಪ್ರಶ್ನಾರ್ಹಗೊಳಿಸುವಂತೆ ಅಥವಾ ಅಂತಹ ಗುರಿಗಳಿಂದ ನಮ್ಮನ್ನು ವಿಮುಖಗೊಳಿಸುವ ಹುನ್ನಾರದಂತೆ ಅವರಿಗನಿಸುತ್ತಿದೆ.
ಅವರ ಈ ಅನಿಸಿಕೆ ಎಷ್ಟರಮಟ್ಟಿಗೆ ಸರಿ? ಈ ಪ್ರಶ್ನೆಗೆ ಉತ್ತರಿಸಬೇಕಾದರೆ ಬಾಲುರವರು ಭಾರತದಲ್ಲಿ ಜಾತಿವ್ಯವಸ್ಥೆ ಇಲ್ಲ ಎನ್ನುವ ಪ್ರಾಕ್ಕಲ್ಪನೆಯನ್ನು (ಇದೊಂದು ಸಂಶೋಧನೆಯ ಮುಖಾಂತರ ಸಾಬೀತಾಗಬೇಕಾದ ಪ್ರಾಕ್ಕಲ್ಪನೆ ಮಾತ್ರ) ಏಕೆ ಮುಂದಿಡುತ್ತಾರೆ ಎನ್ನುವುದರ ಹಿನ್ನೆಲೆಯನ್ನು ನಾವು ನೋಡಬೇಕು.

10 May 2013

* ಡಾ. ಸಂತೋಷ್ ಕುಮಾರ್ ಪಿ.ಕೆ, ಶಿವಮೊಗ್ಗ.


ಇದು ಕಲಬುರ್ಗಿಯವರ ಲೇಖನಕ್ಕೆ ಪ್ರತಿಕ್ರಿಯೆ

ವಚನಗಳ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಒಂದು ರೀತಿಯ ಕಂದರವಿದೆ. ಒಂದೆಡೆ ಸಂಶೋಧನೆ ವಾಸ್ತವದ ಕುರಿತು ವಾದಿಸುತ್ತಿದ್ದರೆ ಮತ್ತೊಂದೆಡೆ ಐಡಿಯಾಲಜಿಗಳು ಕಟ್ಟುಕತೆಯನ್ನೇ ಮರುಪ್ರಸಾರ ಮಾಡುತ್ತಿವೆ. ಇಲ್ಲಿ ಕಂದರವಿರುವುದು ಸಂಶೋಧನೆ ಮತ್ತು ಐಡಿಯಾಲಜಿಯ ನಡುವೆ. ಸಂಶೋಧನೆ ನಡೆಸಿ ಸುಮಾರು ೨೨೦೦೦ ವಚನಗಳನ್ನು ಪರಿಶೀಲನೆಗೆ ಒಡ್ಡಿ, ಡಂಕಿನ್ ಮತ್ತು ಬಾಲುರವರು ಒಂದು ಹೊಸ ಹೈಪೋಥೀಸಿಸ್ ನ್ನು ನೀಡುತ್ತಿದ್ದಾರೆ. ಆದರೆ ಅದು ಸಂಶೋಧನಾ ಹೈಪೋಥೀಸಿಸ್ ಎಂಬುದು ಚರ್ಚೆಯಲ್ಲಿ ಭಾಗವಹಿಸುತ್ತಿರುವ ಪೂರ್ವಪಕ್ಷದವರಿಗೆ ಅರ್ಥವಾಗದೆ ಇರುವುದು ಖೇದದ ಸಂಗತಿ.

ವಚನಗಳು ಜಾತಿವ್ಯವಸ್ಥೆಯನ್ನು ತೊಲಗಿಸಲು ನಡೆದಿರುವ ಚಳುವಳಿಯಲ್ಲ ಎಂದು ಯಾರಾದರೂ ವಾದಿಸಿದರೆ, ಅದಕ್ಕೆ ಪೂರ್ವಪಕ್ಷದವರು ಅದು ಹೇಗೆ ಜಾತಿವ್ಯವಸ್ಥೆಯ ವಿರುದ್ಧವೇ ನಡೆದಿದೆ ಎಂಬುದನ್ನು ಸಾಬೀತು ಮಾಡಬೇಕಾಗುತ್ತದೆ.

* ಎಚ್‌.ಎಸ್‌ ಶಿವಪ್ರಕಾಶ್‌ 

(ವಚನಗಳಲ್ಲಿ ಆಧ್ಯಾತ್ಮಿಕತೆ ಮತ್ತು ಸಾಮಾಜಿಕತೆ- 2)

( ಶಿವಪ್ರಕಾಶರ ಮೊದಲ ಲೇಖನ: ವಚನ ಸಾಹಿತ್ಯ ಮತ್ತು ಜಾತಿ ವಿರೋಧ)

ಡಂಕಿನ್ ಜಳಕಿಯವರ ವಚನಗಳ ಕುರಿತ ಮಹಾಪ್ರಬಂಧವನ್ನು ಕುರಿತು ನಾನು ಈ ಅಂಕಣದ ಮಿತಿಯಲ್ಲಿ ಬರೆದ ಪ್ರತಿಕ್ರಿಯೆ ಸುಮಾರು ಒಂದು ತಿಂಗಳ ಕಾಲ `ಪ್ರಜಾವಾಣಿ'ಯಲ್ಲಿ  ಹಲವು ನಿಟ್ಟನಿಂದಚರ್ಚಿತವಾಯಿತು. ಈ ಚರ್ಚೆ `ಪ್ರಜಾವಾಣಿ'ಯ ಪುಟಗಳನ್ನೂ ಮೀರಿ `ಫೇಸ್‌ಬುಕ್'ನಂಥ ಅಂತರ್ಜಾಲದ ವಲಯಗಳಲ್ಲಿ, ಸಾಹಿತ್ಯಕ ಪತ್ರಿಕೆಗಳಲ್ಲಿ ಕೂಡ ಚರ್ಚಿತವಾದದ್ದು ಚರ್ಚಿತ ವಿಚಾರಗಳ ಮಹತ್ವದ ಕುರುಹು.

ಜಳಕಿ ವಿರೋಧಿಗಳಲ್ಲಿ ಕೆಲವು ಮಂದಿ ಗಣ್ಯರು ನನ್ನ ಮೇಲೂ ಹರಿಹಾಯ್ದದ್ದೂ ಆಯಿತು. ಶಿವಮೊಗ್ಗೆಯ ಕೆಲವು ಸಂಶಯಾಸ್ಪದ ಮಿತ್ರರು ನಾನು ಬಾಲಗಂಗಾಧರ ಅವರಿಂದ ಯಾವುದೋ ಅನುಕೂಲ ಪಡೆಯುವ ಉದ್ದೇಶದಿಂದ ಅವರ ಶಿಷ್ಯರೊಬ್ಬರ ವಿಚಾರಗಳಿಗೆ ಪ್ರಚಾರ ಕೊಟ್ಟೆನೆಂದು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದೂರಿದರು. ನನ್ನನ್ನು ಬಲ್ಲವರಿಗೆ ಅಂಥ ಲಾಭ ಪಡೆಯುವ ಉದ್ದೇಶ ನನಗಿಲ್ಲವೆಂದು ಸಮರ್ಥನೆ ನೀಡುವ ಅಗತ್ಯವಿಲ್ಲ. ಒಲ್ಲದವರಿಗೆ ನೀಡಿಯೂ ಪ್ರಯೋಜನವಿಲ್ಲ.

03 May 2013

* ಡಾ. ಕಿರಣ್ ಗಾಜನೂರು


ದೇವನೂರರ ಕುರಿತು ಅಪಾರ ಗೌರವ ಇಟ್ಟುಕೊಂಡೆ ಈ ಮಾತು ಹೇಳುತ್ತಿದ್ದೇನೆ ಅವರ ಲೇಖನದಲ್ಲಿ ಲಾಜಿಕ್ಕೆ ಇಲ್ಲ ಇನ್ನು ತಪ್ಪುಗಳನ್ನು ಹೇಗೆ ಗುರುತಿಸುವುದು ಈಗ ಒಬ್ಬರೂ ಒಂದು ಸಂಶೋಧನೆಯ ಮೂಲಕ ನಿಮಗೆ ಒಂದು ಪ್ರಶ್ನೆ/ವಾದ ಕೇಳುತ್ತಾರೆ ಎಂದು ಇಟ್ಟುಕೊಳ್ಳಿ ಅದಕ್ಕೆ ನೀವು ಬೌದ್ಧಿಕವಾಗಿ ಅಂಧರೆ ಆ ವ್ಯಕ್ತಿ ಯಾವ ಸಂಶೋಧಾನ ವಿಧಾನ ಬಳಸಿ ಯಾವ ಮಾಹಿತಿಯ ಆಧಾರದ ಮೇಲೆ ತನ್ನ ವಾದ ಮಂಡಿಸುತ್ತಿದ್ದಾನೆ ಅದರಲ್ಲಿರುವ ದೂಷಗಳೇನು ಅವನು ಬಳಸಿದ ವಿಧಾನ ಮತ್ತು ಪಡೆದ ಮಾಹಿತಿ ಹೇಗೆ ಆ ವಸ್ಥುವಿನ ಸರಿಯಾಗಿ ವಿವರಿಸುವಲ್ಲಿ ಎಡವಿದೆ ಎಂಬುದನ್ನು ಲಾಜಿಕಲಿ ಸಾಧಿಸಬೇಕಾಗುತ್ತದೆ. ಆದರೆ ದೆವನೂರರ ಬರಹದಲ್ಲಿ ಈ ಅಂಶವೇ ಇಲ್ಲ ಅವರೂ ಇದುವರೆಗೂ ನಂಬಿಕೊಂಡು ಬಂದ ಐಡಿಯಾಲಜಿಯನ್ನು ವಿವರಿಸಿದ್ದಾರೆ ಅಷ್ಟೆ ಈ ರೀತಿಯಾದರೆ ಯಾರೂ ಬೇಕಾದರೂ ಮಾತನಾಡಬಹುದು ಆದರೆ ಅದರಿಂದ ಎನೂ ಪ್ರಯೋಜನ? ಅದೂ ಅಲ್ಲದೆ ದೆವನೂರು ಮತ್ತು ಅವರ ಹಿಂಬಾಲಕರು ನಂಬಿದ ವಿಷಯಗಳೇ ಅಂತಿಮ ಅವರ ವಿವರಣೆಗೆ ವಿರುಧ್ಧದ ಸಂಶೋಧನೆ ಯಾರೂ ಮಾಡಬಾರದು ಮಾಡಿದರೆ ಅವರ ಮೇಲೆ ಕಣ್ಣಿಡಿ ವಿಚಾರಣೇ ಮಾಡಿ ಎಂಬಿತ್ಯಾದಿ ಮಾತನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವ ವಿಷಯವು ಅಲ್ಲ ಒಂದೂ ಕಾಲದಲ್ಲಿ ಆರ್.ಎಸ್.ಎಸ್ ನವರನ್ನು ಯಾವ ಯಾವ ಕಾರಣಕ್ಕೆ ಇವರುಗಳು ವಿರೋಧಿಸಿದ್ದರೂ ಇವತ್ತು ಅವೇ ಲಕ್ಷಣಗಳನ್ನು ಇವರು ಅವಾಹಿಸಿಕೊಂಡು ಮಾತನಾಡುತ್ತಿದ್ದಾರೆ ಇತರರ ಸಂಶೋಧನೆ ಟೀಕಿಸುತ್ತಿದ್ದರೆ. ಅಂದರೆ ಯಾರೂ ಸಂಶೋಧನೆಯನ್ನೆ ಮಾಡಬಾರದು ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದೂ ಎಚ್ಚರಿಸುತ್ತಿದ್ದಾರೆ ಇನ್ನು ಮುಂದೆ ಹೋಗಿ ಜಿನ್ನಾ ನೀಡಿದಂತೆ ಡೈರೆಕ್ಟ್ ಆಕ್ಷನ್ ಗೆ ಕರೆನೀಡುತ್ತಿದ್ದಾರೆ ನನಗೆ ಆಶ್ಚರ್ಯವಾಗುವುದೇ ಇದಕ್ಕೆ ಯಾರೂ ಎನೇ ಸಂಶೋಧನೆ ಮಾಡಲಿ ನಾವು ಅವರೂ ಎತ್ತುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಆ ಮಟ್ಟದ ಸೈಂಧಾಂತಿಕ ಪಕ್ವತೆ ನಾವು ನಂಬಿದ ಸಿಂಧಾಂತಕ್ಕೆ ಇದೆ ಎಂದು ಆತ್ಮವಿಶ್ವಾಸದಿಂದ ನುಡಿಯುಬೇಕಾದ ಈ ಚಿಂತಕರೂ ಹೀಗೆ ವರ್ತಿಸುತ್ತಿರುವುದು ನಮ್ಮ ಸಂಶೋಧನಾ ಮಾದರಿಯ ವೈಪಲ್ಯ ತೋರಿಸುತ್ತದೆ”  ಪೇಸ್ ಬುಕ್ ನಲ್ಲಿ ನಾನೂ ಪ್ರಕಟಿಸಿದ ಈ ಬರಹಕ್ಕೆ ಹಲವರು ಅನೇಕ ರೀತಿಯ ಪ್ರಶ್ನೆಗಳನ್ನು/ಟೀಕೆಗಳನ್ನು ಮಾಡಿದ್ದಾರೆ ಅವೆಲ್ಲವುಗಳನ್ನು ಒಂದೂ ಚರ್ಚೆಯ ಮಾದರಿಯಲ್ಲಿ ಕೆಳಗೆ ಬರೆದಿದ್ದೇನೆ ನೋಡಿ. . . .
ನಮ್ಮ ಸಮಾಜದಲ್ಲಿ ನಡೆಯುತ್ತಿರುವ ಮತ್ತು ನಡೆದಿರುವ ಶೋಷಣೆಗಳ ಕುರಿತು ಅವುಗಳ ನಿವಾರಣೆಯಗಳ ಕುರಿತು ಇಲ್ಲಿರುವ ಎಲ್ಲರ ಪ್ರಯತ್ನ ಮತ್ತು ಭಾವನೆ ಎಲ್ಲವೂ ತುಂಬಾ ಗೌರವಿಸುವ ವಿಚಾರಗಳೆ ಅಂದರೆ ನಮ್ಮೇಲ್ಲರ ಹಾನೆಸ್ಟ್ ಗುರಿ ಒಂದೇ ಅದು ನಮ್ಮ ಸಮಕಾಲಿನ ಸಮಾಜದ ಶೋಷಣೆಗಳನ್ನು ಹೊಗಲಾಡಿಸಬೇಕು.

ಆದರೆ, ನಮ್ಮ ದಾರಿ ಬೇರೆ ಬೇರೆ ಉದಾಹರಣೆಗೆ ಆಧುನಿಕ ಭಾರತದ ಜಾತಿ ಶೋಷಣೆಗಳನ್ನು ಹೋಗಲಾಡಿಸಲು ರಾಜರಾಮರ ಕಾಲದಿಂದಲೂ ಪ್ರಯತ್ನಗಳು ನಡೆಯುತ್ತಿವೆ ಅವರು ಒಂದು ದಾರಿ ಬಳಸಿದರೆ ಗಾಂಧಿ ಒಂದು ಮಾರ್ಗ ಅನುಸರಿಸಿದ್ದಾರೆ ಅಂಬೇಡ್ಕರ‍್ ಮತ್ತೊಂದು ದಾರಿ ಅನುಸರಿಸಿದ್ದಾರೆ ಇವೆನ್ ಸೊ ಕಾಲ್ಡ್ ಬಲಪಂಥಿಯರೂ ಅವರದೇ ಅದ ದಾರಿಯನ್ನು ಅನುಸರಿಸಿದ್ದಾರೆ ಅದರೆ ಪಲಿತಾಂಶ ಮಾತ್ರ ಅಂದುಕೊಂಡಷ್ಟು ದೊರಕಿಲ್ಲ ಇಂದಿಗೂ ಶೋಷಣೆಗಳು ಅವಮಾನಗಳು ನಡೆಯುತ್ತಲೇ ಇವೆ ಇವತ್ತು ಆ ಶೋ಼ಣೆಗಳನ್ನು ಅರ್ಥ ಮಾಡಿಕೊಳ್ಳಕು ಬಾಲು ಹೊಸ ಒಂದೂ ಮಾರ್ಗ ತೋರುತ್ತಿದ್ದಾರೆ ಅಷ್ಟೆ ಅದರೆ ನಮ್ಮಲ್ಲಿ ಬಹಳ ಜನರಿಗೆ ಬಾಲು ಅವರು ಶೋಷಣೆಯನ್ನು ಅರ್ಥಮಾಡಿಕೊಳ್ಳಲು ಎಲ್ಲರಂತೆ ಒಂದೂ ಮಾರ್ಗವನ್ನು ತೋರಿಸುತ್ತಿದ್ದಾರೆ ಎಂದೂ ತಿಳಿಯುತ್ತಿಲ್ಲ ಬದಲಾಗಿ ಬಾಲು ಶೋಷಣೇಗಳೇ ಇಲ್ಲ ಎನ್ನುತ್ತಿದ್ದಾರೆ ಎಂದೂ ಅರ್ಥಮಾಡಿಕೊಂಡಿದ್ದಾರೆ (ಅದೂ ಸತ್ಯವಾಗಿದ್ದರೆ ನಾನೇ ಅವರನ್ನು ಒಪ್ಪುವುದಿಲ್ಲ) ಇದು ಸಮಸ್ಯೆಯ ಮೂಲ ಒಂದೂ ವೇಳೆ ಬಾಲು ತೋರಿಸುತ್ತಿರುವ ಮಾರ್ಗವೂ ಶೋಷಣೆಯನ್ನು ಅರ್ಥಮಾಡಿಸಲೂ ವಿಪಲವಾದರೆ ಮತ್ತೂಬ್ಬರು ಮತ್ತೂಂದು ದಾರಿ ತೋರಿಸುತ್ತಾರೆ ಅದರೆ ಅದಕ್ಕಿಂತ ಮುಂಚೆ ಬಾಲು ತೋರಿರುವ ದಾರಿಯ ಸಮಸ್ಯಗಳೇನು ಅದು ಹೇಗೆ ಸಮಾಜದ ಶೋಷನೆಗಳನ್ನು ಅರ್ಥಮಾಡಿಕೊಳ್ಳಲು ತೆಡೆಯಾಗಿದೆ ಎಂಧೂ ಯಾರದರೂ ತೋರಿಸಬೇಕಿದೆ ಆದರೆ ಇದುವರೆಗಿನ ನಮ್ಮ ವಿದ್ವತ್ ವಲಯದ ಚರ್ಚೆ ನಿಜ ಅರ್ಥದಲ್ಲಿ ಬಾಲುರ ಸೈದ್ದಾಂತಿಕ ಮಟ್ಟದ ಸಂಶೋಧನೆಯ ಕುರಿತು ಯಾವುದೆ ಆಸಕ್ತಿದಾಯಕ ಮತ್ತು ಅಗತ್ಯ ಪ್ರಶ್ನೆಯನ್ನೆ ಎತ್ತದೆ ತಾನೇ ತಾನಾಗಿ ಡಂಕಿನ್ ಮತ್ತು ಬಾಲು ಅವರಿಗೆ ವಿಜಯವನ್ನು ಒದಗಿಸಿದೆ. ಅದ್ದರಿಂದ ಸಮಾಜಿಕ ಸಮಸ್ಯಗಳ ಕುರಿತು ಸಮಾನ ಆಸಕ್ತಿ ಹೊಂದಿರುವ ನಾವು ಬಾಲು ಅವರನ್ನು ಒದಿ ಅಥವಾ ಮಾತನಾಡಿ ಅವರ ತಪ್ಪಿದ್ದರೆ ಇದೂ ನಿಮ್ಮ ಸಮಸ್ಯ ಎಂದೂ ತೋರಿಸಬೇಕಿದೆ.
ಈ ನೆಲೆಯಲ್ಲಿ ಬಷೀರ‍್, ದಿನೇಶ್,ದಯಾನಂದ,ಸಾಹಿಲ್, ಅಕ್ಷತಾ, ಹುಲಿಕುಂಟೆ ಮೂರ್ತಿ, ಅರುಣ್ ಜೋಳದ (ಇವರೆಲ್ಲರೂ ಸಮಾಜಿಕ ತಾಣಗಳಲ್ಲಿ ಬಾಲು ಬರವಣಿಗೆಗೆಳ ಕುರಿತು ಚರ್ಚಿಸುತ್ತಿದ್ದಾರೆ) ಇತರೆ ಸಮಾನ ಮನಸ್ಸಿನ ಎಲ್ಲರೂ ಒಮ್ಮೆ ಸಿ.ಎಸ್.ಎಲ್.ಸಿ ಗೆ ಭೇಟಿಕೊಟ್ಟು (ನಾನೂ ಇರುತ್ತೇನೆ) ನಾವು ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತದ್ದೇವೆ, ನಿಮ್ಮ ವಾದಗಳು ನಮ್ಮಲ್ಲಿ ಕೆಲವೂ ಗೊಂದಲಗಳನ್ನು ಹುಟ್ಟಿಹಾಕಿವೆ, ಸೋ.. ನಿಮ್ಮ ಸಂಶೋಧನೆ ಏನೂ? ಹೇಗೆ ಮಾಡುತ್ತಿದ್ದಿರ? ಇದರ ಉದ್ದೇಶ ಏನೂ? ಒಬ್ಬ ಪ್ರಜ್ಞಾವಂತನಾಗಿ ನನಗೆ ತಿಳಿಯುವ ಹಕ್ಕಿದೆ ವಿವರಿಸಿ. ಎಂದೂ ಅವರೂಡನೆಯೆ ನೆರವಾಗಿ ಚರ್ಚಿಸಿ, ಅ ನಂತರ ಅವರ ವಾದಗಳನ್ನು ವಿಮರ್ಶಿಸಿದರೆ ಖಂಡಿತ ಕರ್ನಾಟಕದ ಮಟ್ಟಿಗಿನ ಪ್ರಮುಖ ಚರ್ಚೆಗೆ ನಾವೂ ಮುಖಾಮುಖಿಯಾದಂತೆ ಆಗುತ್ತದೆ. ಮತ್ತು ಇತರರಿಗೆ ನಾವು ಒಂದೂ ಒಳ್ಳೆ ಮಾದರಿಯನ್ನು ಹಾಕಿಕೊಟ್ಟಂತೆ ಆಗುತ್ತದೆ.ಇಲ್ಲವಾದರೆ,ಮೇಲೆ ತಿಳಿಸಿದ ನಾವುಗಳೇ ೨ದಿನ ಎಲ್ಲರೂ ಒಟ್ಟಿಗೆ ಎಲ್ಲಾದರೂ ಕುಳಿತು ಬಾಲುವಿನ ವಾದಗಳನ್ನು ಓದಿ ಚರ್ಚಿಸಿ ಮುಖ್ಯವಾದ ಪ್ರಶ್ನಗಳನ್ನು ಪಟ್ಟಿಮಾಡಿ ಒಂದು ಲೇಖನ ಮಾಡಿ ಪ್ರಕಟಿಸಿದರೆ ಅದೂ ಇನ್ನೂ ಉತ್ತಮ ಪ್ರಯತ್ನವಾಗುತ್ತದೆ? ಈ ನಿಟ್ಟಿನಲ್ಲಿ ನಾವೂ ಯೋಚಿಸಬೇಕಿದೆ ಇದ್ಯಾವುದನ್ನು ಮಾಡದ ನಾವು, ಕೇವಲ ನಮಗೆ ದೂರೆತ ಸೆಕೆಂಡರಿ ಸೋರ್ಸ್‌ಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯ ೪೫ ವರ್ಷದ ಸಂಶೋಧನೆಯನ್ನು ಟೀಕಿಸುವುದರಲ್ಲಿ ಅರ್ಥವಿಲ್ಲ. . . ಮತ್ತು ನಮ್ಮಗಳ ಮೂಲ ಉದ್ದೇಶಗಳೂ ( ಸಮಾಜದ ಶೋಷಣೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪರಿಹರಿಸಲು ) ಈಡೇರುವುದಿಲ್ಲ. ಸೋ, ನಾವೂ ಬದಲಾಗಬೇಕಿದೆ. ಪ್ರಶ್ನೆ ಮಾಡುವ ನಮ್ಮ ಮಾದರಿಗಳೂ ಬದಲಾಗಬೇಕಿದೆ.
ಗೆಳೆಯರೆ,ಈ ನೆಲೆಯಲ್ಲಿ ಮಾತನಾಡಿದ್ದಕ್ಕೆ ಮೇಲೆ ತೀಳಿಸಿದ ಲೇಖಕರು ದೇವನೂರರು ಸಂತನ ಹಾಗೆಯೇ ಬದುಕಿದ್ದಾರೆ, ಸಂತನ ಹಾಗೆಯೇ ಮಾತನಾಡಿದ್ದಾರೆ. ಲಾಜಿಕ್ಕು, ಸಂಶೋಧನೆಯ ವೈಧಾನಿಕತೆ, ವಾದ, ತರ್ಕ ಎಲ್ಲದಕ್ಕೂ ಮಣ್ಣುಬಿದ್ದು ಹೋಗಲಿ. ನಮಗೆ ಬೇಕಿರುವುದು ಕಣ್ಣಮುಂದೆ ನಿಗಿನಿಗಿ ಕೆಂಡದಂತಿರುವ ಸತ್ಯಗಳು.ಮನುವಾದಿ ಅಜೆಂಡಾ ಹೇರಲು ಬಂದಿರುವವರ ಸೋ ಕಾಲ್ಡ್ ಸಂಶೋಧನೆಗಳಲ್ಲ. ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಅದಕ್ಕೆ ನಾನು, ನಮ್ಮ ವ್ಯವಸ್ಥೆಯಲ್ಲಿ ನಿತಿ ನಿರೂಪಣೆಗಳು ಸಾಮಾಜಿಕ ಸಂಶೋಧನೆ ರೂಪಿಸಿದ ಜ್ಞಾನದ ಮೇಲೆ ಆಗುತ್ತವೆಯೇ ಹೊರತು ಸಂತನ ಹಾಗೆ ಬದುಕುವುದರಿಂದ ಅಲ್ಲ ದೇವನೂರು ಸಂತರಾದರೆ ರವಿಶಂಕರ್ ಅವರ ತರ ಮಠ ತೆರೆದು ಬಂದವರಿಗೆ ಅಧ್ಯಾತ್ಮಿಕತೆ ಹೇಳಿಕೊಡಲಿ ನಾನೂ ಹೋಗುತ್ತೇನೆ ಆದರೆ ಅವರು ಸಾಮಾಜಿಕ ಚಿಂತಕರೂ ಅಂತಲೇ ತಮ್ಮನ್ನು ಕರೆದುಕೋಳ್ಳುತ್ತಾರೆ ಅಂತಾದಮೇಲೆ  ಶೋಧನೆಯ ವೈಧಾನಿಕತೆ, ವಾದ, ತರ್ಕ ಎಲ್ಲವನ್ನೂ ಕಲಿಯಲೇಬೇಕು ಅಲ್ಲವೆ. ಎಂಬ ನನ್ನ ಮಾತಿಗೆ ಸಾತ್ವಿಕ್ ಅವರು ಸರ್.. ಲಾಜಿಕ್ಕು, ಸಂಶೋಧನೆಯ ವೈಧಾನಿಕತೆ, ವಾದ, ತರ್ಕ ಬೇಡ ಎಂದರೆ ಹೇಗೆ ಸರ್.. ಅಂಬೇಡ್ಕರರ ಬರಹಗಳು ಅವರ ಎದುರಾಳಿಗಳಿಗೆ ಪಾಠ ಕಲಿಸಿದ್ದೇ ಅವರ ಸಂಶೋಧನೆ, ತರ್ಕಗಳ ಮೂಲಕ. ಇಲ್ಲವಾಗಿದ್ದಲ್ಲಿ ಅವರ ಎದುರಾಳಿಗಳು ಅವರನ್ನು ಭಾವುಕತೆ ಬಂಧನದಲ್ಲಿ ಸಿಲುಕಿಸಿಬಿಡುತ್ತಿದ್ದರು. ಅವರ ಅಪಾರ ಓದು ಮತ್ತು ಅದರಿಂದ ದಕ್ಕಿದ ತಾಳ್ಮೆ ಅವರನ್ನು ಅಂಥ ಹೀನ ಮತ್ತು ಭ್ರಷ್ಟ ಸಮಾಜದ ನಡುವೆಯೂ ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಮಾಡಿದ್ದು ಎಂಬುದು ನನ್ನ ನಂಬಿಕೆ. (ಈಗ ಅಂಬೇಡ್ಕರರನ್ನು ಓದಲು ಆರಂಭಿಸಿದ್ದೇನೆ. ಅದರ ಪೋರ್ಸ್ ನಲ್ಲಿ ಹೇಳಿದ ಮಾತಿರಬಹುದು ಎಂಬ ಮಾತುಗಳನ್ನು ಸೇರಿಸಿದರು ಇದನ್ನೆ ಮುಂದುವರಿಸಿ ನಾನು ನಮ್ಮಗಳ ಅಂತಿಮ ಉದ್ದೇಶ ಕನ್ನಡದ ಮಟ್ಟಿಗೆ ಒಂದೂ ಸಂಶೋಧನೆ ಈ ಮಟ್ಟಿಗೆ ಚರ್ಚೆಗೆ ಗ್ರಾಸವಾಗುತ್ತಿರುವುದು ನಮ್ಮಂತ ಯುವ ಸಂಶೋಧಕರಿಗೆ ಅಸರೆಯಾಗಲಿದೆ ಆದರೆ ಚರ್ಚೆ ಸಂಶೋಧನಾ ಎಲ್ಲೆ ಮಿರಿ ವಯಕ್ತಿಕ ಮಟ್ಟದ ಟಿಕೆಗಳಾಗಿ ಬದಲಾಗುತ್ತಿದೆ ಇದರಿಂದ ಯಾರಿಗೂ ಪ್ರಯೋಜನವಿಲ್ಲ? ಎರಡೂ ಕಡೆಯವರೂ ಸಂಯಮದಿಂದ ತಾಳ್ಮೆಯಿಂದ ಬೌದ್ಧಿಕವಾಗಿ ಚರ್ಚಿಸಿದರೆ ಒಂದೂ ದೊಡ್ಡ ಯುವ ಪೀಳಿಗೆ ಇದರಿಂದ ಲಾಭ ಪಡೆಯಲಿದೆ. . . . ಈ ನಿಟ್ಟಿನಲ್ಲಿ ನಾವು ಯೋಚಿಸಬೇಕಿದೆ ಎಂಬುದಾಗಿ ವಿವರಿಸಿದೆ.
ಇದಕ್ಕೆ ದಯಾನಂದ ಅವರು, ವಚನಚಳುವಳಿ ಯಾವ ಕಾರಣಕ್ಕೆ ಆಯಿತೋ ತಿಳಿದಿಲ್ಲ ಆದರೆ ಅದರಿಂದ ಜನರಿಗೆ ಒಳ್ಳೆಯದಾಗಿದೆ ಇಷ್ಟು ಸಾಕು ಒಂದೂ ಸಂಶೋಧನೆ ಮೂಲ ಉದ್ದೇಶವೇ ಇದು ವಚನಚಳುವಳಿ ಇದನ್ನು ಇಗಾಗಲೇ ಸಾಧಿಸಿರುವುದರಿಂದ ಅವುಗಳ ಕುರಿತ ಸಂಶೋಧನೆ ಅನಗತ್ಯ ಎಂಬ ಮಾತನ್ನು ಹೇಳಿದರು ಅದಕ್ಕೆ ನಾನು ಹಾಗಲ್ಲಾ ದಯಾ ನಾನೂ ನಿವೇ ಮಾತನಾಡುವ ನಮ್ಮ ವ್ಯವಸ್ಥೆಯಲ್ಲಿ ಕಾಯ್ಧೆ ಕಾನೂನುಗಳು ಯಾವುದರ ಆಧಾರದ ಮೇಲೆ ರೋಪುಗೊಳ್ಳುತ್ತವೆ ಮೇಲೆ ತಿಳಿಸಿದಂತೆ ಅದು ಸಮಾಜ ಸಂಶೋಧನೆ ಕಟ್ಟಿಕೊಟ್ಟ ಜ್ಞಾನದ ಆಧಾರ ಮೇಲೆ ಅಲ್ಲವೆ? ಹಾಗಾದರೆ ನಮ್ಮನ್ನು ಪ್ರತಿನಿಧಿಸುವ ಜ್ಞಾನದ ಆಧಾರದ ರೋಪುಗೊಂಡ ಕಾನೂನುಗಳು ಎಕೆ ಜನರಿಗೆ ಶೋಷಿತರಿಗೆ ನ್ಯಾಯ ಒದಗಿಸುತ್ತಿಲ್ಲ ಸಫಾಯಿ ಕರ್ಮಚಾರಿಗಳ ಕುರಿತ ನಿಮ್ಮ ಸಂಶೋಧನೆ ಮತ್ತು ಬರವಣಿಗೆ ಪ್ರಭುತ್ವದ ಅಂದರೆ ಕಾನೂನಿನ ಈ ದೋರಣೆಯನ್ನು ಖಂಡಿತ ಗುರುತಿಸಿರುತ್ತದೆ ಎಂದೂ ನಾನೂ ಭಾವಿಸಿದ್ದೇನೆ ( ದಯಾನಂದ ಕರ್ನಾಟಕದ ಸಫಾಯಿ ಕರ್ಮಚಾರಿಗಳ ಕುರಿತು ಹೋರಾಡುತ್ತಿರುವವರಲ್ಲಿ ಪ್ರಮುಖರು) ಮತ್ತು ಅದು ನಿಮ್ಮ ಅನುಭವಕ್ಕೂ ಬಂದಿರುತ್ತದೆ. ಸೊ ಇದರ ಅರ್ಥ ಸಫಾಯಿ ಕರ್ಮಚಾರಿಗಳ ಕುರಿತಂತೆ ನಮ್ಮ ಸಂಶೋಧನೆಗಳು ರೋಪಿಸಿರುವ ಜ್ಞಾನ ನಿಜವಾದ ಅರ್ಥದಲ್ಲಿ ಅವರ ಬದುಕನ್ನು ಅಲ್ಲಿನ ಬವಣೆಗಳನ್ನು ವಿವರಿಸುತ್ತಿಲ್ಲ ಅಂತ ಅಲ್ಲವೆ? ಅದಕ್ಕಾಗಿಯೇ ಅಲ್ಲವೇ ತಾವು ರಾಜ್ಯ ಎಲ್ಲಾ ಸುತ್ತುವುದು ಮತ್ತು ಬರೆಯುವುದು ಮುಂದೂಂದು ದಿನ ನಿಮ್ಮ ಅಭಿಪ್ರಾಯವೇ ನಮ್ಮ ಸಪಾಯಿ ಕರ್ಮಚಾರಿಗಳ ಕುರಿತ ಜ್ಞಾನ ಎಂದೂ ನಿರೂಪಿತವಾದರೆ ಆದರ ಆಧಾರದ ಮೇಲೆ ನೀತಿ ನಿರೋಪಣೆಗಳು ರಚಿತವಾದರೆ. . . .ಹೇಗಿರುತ್ತದೆ ಇದನ್ನೆ ಸಂಶೋಧನೆ ಎನ್ನುವುದು ಅಲ್ಲವೆ ಇದಕ್ಕೆ ಸಂಶೋಧನೆಯ ವೈಧಾನಿಕತೆ, ವಾದ, ತರ್ಕ ಎಲ್ಲವನ್ನೂ ಕಲಿಯಲೇಬೇಕು ಇಲ್ಲವಾದರೆ ನಿಮ್ಮ ಈಡೀ ಪ್ರಯತ್ನ ಕೇವಲ ಭಾವನಾತ್ಮಕ ಹೇಳಿಕೆಗಳಾಗುತ್ತವೆ ಇಲ್ಲವೇ ಒಂದಾರು ಕತೆಗಳಾಗುತ್ತವೆ. . . ಜ್ಞಾನ ವಾಗುವುದಿಲ್ಲ ಅದೂ ಆಗಬೇಕಾದರೆ ನೀವು ಅದನ್ನು ಜ್ಞಾನದ ಮಾದರಿಯಲ್ಲಿಯೇ ಮಂಡಿಸಬೇಕು ಗೆಳೆಯ.ಎಂದೂ ವಿವರಿಸಿದೆ.
ಇದಕ್ಕೆ ಪ್ರತಿಕ್ರೀಯಿಸಿದ ರವಿ ಅರೆಹಳ್ಳಿ ಇವರು ಆನು ದೇವಾ ಹೊರಗಣದವನು ಕೃತಿಯನ್ನು ಬೆಂಬಲಿಸಿದ ಮನಸುಗಳೇ ಇಂದು ಡಂಕಿನರ ವಾದದ ತಳಹದಿಯನ್ನು ಅಲುಗಾಡಿಸುತ್ತಿರುವ ಅನಿವಾರ್ಯತೆಯನ್ನು ನಾವು ಬೆಂಬಲಿಸಲೇಬೇಕಿದೆ. ಪ್ರತಿಭೆ ಎನ್ನುವುದಕ್ಕೆ ಹಲವು ಆಯಾಮಗಳ ಒಳಗೊಳುವಿಕೆ ಇರುವಾಗ ನೋಟು ಎಣಿಸುವ ಮಶೀನಿನಂತೆ ವ್ಯವಹರಿಸುವ ಡಂಕಿನ ಬಳಗದ ಶೋಧಕಗಳ ಮೂಲ ಹುಡುಕುವ ವಿಧಿ ಈಗಷ್ಟೆ ಶುರುವಾಗಿದೆ. ಇತಿಹಾಸ ಅಂಕಿ ಅಂಶಗಳನ್ನು ಎಷ್ಟು ಚೆನ್ನಾಗಿ ನೆನಪಿಟ್ಟುಕೊಳ್ಳುತ್ತೋ ಅಷ್ಟೆ ಬೇಗ ಅಳಿಸಿಯೂ ಬಿಡುತ್ತದೆ. ಅದರ ಪರಿಣಾಮಗಳಷ್ಟೆ ಕಾಲಾತೀತವಾಗಿ ಉಳಿಯುತ್ತವೆ. ಈವತ್ತಿಗೂ ಆನು ದೇವಾ ಹೊರಗಣದವನು ಕೃತಿ ನಿಷೇಧಿತ ಕೃತಿಯಾಗಿರುವುದು ಡಂಕಿನರ ಹಿಂದಿರುವ ಪ್ರಾಯೋಜಿತ ಮನಸುಗಳಿಂದಾನೆ ತಾನೆ ಎಂಬ ಮಾತನ್ನು ಹೇಳಿದರು .
ಇದಕ್ಕೆ ನಾನೂ, Ravi arehalli ತುಂಬಾ ಜನರ ತಪ್ಪು ತಿಳುವಳಿಕೆಯೆ.ಅದು ನನ್ನ ಪ್ರಕಾರ (ತಪ್ಪಿದ್ದರೆ ಡಂಕಿನ್ ಸರಿಮಾಡಿ) ಡಂಕಿನ್ ತಮ್ಮ ಒಂದೂ ವಾದದ ವಿವರಣೆಗೆ ಅಂಕಿ-ಅಂಶಗಳನ್ನು ಬಳಸಿಕೊಂಡಿದ್ದಾರೆಯೇ ವಿನಹ ಅವರ ಇಡೀ ವಾದವೇ ಅಂಕಿ-ಅಂಶಗಳ ಮೇಲೆ ನಿಂತಿಲ್ಲ . . .‌ಅದೂ ಅಲ್ಲದೆ ನಮ್ಮ ವ್ಯವಸ್ಥೆಯಲ್ಲಿ ನೀತಿ ನಿರೋಪಣೆಗಳು ಜಾರಿಗೊಳ್ಳುವುದೇ ಆಯಾ ಇಲಾಖೆಗಳು ನೀಡುವ ಅಂಕಿ-ಅಂಶಗಳ ಆಧಾರದ ಮೇಲೆ ಉದಾಹರಣೆಗೆ ಬಡತನ ಹೋಗಲಾಡಿಸಬೇಕು ಎಂದೂ ಹೊರಡುವ ಪ್ರಭುತ್ವ ಬಡತನ ಎಂದರೇನು? ಅವರುಗಳ ಸಂಖ್ಯೆ ಎಷ್ಟಿದೆ ? ಬಡತನಕ್ಕೆ ಕಾರಣಗಳೇನು? ಎಂದೂ ಅಂಕಿ-ಅಂಶ ಮತ್ತು ವರಧಿಯ ಆಧಾರದಲ್ಲಿ ಸರ್ಕಾರದ ಅರ್ಥಿಕ ತಜ್ಞರು ಯೋಜನೆ ರೂಪಿಸುತ್ತಾರೆಯೋ ಅಥವಾ ನಾಲ್ಕಾರು ಕಾದಂಬರಿಗಳಲ್ಲಿ/ಬಾಷಣಗಳಲ್ಲಿ ಸಾಹಿತಿಗಳು ಬಡತನದ ಕುರಿತು ಇರುವ ಭಾವುಕ ಹೇಳಿಕೆಗಳ ಮೇಲೆ ಯೋಜನೆ ರೂಪಿಸುತ್ತಾರೆಯೋ ಸಾಹಿತಿಗಳ ಹೇಳಿಕೆಗಳೂ ಪ್ರಭುತ್ವದ ನಿರ್ದಾರಗಳನ್ನು ಪ್ರಭಾವಿಸಬಹುದೇ ಹೊರತು ಅವುಗಳ ಆಧಾರದಲ್ಲಿ ನೀತಿ ನಿರೋಪಣೆ ನಡೆಯುವುದಿಲ್ಲ ನೀತಿ ನಿರೂಪಣೆಗೆ ಬೇಕಿರುವುದು ಅಂಕಿ-ಅಂಶ ಮತ್ತು ಅವುಗಳ ಆಧಾರದಲ್ಲಿ ತಜ್ಞರು ನೀಡುವ ವರಧಿಗಳು. ಎಂದು ವಿವರಿಸಿದೆ.
ಇದಕ್ಕೆ ರವಿಯವರು yes ನೀವು ಹೇಳೋದೇ ಸರಿ. ಆದರೆ ಅಂಕಿ ಅಂಶಗಳು ಒದಗಿ ಬಂದ ಆಧಾರಗಳ ಮೂಲವೂ ಬಹಳ ಅನುಮಾನಾಸ್ಪದವಾಗಿ ಇರುವಾಗ ಚರ್ಚೆ ಅವುಗಳ ಸುತ್ತಲೆ ಸುತ್ತೋದು ಸಹಜ. ಅಂಕಿ ಅಂಶಗಳನ್ನಷ್ಟೆ ಇಟ್ಟುಕೊಂಡು ಯೋಜನೆ ರೂಪಿಸವುದಾದರೆ “ತಜ್ಞರು” ಯಾಕೆ ಬೇಕು ಅರ್ಥ ಆಗುತ್ತಿಲ್ಲ. ಒಂದು ಮಶೀನು ಕೂಡ ಅಂಕಿ ಅಂಶಗಳನ್ನಿಟ್ಟುಕೊಂಡು ಯೋಜನೆ ರೂಪಿಸಬಹುದು ಅಲ್ವೆ. ಅನುಭವಗಳ ಮೂಟೆಗಳನ್ನಿಟ್ಟುಕೊಂಡ ತಜ್ಞರು ಯಾಕೆ… ಭಾವುಕತೆ ಒಂದು ಹಂತದ ತನಕ ತಡೆ ಒಡ್ಡಿದರೂ ಯೋಜನೆ, ಯೋಚನೆಗಳ ಮೂಲಕ್ಕೆ ಅನುಭವ ನೀಡುವ ಕಸುವು ಬಹಳ ಹೆಚ್ಚೇ ಇರುತ್ತೆ. ದೇವನೂರು ಮತ್ತು ಕಂಬಾರರಂತವರು ವಚನ ಚಳುವಳಿಯ ಅನುಭವ, ಫಲಿತಗಳನ್ನು ತಮ್ಮದಾಗಿಸಿಕೊಂಡ ಬಹುಸಂಖ್ಯಾತ “ತಜ್ಞ”ರಲ್ಲಿ ಸೇರುತ್ತಾರೆ ಎನ್ನುವುದನ್ನು ನೀವು ಒಪ್ಪುವುದಾದರೆ….ಅವರು ವರ್ತಮಾನದಲ್ಲಿ ಮಶೀನುಗಳಿಂತ ಹೆಚ್ಚು ಅಗತ್ಯವಾಗುತ್ತಾರೆ. ಎಂದು ವಿವರಿಸಿದರು ಅದಕ್ಕೆ ನಾನೂ ದೇವನೂರು ಮತ್ತು ಕಂಬಾರರಂತವರು ವಚನ ಚಳುವಳಿಯ ಅನುಭವ, ಫಲಿತಗಳನ್ನು ತಮ್ಮದಾಗಿಸಿಕೊಂಡ ಬಹುಸಂಖ್ಯಾತ “ತಜ್ಞ”ರಲ್ಲಿ ಸೇರುತ್ತಾರೆ ಎನ್ನುವುದನ್ನು ನೀವು ಒಪ್ಪುವುದಾದರೆ? ಎಂದೂ ಕೇಳಿದ್ದಿರಿ ಖಂಡಿತಾ ಒಪ್ಪುತ್ತೇನೆ ಅದೇ ರೀತಿ ಡಂಕಿನ್ರವರು ಸಹ ವಚನ ಚಳುವಳಿಯ ಅನುಭವ, ಫಲಿತಗಳನ್ನು ಭಿನ್ನ ಮಾದರಿಯಲ್ಲಿ ಪಡೆಯುವ ಪ್ರಯತ್ನ ಮಾಡಿದ್ದಾರೆ ಜ್ಞಾನ ಬೆಳೆಯುವುದೇ ಹೀಗೆ ಅದಕ್ಕೆ ಇಷ್ಟು ಅಸಹನೆ ಎಕೆ? ತಪ್ಪಿದ್ದರೆ ವಿಮರ್ಶಿಸಿ? ಅದು ಬಿಟ್ಟು ದೇವನೂರು ಮತ್ತು ಕಂಬಾರರಂತವರು ಪಡೆದ ವಚನ ಚಳುವಳಿಯ ಫಲಿತವೇ ಅಂತಿಮ ಇನ್ಯರು ವಚನಗಳ ಕುರಿತು ಬೇರೆ ನೆಲೆಯಲ್ಲಿ ಯೋಚಿಸಲೇ ಭಾರದು ಯೋಚಿಸಿದವರ ಮೇಲೆ ಕಣ್ನಿಡಿ ಎನ್ನುವ ನಿಲುವು ಎಷ್ಟು ಸರಿ. . . ಇದು ಒಂದೂ ಸಂಶೋಧನೆಗೆ ಮುಖಾಮುಖಿಯಾಗಿವ ಮಾದರಿಯೇ ರವಿ ನಿವೇ ಹೇಳಿ ಎಂದೂ ವಿವರಿಸಿದೆ ಅದಕ್ಕೆ ಮಂಜುನಾಥ್ ರವರು ಡಂಕಿನ್ ವಿದೇಶದಲ್ಲಿ ಕುಳಿತು ನಮ್ಮ ಸಮಾಜದ ಕುರಿತು ಸಂಶೋಧನೆ ಮಾಡುತ್ತಿದ್ದಾರೆ ಇದಕ್ಕೆ ಮಹತ್ವ ಇಲ್ಲ ಎಂಬ  ಅವರಿಗೆ ಅಂಬೇಡ್ಕರ‍್ ಅವರು ನಮ್ಮ ಸಮಾಜದ ಶೋಷಣೆಗಳ ಕುರಿತು ತಮ್ಮ ನಿಲುವುಗಳನ್ನು ರೂಪಿಸಿಕೊಂಡಿದ್ದು ವಿದೇಶದ ಗ್ರಂಥಾಲಯಗಲ್ಲಿಯೇ ಗೆಳೆಯ . . . ಹಾಗದರೆ ಅವರು ತಪ್ಪೆ. . . ಹಾಗೆ ಡಂಕಿನ್ ಅವರೂ ಇಲ್ಲಿಯವರೆ ಇಲ್ಲಿನ ಸಮಾಜದ ಕುರಿತು ಸಂಶೋಧನೆ ಮಾಡಿಯೇ ವಿದೇಶಕ್ಕೆ ಹೋಗಿರುವುದು ಅದು ಉನ್ನತ ಶಿಕ್ಷಣಕ್ಕೆ.. . . ವಿಷಯ ಅದಲ್ಲ ಎಲ್ಲಿದ್ದರೆ ಎನೂ ನಾವು ಮಾತನಾಡುವ ನೆಲೆ ಸರಿಯಾಗಿರಬೇಕು ಅಷ್ಟೆ. ಎಂಬ ನನ್ನ ವಿವರಣೆ ಉತ್ತರವಾಯಿತು. . .
ಇದಾದ ನಂತರ ಚರ್ಚೆ ಬೇರೆ ನೆಲೆಯತ್ತ ಹೊರಳಿತು ಅದರ ವಿವರ ಹೀಗಿದೆ  …
http://savithru.blogspot.in/2013/04/blog-post_29.html?m=1 ಸಮಾಜಿಕ ತಾಣದಲ್ಲಿ ನೀಡಿರುವ ಕೆಲವು ವಚನಗಳ ಕುರಿತು ಚರ್ಚೆ ನಡೆಯಿತು ಅದಕ್ಕೆ ನಾನು ನಮ್ಮಲ್ಲಿ ಬಹುತೇಕರು ಬಾಲು ಅವರ ಬರವಣಿಗೆಗಳನ್ನು ಒರಿಜಿನಲ್ ಓದಿಲ್ಲ (ಓದಿದ್ದರೆ ಅವರ ಲೇಖನಗಳ ಆಧಾರದ ಮೇಲೆ ಚರ್ಚೆ ನಡೆಯುತ್ತಿತ್ತು) ಬದಲಾಗಿ ಅವರ ಚಿಂತನೆಯ ಕುರಿತ ಹಲವಾರು ಸೆಕೆಂಡರಿ source ಆಧಾರದ ಮೇಲೆ ಚರ್ಚೆ ಮಾಡುತ್ತಿದ್ದೇವೆ. . . ಮೇಲೆ ನೀಡಿರುವ ಲಿಂಕ್ ನಲ್ಲಿನ ವಚನಗಳು ಪ್ರಾಥಮಿಕ ಮಾಹಿತಿಯೇ ಅಲ್ಲಿ ನಡೆದಿದೆ ಎನ್ನಲಾದ ಘಟನೆಗೆ ಜಾತಿ ವ್ಯವಸ್ಥೆ ಕಾರಣ ಎಂದೂ ನಾವು ಅಂದುಕೊಳ್ಳುತ್ತಿದ್ದೇವೆ. ಅದು ಜಾತಿ ತಾರತಮ್ಯ ಇದ್ದ ಸಮಾಜದಲ್ಲಿ ನಡೆದ ಘಟನೆ ಅಷ್ಟೆ.ಆ ರೀತಿಯ ಘಟನೆಗಳು ಈಗಲೂ ನಡೆಯುತ್ತಿವೆ ಪರಿಹಾರ ಏನು? ಜಾತಿ ವ್ಯವಸ್ಥೆ ಇದೆ.ಅದ್ದರಿಂದ ಈ ಘಟನೆ ನಡೆಯುತ್ತಿವೆ ಅದ್ದರಿಂದ ಅದನ್ನು ಇಲ್ಲವಾಗಿಸಬೇಕು ಎಂಬ ನಮ್ಮ ಚಿಂತಕರ ಬಡಬಡಿಕೆ ಅತನ ಅವಮಾನಕ್ಕೆ ಪರಿಹಾರವಾಗುತ್ತವೆಯೇ? ಇಲ್ಲ. ಇದರಿಂದ ಶೋಷಣೆ ಮಾಡಿದವನಿಗೆ ತನ್ನ ತಪ್ಪಿನ ಅರಿವೆ ಆಗದೆ ನಾನೂ ಮಾಡಿದ್ದೆ ಸರಿ ಎಂಬ ಸಮರ್ಥನೆ ಸಿಗುತ್ತದೆ.

ಶೋಷಣೆಗೆ ಒಳಗಾದವನಿಗೆ ನಾನೂ ಈ ಜಾತಿಯಲ್ಲಿ ಹುಟ್ಟಿದ್ದೆ ಇದಕ್ಕೆಲ್ಲ ಕಾರಣ ಅನ್ನುವ ಹತಾಷೇ ಮೂಡುತ್ತದೆ.ಅವನು ಪ್ರಜ್ಞಾವಂತನಾಗಿದ್ದರೆ ತನ್ನ ಮುಂದಿನ ಪೀಳಿಗೆಯನ್ನು ಮೇಲ್ಜಾತಿಗಳ ರೀತಿ ಬೆಳೆಸುತ್ತಾನೆ. ಅಂದರೆ, ಅಮಾಯಕರನ್ನು ಶೋಷಿತರನ್ನಾಗಿಸುತ್ತಾನೆ (ವಿದ್ಯಾವಂತ ಮತ್ತು ನೌಕರ ದಲಿತರನ್ನು ನೊಡಿ ಅರ್ಥವಾಗುತ್ತದೆ) ಸುಮ್ಮನೆ ಯೋಚಿಸಿ, ಜಾತಿವ್ಯವಸ್ಥೆ ಇದೆ ಎಂದೂ ಒಪ್ಪಿಕೊಂಡರೆ ಅದರ ಅಧಾರದ ಮೇಲೆ ದಲಿತರ ಕುರಿತು ಏನೆಲ್ಲಾ ಅಸಹ್ಯ ಹೇಳಿಕೆಗಳು ನೀಡಲ್ಪಟ್ಟಿವೆಯೋ ಅವೆಲ್ಲ ಸತ್ಯವೆ ಆಗಿ ಬಿಡುತ್ತವೆ. . . ಅಲ್ಲವೆ?ಅಂದರೆ, ದಲಿತರು ಕುಲಹಿನರು, ಕೊಳಕರು, ಸಂಸ್ಕಾರ ಹಿನರು ಚಂಡಾಲರು ಒಂದೇ ಮಾತಿನಲ್ಲಿ ಹೇಳುವುದಾರೆ ಮನುಷ್ಯಾಗಿ ಬದುಕುತ್ತಿರುವ ಪ್ರಾಣಿಗಳು ನಾಗರಿಕ ಸಮಾಜದಲ್ಲಿ ನಾಗರಿಕರಂತೆ ಬದುಕಲು ಅರ್ಹತೆ ಇಲ್ಲದವರು ಸ್ವಂತ ಬುದ್ದಿ ಇಲ್ಲದವರು ಪರಾವಲಂಬಿಗಳು ಅದ್ದರಿಂದಲೇ ಅವರು ಈ ಸಮಾಜದ ಮುಖ್ಯವಾಹಿನಿಯಿಂದ ದೂರವಿರಬೇಕು ಇತ್ಯಾದಿ … ವಿವರಣೆಗಳೇ ಜಾತಿ ಶ್ರೇಣಿಕರಣದ ಕೊನೆಗೆ ಅವರನ್ನು ತಳ್ಳಲ್ಪಟ್ಟಿವೆ ಎಂಬ ವಿವರಣೆಗಳೂ ಸರಿಯೇ? ಸೊ ಕಾಲ್ಢ್ ಜಾತಿ ವ್ಯವಸ್ಥೆಯ ಸಿದ್ದಾಂತ ಇವೇ ಕಾರಣಗಳಿಗಾಗಿಯೇ ಅವರನ್ನು ತನ್ನ ಶ್ರೇಣಿಕರಣದ ಕೊನೆಯಲ್ಲಿ ಇಟ್ಟಿದೆ ಅಥವಾ ಹೊರಗೆ ಇಟ್ಟಿದೆ(ಇದಕ್ಕೆ ಸಾವಿರ ಆಧಾರಗಳು ಸಿಗುತ್ತವೆ). . ಜಾತಿ ವ್ಯವಸ್ಥೆ ಇದೆ ಮತ್ತು ಅದರಲ್ಲಿ ದಲಿತರೂ ಕೊನೆಯಲ್ಲಿ ಇದ್ದಾರೆ ಎಂದೂ ಸಾರಿ ಸಾರಿ ಹೇಳುವ ನೀವು ದಲಿತರೂ ಎಕೆ ಅಲ್ಲಿದ್ದಾರೆ ಎಂಬ ಜಾತಿ ಸಿದ್ದಾಂತದ ಮೇಲಿನ ಹೇಳಿಕೆಗಳನ್ನು ಒಪ್ಪಿದಂತೆಯೇ ಅಲ್ಲವೆ. . . . ಅದ್ದರಿಂದ ಇಂದೂ ದಲಿತ ಶೋಷಣೆಗೆ ತಮ್ಮಗಳ (ಜಾತಿ ಸಿದ್ದಾಂತ ಇದೆ ದಲಿತರು ಅಲ್ಲಿ ಕೆಳಗಿದ್ದಾರೆ ) ನಿಲುವು ಸಮರ್ಥನೆ ಒದಗಿಸುತ್ತಿಲ್ಲವೆ.

ನನ್ನ ಪ್ರಕಾರ ಜಾತಿ ವ್ಯವಸ್ಥೆ ಇದೆ ಅಂತ ವಾದಿಸುತ್ತಿರುವವರು ಹಾಗೆ ಅಂದುಕೊಳ್ಳಲೇ ಬೇಕು ಜಾತಿ ವ್ಯವಸ್ಥೆ ಅಂದರೆನೇ “ಶ್ರೇಣೀಕರಣ ಇತ್ತು” ಮತ್ತು “ಅದರಲ್ಲಿ ದಲಿತರು ಕೆಳಗಿದ್ದರು” ಎಂಬ ವೈಜ್ಞಾನಿಕ ವಿವರಣೆ ಎಂದೂ ವಿವರಿಸಿದೆ. ನಂತರ, ಸಾಹಿಲ್ ನನಗೆ ಅಂಬೇಡ್ಕರ್,ಪೂಲೆ ಇವರುಗಳ ಕುರಿತು ಅಭಿಪ್ರಾಯ ಕೇಳಿದರು. ಅದಕ್ಕೆ ನಾನೂ, ಭಾರತದ ಸಂಧರ್ಭದಲ್ಲಿ ಸಮಾಜಿಕ ಸಮಸ್ಯಗಳನ್ನು ಭಿನ್ನವಾಗಿ ನೋಡಿದವರಲ್ಲಿ ಇವರೂ ಪ್ರಮುಖರು.ಅದಕ್ಕೆ ಅವರುಗಳ ಬರವಣಿಗೆಗೆಗಳೇ ಸಾಕ್ಷೀ. ಆದರೆ, ತಾವು ಅನುಭವದಿಂದ ಕಂಡುಕೊಂಡ ಅವಮಾನಗಳಿಗೆ, ಶೋಷಣೆಗಳಿಗೆ ಅವರೂ ಪರಿಹಾರ ಹುಡುಕಿದ್ದು ಮತ್ತದೇ ಯೋರೋಪಿಯನ್ ಸಿದ್ಧಾಂತಗಳಲ್ಲಿ. ಇದೂ ಸಮಸ್ಯೆ ಖಂಡಿತಾ ಆ ಕಾಲದಲ್ಲಿಯೇ ಭಾರತೀಯ ಸಮಾಜದ ಕುರಿತ ಒಂದೂ ಸಾಲಿಡ್ ಸಿದ್ಧಾಂತ ರಚಿಸುವ ಎಲ್ಲಾ ಅವಕಾಶ ಮತ್ತು ಅರ್ಹತೆ ಇದ್ದರೂ ಆ ಕೆಲಸ ಆಗಲಿಲ್ಲ. ಕಾರಣ, ಇಂಗ್ಲೀಷ್ ಶಿಕ್ಷಣ ಮತ್ತು ಅದು ಸೃಷ್ಟಿಸಿದ ಬೌದ್ಧಿಕ ಚೌಕಟ್ಟು ಇರಬಹುದು ಇಲ್ಲಾ ಅಂಬೆಡ್ಕರ್ ಕಾಲಕ್ಕಾಗಲೇ ಭಾರತೀಯ ಜ್ಞಾನ ಎಂಬಂತೆ ರಚಿತವಾಗಿದ್ದ ಕಲೊನಿಯಲ್ ಇತಿಹಾಸವೂ ಕಾರಣವಿರಬಹುದು. . . (ಅಂಬೇಡ್ಕರ್ ತಮ್ಮ ವಾದಕ್ಕೆ ಬಳಸಿದ ಒದು ಇದನ್ನು ಸಮರ್ಥಿಸುತ್ತದೆ) ಇದರ ಅರ್ಥ, ಅಂಬೇಡ್ಕರ್ ಪೂಲೆ ಮುಖ್ಯ ಅಲ್ಲ ಅಂತ ಖಂಡಿತಾ ಅಲ್ಲ.ಅಂದಿನ ಕಾಲದಲ್ಲಿಯೇ, ಸಮಾಜಿಕ ಸಮಸ್ಯೆಗಳನ್ನು ಶೋಷಣೆಗಳನ್ನು ಅಂತ್ಯಂತ ಯಶಸ್ವಿಯಾಗಿ ಗುರುತಿಸಿ ವಿರೋಧಿಸಿದ ಅವರ ನಿಲುವು ಎಂದಿಗೂ ಪ್ರಶಂಶನೀಯ ಮತ್ತು ಮೌಲ್ವಿಕವಾದುದು.ಆದರೆ, ಅವುಗಳ ಪರಿಹಾರಕ್ಕೆ ಅವರೂ ತೋರಿದ ದಾರಿ ಯಶಸ್ವಿಯಾಗಲಿಲ್ಲ ಅದನ್ನೂ ಅಂಬೇಡ್ಕರ್ ಅವರೆ ಒಪ್ಪುತ್ತಾರೆ. . (ಕಲಿತ ದಲಿತರ ಕುರಿತ ತಮ್ಮ ಅಭಿಪ್ರಾಯ ಮತ್ತು ಚುನಾವಣೆಯ ಸೋಲಿನ ಸಮಯದಲ್ಲಿ) ಮತ್ತು ತಾನೂ ತಂದು ನಿಲ್ಲಿಸಿದ ರಥವನ್ನು ಮುಂದಕ್ಕೆ ತರುವ ಯುವಕರನ್ನು ಭವಿಷ್ಯದ ಭಾರತದಲ್ಲಿ ಕಾಣಬಯಸುತ್ತಾರೆ.

ಇದರ ಅರ್ಥ ತಮ್ಮ ಕಾಲದ ಸಂಶೋಧನೆಯನ್ನು ಮುಂದುವರೆಸುವ ಮಾದರಿ ಯುವಪಡೆ ಅವರ ಕನಸಾಗಿತ್ತು ನಿಜಕ್ಕೂ ಹಾಗೆ ಆಗಿದೆಯೇ?ಈಗಿರುವ ಕೆಲವರು ಅಥವಾ ಬಹುಪಾಲು ಜನರು ಅವರ ಅಮೂಲ್ಯ ಚಿಂತನೆಗಳನ್ನು ವಾದಗಳನ್ನು ಕೇವಲ ತಮ್ಮ ರಾಜಕೀಯ ನಿಲುವು ಗಟ್ಟಿಗಳಿಸಿಕೊಳ್ಳಲು ಡಿಫೇನ್ಸಿವ್ ಆಗಿ ಬಳಸುತ್ತಿದ್ದಾರೆ ಇದನ್ನು ನೀವು ಒಪ್ಪುತ್ತಿರ ಎಂಬುದು ನನ್ನ ಭಾವನೆ ಇನ್ನೂ ಸಂಶೋಧನೆ ಮಾಡಲೇ ಬೇಡಿ ಎಂಬ ಹೇರಿಕೆಗಳು ಬೇರೆ ಹೇರುತ್ತಿದ್ದಾರೆ.ನೀವೇ ಯೋಚಿಸಿ ಜಾತಿವ್ಯವಸ್ಥೆ ಇದೆ. ಎಂದೂ ಒಪ್ಪೊಕೊಂಡರೆ ಅದರ ಆಧಾರದ ಮೇಲೆ ದಲಿತರ ಕುರಿತು ಎನೆಲ್ಲಾ ಅಸಹ್ಯ ಹೇಳಿಕೆಗಳು ನೀಡಲ್ಪಟ್ಟಿವೆಯೋ ಅವೆಲ್ಲ ಸತ್ಯವೆ ಆಗಿ ಬಿಡುತ್ತವೆ. . . ಅಲ್ಲವೆ ಅಂದರೆ ದಲಿತರು ಕುಲಹಿನರು, ಕೊಳಕರು, ಸಂಸ್ಕಾರ ಹಿನರು ಚಂಡಾಲರು ಒಂದೇ ಮಾತಿನಲ್ಲಿ ಹೇಳುವುದಾರೆ ಮನುಷ್ಯಾಗಿ ಬದುಕುತ್ತಿರುವ ಪ್ರಾಣಿಗಳು ನಾಗರಿಕ ಸಮಾಜದಲ್ಲಿ ನಾಗರಿಕರಂತೆ ಬದುಕಲು ಅರ್ಹತೆ ಇಲ್ಲದವರು ಸ್ವಂತ ಬುದ್ದಿ ಇಲ್ಲದವರು ಪರಾವಲಂಬಿಗಳು ಅದ್ದರಿಂದಲೇ ಅವರು ಈ ಸಮಾಜದ ಮುಖ್ಯವಾಹಿನಿಯಿಂದ ದೂರವಿರಬೇಕು ಇತ್ಯಾದಿ ಇತ್ಯದಿ. . . ವಿವರಣೆಗಳೇ ಜಾತಿ ಶ್ರೇಣಿಕರಣದ ಕೊನೆಗೆ ಅವರನ್ನು ತಳ್ಳಲ್ಪಟ್ಟಿವೆ ಎಂಬ ವಿವರಣೆಗಳೂ ಸರಿಯೇ? ಸೊ ಕಾಲ್ಢ್ ಜಾತಿ ವ್ಯವಸ್ಥೆಯ ಸಿದ್ದಾಂತ ಇವೇ ಕಾರಣಗಳಿಗಾಗಿಯೇ ಅವರನ್ನು ತನ್ನ ಶ್ರೇಣಿಕರಣದ ಕೊನೆಯಲ್ಲಿ ಇಟ್ಟಿದೆ ಅಥವಾ ಹೊರಗೆ ಇಟ್ಟಿದೆ(ಇದಕ್ಕೆ ಸಾವಿರ ಆಧಾರಗಳು ಸಿಗುತ್ತವೆ). . ಜಾತಿ ವ್ಯವಸ್ಥೆ ಇದೆ ಮತ್ತು ಅದರಲ್ಲಿ ದಲಿತರೂ ಕೊನೆಯಲ್ಲಿ ಇದ್ದಾರೆ ಎಂದೂ ಸಾರಿ ಸಾರಿ ಹೇಳುವ ನೀವು ದಲಿತರೂ ಎಕೆ ಅಲ್ಲದ್ದಾರೆ ಎಂಬ ಜಾತಿ ಸಿದ್ದಾಂತದ ಮೇಲಿನ ಹೇಳಿಕೆಗಳನ್ನು ಒಪ್ಪಿದಂತೆಯೇ ಅಲ್ಲವೆ. . . . ಅದ್ದರಿಂದ ಇಂದೂ ದಲಿತ ಶೋಷಣೆಗೆ ತಮ್ಮಗಳ (ಜಾತಿ ಸಿದ್ದಾಂತ ಇದೆ ದಲಿತರು ಅಲ್ಲಿ ಕೆಳಗಿದ್ದಾರೆ ) ನಿಲುವು ಸಮರ್ಥನೆ ಒದಗಿಸುತ್ತಿಲ್ಲವೆ. . . .ನನ್ನ ಪ್ರಕಾರ ಜಾತಿ ವ್ಯವಸ್ಥೆ ಇದೆ ಅಂತ ವಾದಿಸುತ್ತಿರುವವರು ಹಾಗೆ ಅಂದುಕೊಳ್ಳಲೇ ಬೇಕು ಜಾತಿ ವ್ಯವಸ್ಥೆ ಅಂದರೆನೇ “ಶ್ರೇಣೀಕರಣ ಇತ್ತು” ಮತ್ತು “ಅದರಲ್ಲಿ ದಲಿತರು ಕೆಳಗಿದ್ದರು” ಎಂಬ ವೈಜ್ಞಾನಿಕ ವಿವರಣೆ ಇದನ್ನೂ ಅಲ್ಲಗಳೆಯಲೂ ಸಾಧ್ಯವೇ ಆಧಾರ ಸಮೇತ ವಿವರಿಸಿ.  ಎಂಬ ಪ್ರಶ್ನೆಯನ್ನು ಹಾಕಿದೆ ಚರ್ಚೆ ಸಮಾಪ್ತಿಯಾಯಿತು. . .  ನಂತರ ಮುಂದುವರಿದರೂ ಯಾವ ಉತ್ತಮ ಹೊಳಹುಗಳು ದೊರೆಯಲಿಲ್ಲ.

ಪ್ರೊ.ರಾಜಾರಾಮ ಹೆಗಡೆ ದೇವನೂರರ ಲೇಖನಕ್ಕೆ ಪ್ರತಿಕ್ರಿಯಿಸಿದ್ದಾರೆ)

30 April 2013

* ಡಾ.ಸಂತೋಷ್ ಕುಮಾರ‍್ ಪಿ.ಕೆ

ಪ್ರಜಾವಾಣಿಯಲ್ಲಿ ದೇವನೂರು ಮಹಾದೇವ ರವರು ಬರೆದ ಲೇಖನಕ್ಕೆ ಪ್ರತಿಕ್ರಿಯೆ.

ನನ್ನ ವಿದ್ಯಾರ್ಥಿ ಜೀವನದಿಂದಲೂ ದೇವನೂರು ಮಹಾದೇವ ಎಂಬ ಆದರ್ಶವ್ಯಕ್ತಿಯ ಕುರಿತು ಕೇಳಿದ್ದೆ, ಹಾಗೂ ಕೆಲವೊಮ್ಮೆ ನೋಡುವ ಭಾಗ್ಯವೂ ಒದಗಿತ್ತು. ಕನ್ನಡ ಬಂಡಾಯ ಸಾಹಿತ್ಯ ಮತ್ತು ಸಾಮಾಜಿಕ ಚಳುವಳಿಗಳಲ್ಲಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು, ಶಾಂತಿ ಮತ್ತು ಅಹಿಂಸಾ ಮಾರ್ಗವಾಗಿ ಹೋರಾಡುತ್ತಿರುವುದು ಅವರ ವ್ಯಕ್ತಿತ್ವದ ಆಕರ್ಷಣೆಯಾಗಿದೆ. ಇದಕ್ಕೆ ಮಾರುಹೋದ ಹಲವಾರು ಯುವಸಮುದಾಯಗಳು ಅವರನ್ನು “ಆಧುನಿಕ ಸಂತ” ಎಂಬಂತೆ ಬಿಂಬಿಸುತ್ತವೆ. ಅಷ್ಟು ಶಾಂತಚಿತ್ತ ಮತ್ತು ಧೀಮಂತ ಹೋರಾಟಗಾರೆಂದೆ ಖ್ಯಾತಿ ಪಡೆದ ದೇವನೂರು ರವರು ಏನೇ ಬರೆದರೂ ಅದನ್ನು ಓದಲು ನನ್ನನ್ನೂ ಸೇರಿ ಅಪಾರ ಅಭಿಮಾನಿಗಳ ಬಳಗವೇ ಇದೆ. ವಚನ ಕುರಿತ ಚರ್ಚೆಗೆ ಅವರ ಪ್ರತಿಕ್ರಿಯೆಯನ್ನು ಓದಿದ ಮೇಲೆ ಅವರ ಮೇಲಿದ್ದ ನನ್ನ ಗೌರವ, ನಂಬಿಕೆಗಳು ಆ ಲೇಖನವನ್ನು ಅವರೇ ಬರೆದಿದ್ದಾ ಎಂಬ ಅನುಮಾನವನ್ನು ಮೂಢಿಸಿದೆ. ಅದೇನೇ ಇದ್ದರೂ ದೇವನೂರು ಮಹಾದೇವ ರವರು ಕೆಲವು ತಪ್ಪುನಂಬಿಕೆಗಳ ಹಿನ್ನೆಲೆಯಲ್ಲಿ ಈ ಲೇಖನವನ್ನು ಬರೆದಿದ್ದಾರೆ, ಅವುಗಳನ್ನು ನನ್ನ ಓದಿನ ಮಿತಿಯಲ್ಲಿ ಚರ್ಚಿಸಲು ಬಯಸುತ್ತೇನೆ.

೧. ಲೇಖನದ ಪ್ರಾರಂಭದಲ್ಲಿ  ಒಂದು ಉದಾಹರಣೆಯನ್ನು ನೀಡುವ ಮೂಲಕ ಅಂಕಿ ಸಂಖ್ಯೆಯ ಆಧಾರವಾದ ವಿವರಣೆಯನ್ನು ವಿರೋಧಿಸಿದ್ದಾರೆ: ಅದೆಂದರೆ “ತಾಯಿಯನ್ನು ’ತಾಯಿ” ಎಂದು ಇಷ್ಟು ಸಾರಿ (ಅಂಕಿ ಸಂಖ್ಯೆಗಳ ಲೆಕ್ಕದಲ್ಲಿ) ಕರೆಯದಿದ್ದರೆ ಬಂಜೆ ಎಂದು ಕರೆದು ದಿಗ್ವಿಜಯ ಸಾಧಿಸಿಬಿಡುತ್ತಾರೆ”. ಇಲ್ಲಿ ತೆಗೆದುಕೊಂಡಿರುವ ಉದಾಹರಣೆಯನ್ನು ಮತ್ತೊಂದು ರೀತಿಯಲ್ಲಿ ಇಡಬಹುದು, ಒಲ್ಲೊಬ್ಬರು ಮಹಿಳೆ ಇದ್ದಾರೆ ಹಾಗೂ ಮಗನ ವಯಸ್ಸಿನ ವ್ಯಕ್ತಿಯೊಬ್ಬ ಇದ್ದಾನೆ ಎಂದಿಟ್ಟುಕೊಳ್ಳಿ. ಆಕೆಗೆ ಅಪಾರ ಆಸ್ತಿ ಇದ್ದು ಬೇರೆ ಯಾರೂ ವಾರಸ್ದಾರರು ಇಲ್ಲ ಎಂದಿಟ್ಟುಕೊಳ್ಳುವ, ಅವಳ ಆಸ್ತಿಯನ್ನು ಕಬಳಿಸಲು ಯಾರೋ ಆಕೆಯನ್ನು ಅಮ್ಮ ಅಮ್ಮ ಎಂದು ನೂರು ಸಾವಿರ ಲಕ್ಷ ಬಾರಿ ಕರೆಯುತ್ತಾರೆ ಎಂದಾದರೆ, ಅವರ ನಡುವೆ ಇರುವುದು ತಾಯಿ ಮಕ್ಕಳ ಸಂಬಂಧವೆ? ಅಥವಾ ಬೇರೆ ತರಹದ ಸಂಬಂಧವೆ? ಇಲ್ಲಿ ಆಸ್ತಿಗೋಸ್ಕರ ಆತ ಎಷ್ಟು ಬಾರಿ ತಾಯಿ ಎಂದು ಕರೆದರೂ ಆಕೆ ಆತನಿಗೆ ತಾಯಿಯಾಗಲು ಸಾಧ್ಯವಿಲ್ಲ, ಇದನ್ನು ಪ್ರಮಾಣೀಕರಿಸುವುದು ಹೇಗೆ? ಹೇಗೆಂದರೆ ಅವರ ನಡುವೆ ನಿಜವಾಗಿಯೂ ತಾಯಿ-ಮಗನ ಸಂಬಂಧವಿದೆಯೇ? ಎಂದು ಪರೀಕ್ಷೆ ಮಾಡುವುದು. ಆ ಪರೀಕ್ಷೆಯನ್ನೇ ಮಾಡದೆ ಕೆಲವು ಬಾರಿ ಆತ ಆಕೆಯನ್ನು ತಾಯಿ ಎಂದು ಕರೆದಿದ್ದಾನೆ ಆದ್ದರಿಂದ ಆಕೆ ಆತನ ತಾಯಿಯೇ ಎಂದು ನಿರ್ಣಯಕ್ಕೆ ಬರುವುದು ತೀರಾ ಅವಾಸ್ತವಿಕವಾಗುತ್ತದೆ. ಅಂತೆಯೇ ಜಾತಿ, ಕುಲ ಎಂಬ ಪದಗಳು ವಚನಗಳಲ್ಲಿ ಇದ್ದ ಮಾತ್ರಕ್ಕೆ ಅವುಗಳನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಜಾತಿ ವಿರೋಧ ಎಂದು ನಿರ್ಣಯಕ್ಕೆ ಬರುವುದು ಅವಸರದ ತೀರ್ಮಾನವಾಗುತ್ತದೆ. ಹಾಗೆ ನೋಡಿದರೆ  ಅಂಕಿ ಅಂಶಗಳ ಮೂಲಕ ವಚನಗಳನ್ನು ಅರ್ಥೈಸುವುದು ಮುಖ್ಯವಾದ ಗುರಿ ನಮ್ಮದಲ್ಲ ಹಾಗೂ ಅದರ ಆಧಾರದ ಮೇಲೆಯೇ ವಚನಗಳ ಕುರಿತ ವಾದವೂ ಬೆಳೆದಿಲ್ಲ, ಬದಲಿಗೆ ವಚನಗಳನ್ನು ಸಮಗ್ರವಾಗಿ ನೋಡಿದಾಗ ಹೇಗೆ ಕಾಣುತ್ತದೆ ಎಂಬುದನ್ನು ವಾದಿಸುವ ಸಂದರ್ಭದಲ್ಲಿ ನಗಣ್ಯವಾಗಿ ಅಥವಾ ಅಷ್ಟೇನೂ ಪ್ರಮುಖವಲ್ಲದ ವಿಷಯ ಅದಾಗಿದೆ.

೨. ಆ ಲೇಖನದಲ್ಲಿ ಮತ್ತೊಂದು ಉಪಮೆ ಕೊಡುತ್ತಾರೆ,  ಅದೆಂದರೆ “ಬಡವನೊಬ್ಬ ಸಂತೆಗೆ ಆಡು ಮಾರಲು ಹೊರಟಾಗ ಕಳ್ಳರು ಅವನಿಗೆ ಮಂಕುಬೂದಿ ಎರಚಿ ನಾಯಿ ಎಂದು ನಂಬಿಸಿ ಕಳ್ಳತನ ಮಾಡಿಕೊಂಡು ಹೋಗುತ್ತಾರೆ”. ಇದರ ಅರ್ಥ (ದೇವನೂರು ರವರ ಪ್ರಕಾರವೇ) ಬಾಲುರವರ ಸಂಶೋಧನೆ ಇಲ್ಲಿರುವ ಜನರಿಗೆ ಮಂಕುಬೂದಿ ಎರಚುತ್ತಿದೆ, ಬಾಲು ಬರಹಗಳನ್ನು ಓದಿದ ಮತ್ತು ಓದುತ್ತಿರುವ ಬುದ್ದಿಜೀವಿಗಳು, ಜನಸಾಮಾನ್ಯರು ಇವೆರಲ್ಲರಿಗೂ ಮಂಕು ಕವಿದಿದೆ. ಆದರೆ ವಾಸ್ತವ ಸ್ಥಿತಿ ತೀರಾ ಭಿನ್ನವಾಗಿ ಇದೆ. ವಚನಗಳನ್ನು ಕೆಲವು ಸಂಪ್ರದಾಯಗಳು ಮುಂದುವರೆಸಿಕೊಂಡು ಬಂದಿವೆ, ಅವರು ಮುಂದುವರೆಸಿಕೊಂಡು ಬಂದಿರುವ ವಚನ ಸಂಪ್ರದಾಯಗಳನ್ನು ಜಾತಿವಿರೋಧಿ ಚಳುವಳಿ ಎಂದು ಹೇಳಿ ಮಂಕುಬೂದಿ ಎರಚುತ್ತಿರುವವರು ಯಾರು? ಭಾರತಕ್ಕೆ ಬಂದ ಪಾಶ್ಚಾತ್ಯರು ಅದೊಂದು ಪ್ರಾಟಸ್ಟಂಟ್ ಚಳುವಳಿ ಎಂದು ಹೇಳಿದರು, ಏಕೆಂದರೆ ಹಾಗೆ ಹೇಳಲು ಅವರಿಗೆ ಅವರ ಸಾಂಸ್ಕೃತಿಕ ಹಿನ್ನೆಲೆ, ಮತ್ತು ಕ್ರಿಶ್ಚಿಯಾನಿಟಿಯಲ್ಲಾದ ಸುಧಾರಣಾ ಚಳಿವಳಿಗಳು ಚೌಕಟ್ಟೊಂದನ್ನು ರೂಪಿಸಿಕೊಟ್ಟಿತ್ತು. ಆದರೆ ಅದೇ ವಾದವನ್ನು ಪರೀಕ್ಷಿಸದೆ ಇರುವ ಕೆಲವು ವಚನಗಳನ್ನೇ ಪದೇ ಪದೇ ಹೇಳುವ ಮೂಲಕ ವಚನಗಳನ್ನು ಮುಂದುವರೆಸಿಕೊಂಡು ಬಂದ ಸಂಪ್ರದಾಯಗಳಿಗೆ ಮಂಕುಬೂದಿ ಎರಚಿದರವರು ಯಾರು ಎಂಬುದು ಮೇಲ್ನೋಟಕ್ಕೆ ವೇದ್ಯವಾಗುತ್ತದೆ. ಅಷ್ಟೆ ಅಲ್ಲದೆ ಅದೇ ವಿವರಣೆಯನ್ನು ಎಲ್ಲರೂ ಒಪ್ಪುವಂತೆ ಧಮಕಿ ಹಾಕುವುದು ದೇವನೂರು ಮಹಾದೇವ ರಂತಹ ಚಿಂತಕರಿಂದ ಅನಿರೀಕ್ಷಿತವಾದುದು. ಅಂತೆಯೇ ವಚನಗಳ ಕುರಿತು ಮತ್ತೊಂದು ರೀತಿಯಲ್ಲಿ ಅರ್ಥೈಸಲು ಪ್ರಯತ್ನಿಸಿರುವ ಎಲ್. ಬಸವರಾಜುರವರ ನಿರೂಪಣೆಗಳನ್ನು ಅರ್ಥಮಾಡಿಕೊಳ್ಳುವುದು ಹೇಗೆ?

೩. ಜಾತಿ ಜಾತಿಗಳ ನಡುವೆ ಇರುವ ಮೇಲು ಕೀಳು ಇಲ್ಲವೆಂದು ಬಾಲುರವರು ವಾದಿಸುತ್ತಾರೆಂದು ದೇವನೂರು ರವರು ಹೇಳುತ್ತಾರೆ. ಜಾತಿವ್ಯವಸ್ಥೆ ಇಲ್ಲ ಎಂದಾದರೆ ತಾರತಮ್ಯವೇ ಇಲ್ಲ ಎಂದು ಹೇಳಿದಂತಾಗುವುದಾದರೂ ಹೇಗೆ? ಇಲ್ಲಿ ಜಾತಿ ಆಧಾರಿತ ಮತ್ತು ಜಾತಿಆಧಾರಿತವಲ್ಲದ ತಾರತಮ್ಯಗಳಿವೆ, ಅವುಗಳನ್ನು ಅಲ್ಲಗಳೆಯಲು ಯಾರಿಗೂ ಸಾಧ್ಯವಿಲ್ಲ. ಜಾತಿಆಧಾರಿತ ತಾರತಮ್ಯಗಳು ಎಷ್ಟು ಪ್ರಮುಖವೋ ಜಾತಿರಹಿತ ಅಥವಾ ಜಾತಿಹೊರತಾದ ತಾರತಮ್ಯ ಅನ್ಯಾಯಗಳೂ ಅಷ್ಟೆ ಮುಖ್ಯ. ಇವನ್ನು ಹೋಗಲಾಡಿಲು ಇದೊಂದು ರಾಚನಿಕ ಅನ್ಯಾಯ ಎಂದು ಪರಿಗಣಿಸಿ ರಚನೆಯನ್ನು ಟೀಕಿಸಿದರೆ ಅನ್ಯಾಯ ಸಂಪೂರ್ಣವಾಗಿ(ಅಥವಾ ಅಪೂರ್ಣವಾಗಿ) ಹೋಗಲು ಸಾಧ್ಯವಿಲ್ಲ, ಇದಕ್ಕೆ ಎರಡು ಸಾಧ್ಯತೆಗಳಿವೆ, ೧. ಜಾತಿವ್ಯವಸ್ಥೆಯೇ ಸಾಮಾಜಿಕ ರಚನೆಯಾಗದಿರುವಾಗ ಜಾತಿವ್ಯವಸ್ಥೆಯೇ ಸಾಮಾಜಿಕ ರಚನೆ ಎಂದು ಟೀಕೆ ಮಾಡುವುದರಿಂದ ಇಲ್ಲದೆ ಇರುವ ವ್ಯವಸ್ಥೆಯನ್ನು ಹೋಗಲಾಡಿಸಲು ವ್ಯರ್ಥಪ್ರಯತ್ನ ಮಾಡಿದ ಹಾಗೆ ಆಗುತ್ತದೆ, ಇದಕ್ಕೆ ಕಳೆದ ೬೦ ವರ್ಷಗಳಲ್ಲಿ ಶೋಷಿತ ಸಮುದಾಯಗಳ ಮೇಲೆ ಕಡಿಮೆಯಾಗದ ದಬ್ಬಾಳಿಕೆಗಳೇ ನಿದರ್ಶನಗಳಾಗಿವೆ, (ಖೈರ್ಲಾಂಜಿ, ಕಂಬಾಲಪಲ್ಲಿ). ಜಾತಿಯ ತಾರತಮ್ಯಗಳನ್ನು ನಿರ್ದಿಷ್ಟವಾಗಿ ಗುರುತಿಸಿ ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಾಗುತ್ತದೆ, ಅದು ಮೇಲ್ಜಾತಿಯವರಿರಲಿ ಅಥವಾ ಕೆಳಜಾತಿಯವರಿರಲಿ. ೨. ಈ ಮೊದಲೇ ಹೇಳಿದಂತೆ ಜಾತಿಯ ಹೊರತಾದ ಶೋಷಣೆ, ತಾರತಮ್ಯಗಳೂ ಭಾರತದಲ್ಲಿ ಇವೆ, ಕೇವಲ ಜಾತಿವ್ಯವಸ್ಥೆಯಿಂದ ಮಾತ್ರ ಅನ್ಯಾಯ ಆಗುತ್ತಿದೆ ಎಂದು ಹೇಳುವುದರಿಂದ ಜಾತಿಯ ಹೊರತಾಗಿ ನಡೆಯುತ್ತಿರುವ ಅನ್ಯಾಯಗಳನ್ನು ಗುರುತಿಸುವಲ್ಲಿ ಸೋಲುತ್ತೇವೆ. ಹಾಗೆಯೇ ಸಮಾಜದಲ್ಲಿರುವ ಶೋಷಣೆಗಳನ್ನು ಪರಿಹರಿಸಲು ಜಾತಿ ಚೌಕಟ್ಟೊಂದೇ ಸಾಕು ಎಂಬುದರ ಅರ್ಥ ಜಾತಿ ಹೊರತಾದ ಅನ್ಯಾಯಗಳು ಮುಖ್ಯವಲ್ಲ ಎಂಬುದೇ ಆಗಿರುತ್ತದೆ. ಆದ್ದರಿಂದ ಸಮಾಜದಲ್ಲಿರುವ ಎಲ್ಲಾ ರೀತಿಯ ಅನ್ಯಾಯ ಶೋಷಣೆಗಳನ್ನು ಹೋಗಲಾಡಿಸುವಲ್ಲಿ ಈ ಜಾತಿವ್ಯವಸ್ಥೆ ಸಿದ್ಧಾಂತ ಸೋಲುತ್ತದೆ. ಜೊತೆಗೆ ಮಾನವೀಯ ಸಂಬಂಧಗಳಲ್ಲಿ ಹುಟ್ಟುವ ಹಲವಾರು ಸಮಸ್ಯೆಗಳನ್ನು ಜಾತಿಸಮಸ್ಯೆಯನ್ನಾಗಿ ಬದಲಾಯಿಸುತ್ತದೆ. ಹಾಗಾಗಿ ಎಲ್ಲಾ ರೀತಿಯ ಅನ್ಯಾಯಗಳು ತೊಲಗಿ ಉತ್ತಮ ಸಮಾಜದ ಅಗತ್ಯವಿಲ್ಲ ಕೆಲವು ರೀತಿಯ ಶೋಷಣೆಗಳು ಮಾತ್ರ ತೊಲಗಲಿ ಎಂಬುದು ದೇವನೂರು ಮಹಾದೇವರವರ ಆಶಯ ಅಲ್ಲ ಎಂದು ನಂಬುತ್ತೇನೆ.

ಮೊತ್ತೊಂದು ವಿಷಯ, ವರ್ಣಬೇದ ಈ ಜಗತ್ತು ಕಂಡ ಘನ ಘೋರ ಅನ್ಯಾಯ, ಅದು ಪಾಶ್ಚಿಮಾತ್ಯ ರಾಷ್ಟದಲ್ಲಿ ಸಾಮಾಜಿಕ ರಚನೆಯ ಸಮಸ್ಯೆ ಎಂದು ಪರಿಗಣಿಸದೆ ಅದನ್ನು ಪರಿಹರಿಸುವತ್ತ ಹೆಚ್ಚಿನ ಗಮನ ಹರಿಸಿ ಯಶಸ್ವಿಯಾದರು.. ಆದರೆ ಇಲ್ಲಿ ಜಾತಿ ತಾರತಮ್ಯಗಳನ್ನು ರಚನಾತ್ಮಕ ಎಂದು ಪರಿಗಣಿಸಿ ದಿನೇ ದಿನೇ ಅದು ಕಡಿಮೆಯಾಗುವ ಸಾಧ್ಯತೆಯನ್ನು ದೂರವಿಡುವಂತೆ ಕಾಣುತ್ತಿದೆ. ಆದ್ದರಿಂದಲೆ ಇಂತಹ ಅನ್ಯಾಯಗಳನ್ನು ಪರಿಹರಿಸಲು ರಾಚನಿಕ ಎಂದು ಪರಿಗಣಿಸುವ ಬದಲು ಅದೊಂದು ಶೋಷಣೆ ಎಂದು ಪರಿಗಣಿಸಬೇಕಾಗಿದೆ. ಶೋಷಣೆ ಎಂದು ಪರಿಗಣಿಸಿದ್ದರೂ ಸಹ ಅದರ ಮೂಲ ಜಾತಿವ್ಯವಸ್ಥೆ ಎಂದು ತಪ್ಪಾಗಿ ಭಾವಿಸಲಾಗಿದೆ. ಇಲ್ಲಿ ನಮ್ಮ ಪ್ರಶ್ನೆ, ಶೋಷಣೆಯನ್ನು ಹೋಗಲಾಡಿಸುವುದು ಮುಖ್ಯವೋ ಅಥವಾ ಇಲ್ಲದ ಮೂಲವನ್ನು ಹುಡುಕಿಕೊಂಡು ಹೋಗುವುದು ಮುಖ್ಯವೋ? ಅದರ ಮೂಲ ಎಂದು ಗುರುತಿಸಿರುವ ಸಂಗತಿಯ ಬಗ್ಗೆ ಇನ್ನೂ ೧೦೦ ವರ್ಷ ಹಾಗೆಯೇ ಮುಂದುವರೆದು ಇರುವ ಶೋಷಣೆಯನ್ನು ಹೆಚ್ಚಿಸುವುದು ಮುಖ್ಯವೋ? ಇದನ್ನು ಬಾಲುರವರು ಸಂಶೋಧನೆಯ ಮೂಲಕ ಹೇಳಿದರೆ ಅದು ತೀರ ಮುಳ್ಳು ಚುಚ್ಚಿಸಿಕೊಂಡವರಂತೆ ಅಲವತ್ತುಕೊಳ್ಳುವುದು ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ಸಂಶೋಧಕರಿಗೂ ಇತರರಿಗೆ ಇರುವಂತೆ ಸಾಮಾಜಿಕ ಕಾಳಜಿ ಇದ್ದೇ ಇರುತ್ತದೆ. ಅನ್ಯಾಯ, ಶೋಷಣೆಗಳನ್ನು ಹೋಗಲಾಡಿಸಲು ಒಬ್ಬರು ಕಂಡುಕೊಂಡ ಪರಿಹಾರ ಮಾರ್ಗ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದೆನಿಸಿದರೆ ಮತ್ತೊಬ್ಬರು ಮತ್ತೊಂದು ಮಾರ್ಗವನ್ನು ಕಂಡುಕೊಳ್ಳುವಲ್ಲಿ ತಪ್ಪೇನಿದೆ? ಇಂತಹ ಮಾರ್ಗವನ್ನೇ ಕಂಡುಕೊಳ್ಳಬಾರದು ಎಂಬ ಕಟ್ಟಪ್ಪಣೆ ಮಹಾದೇವರಂತವರಿಂದ ಬರತಕ್ಕದ್ದಲ್ಲ. ಅದರ ಬದಲಿಗೆ ನಿಮ್ಮ ಪರಿಹಾರ ಮಾರ್ಗ ನಮ್ಮ ಮಾರ್ಗಕ್ಕಿಂತ ಹೇಗೆ ಹೆಚ್ಚು ಸಮಂಜಸ ಎಂದು ಚರ್ಚೆಮಾಡಬಹುದಿತ್ತು. ಇದುವರೆಗಿನ ಪರಿಹಾರ ಮಾರ್ಗವನ್ನು ನಾನು ಅರ್ಥೈಸಿಕೊಂಡಿರುವಂತೆ ಅದನ್ನು  ದೇವನೂರು ರವರ ಭಾಷೆಯಲ್ಲೇ ಹೇಳುವುದಾದರೆ ಇಲಿಯನ್ನು ಹಿಡಿದು ಗುಡ್ಡ ತೆಗೆಯುತ್ತಿದ್ದಾರೆ. ಇಲಿ ತೆಗೆಯುವ ಬದಲು ಗುಡ್ಡವನ್ನು ತೆಗೆಯುವ ಮಹಾತ್ಕಾರ್ಯಕ್ಕೆ ಕೈಹಾಕಿದ್ದಾರೆ. (ಇಲ್ಲಿ ಇಲಿ ಎಂದರೆ ತಾರತಮ್ಯ ಹಾಗೂ ಗುಡ್ಡ ಎಂಬುದು ಇಡೀ ಭಾರತೀಯ ಸಂಸ್ಕೃತಿ)

೪. ಕಣ್ಣೆದುರು ಕಾಣುತ್ತಿರುವ ಸತ್ಯವನ್ನು ನಿಜವಾಗಿಯೂ ಯಾರು ಮರೆಮಾಚುತ್ತಿದ್ದಾರೆ? ದೇವನೂರುರವರಾ ಅಥವಾ ಬಾಲುರವರಾ? ಒಂದೊಮ್ಮೆ ದೇವನೂರು ರವರು ಹೇಳುವ ಹಾಗೆ ನಮ್ಮ ಸಮಾಜ,  ಸಂಸ್ಕೃತಿ ಕೇವಲ ತಾರತಮ್ಯ ಮಾಡಿಕೊಂಡು ಬಂದಿರುವುದೇ ಹೌದಾದರೆ ಈ ಮುಂದಿನ ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗುತ್ತದೆ: ೧. ಇಲ್ಲಿ ಯಾರ ನಡುವೆಯೂ ಮಾನವೀಯ ಸಂಬಂಧವೇ ಇದ್ದಿಲ್ಲ  ಎಂದಾದರೆ ಒಂದು ಸಮಾಜವಾಗಿ ಅಥವಾ ಹಲವು ಸಮಾಜಗಳಾಗಿ ಇಲ್ಲಿಯವರೆಗೂ ಬದುಕಿ ಬಂದಿರಲು ಹೇಗೆ ಸಾಧ್ಯ? ಹಾಗೂ ಕೇವಲ ಅನ್ಯಾಯ ತಾರತಮ್ಯ ಮಾಡಿಕೊಂಡೇ ಶತಮಾನಗಳ ಕಾಲ ಒಂದು ಸಮಾಜ ನಡೆದು ಬರುತ್ತದೆ ಎಂದರೆ ಅದಕ್ಕಿಂತ ಪರಮಾಶ್ಚರ್ಯವಾದ ವಿಷಯ ಮತ್ತೊಂದಿಲ್ಲ, ಒಂದೊಮ್ಮೆ ಹಾಗೆ ಮಾಡಿಕೊಂಡು ಬಂದರೆ ಯಾವ ಸಮಾಜವೂ ಇಲ್ಲಿಯವರೆಗೆ ಬದುಕಿರಲು ಸಾಧ್ಯವೇ ಇಲ್ಲ.

೫. ಜಾತಿವ್ಯವಸ್ಥೆ ಇಲ್ಲ ಎಂದರೆ ಜಾತಿಗಳನ್ನು ನಾಶಮಾಡಿ ಉಪಜಾತಿಗಳಿಂದ ಕೂಡಿದ ಭಾರತವನ್ನು ಕಟ್ಟಬೇಕೆಂದು ಬಾಲು ತಂಡ ವಾದಿಸುತ್ತದೆ ಎಂದು ದೇವನೂರು ರವರು ಆರೋಪಿಸುತ್ತಾರೆ. ಜಾತಿ ಮತ್ತು ಉಪಜಾತಿಯ ಸಂಕೀರ್ಣ ಸಂಬಂಧದ ಕುರಿತು ಜಾತಿವ್ಯವಸ್ಥೆಯ ಸಿದ್ಧಾಂತ ತನ್ನ ವಾದವನ್ನು ಮಂಡಿಸುತ್ತದೆ. ಅಂದರೆ ಜಾತಿವ್ಯವಸ್ಥೆಯ ಅಸ್ತಿತ್ವಕ್ಕೆ ಜಾತಿ ಮತ್ತು ಉಪಜಾತಿ ಗಳ ನಡುವಿನ ಸಂಬಂಧ ಮುಖ್ಯವಾದವು ಎಂಬಂತೆ ಆ ಸಿದ್ಧಾಂತಗಳು ತಿಳಿಸುತ್ತವೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಜಾತಿವ್ಯವಸ್ಥೆ ಇರದಿದ್ದರೆ ಜಾತಿ ಉಪಜಾತಿಗಳ ಸಂಬಂಧದ ಪ್ರಶ್ನೆಯೇ ಏಳುವುದಿಲ್ಲ. ಹಾಗೆ ನೋಡಿದರೆ ಉಪಜಾತಿಗಳು ಎಂಬ ಪ್ರಭೇದದ ಅಸ್ತಿತ್ವವೇ ಇಲ್ಲವಾಗಿಬಿಡುತ್ತದೆ, ಹಾಗೆಂದ ಮೇಲೆ ಬಾಲು ರವರು ಅವುಗಳ ಅಸ್ತಿತ್ವವನ್ನೇ ಅನುಮಾನದಲ್ಲಿಟ್ಟಿರುವಾಗ ಉಪಜಾತಿಗಳಿಂದ ಕೂಡಿದ ಭಾರತವನ್ನು ಕಟ್ಟಲು ಹೊರಟಿದ್ದಾರೆ ಎಂಬ ವಾದವನ್ನು ಮಂಡಿಸಲು ಹೇಗೆ ಸಾಧ್ಯ? ಜಾತಿವ್ಯವಸ್ಥೆ ಇಲ್ಲ ಜಾತಿ ಇದೆ ಎಂದು ಹೇಳುತ್ತಿರುವುದನ್ನು ದೇವನೂರು ರವರು ಸ್ವತಃ ನಮೂದಿಸುತ್ತಾರೆ, ಆದರೆ ಜಾತಿ ಇದೆ ಎಂದ ಮಾತ್ರಕ್ಕೆ ಉಪಜಾತಿಗಳೂ ಇವೆ ಎಂಬ ಅರ್ಥವನ್ನು ಅದು ಹೊರಡಿಸುವುದಿಲ್ಲ. ಜಾತಿವ್ಯವಸ್ಥೆಯ ಸಿದ್ಧಾಂತಕ್ಕೆ ಉಪಜಾತಿಗಳ ವರ್ಗೀಕರಣ ಮುಖ್ಯವಾಗುತ್ತದೆಯೇ ಹೊರತು ಆ ಸಿದ್ಧಾಂತವನ್ನು ವಿರೋಧಿಸಲು ಅಲ್ಲ, ಹಾಗೆ ನೋಡಿದರೆ ಆ ಸಿದ್ಧಾಂತವನ್ನು ವಿರೋಧಿಸುವುದು ಉಪಜಾತಿ ವರ್ಗೀಕರಣವನ್ನೂ ಸಹ ವಿರೋಧಿಸಿದಂತೆಯೇ ಆಗುತ್ತದೆ. ಮತ್ತೊಂದು ವಿಷಯವೆಂದರೆ ಬಾಲುರವರು ಜಾತಿ ನಾಶವಾಗಬೇಕು ಅಥವಾ ಇರಬೇಕು ಎಂಬಂತಹ ನಿರ್ಣಾಯಕ ವಾದವನ್ನು ನನಗೆ ತಿಳಿದಿರುವ ಮಟ್ಟಿಗೆ ಎಲ್ಲಿಯೂ ಮಂಡಿಸಿಲ್ಲ, ಹಾಗೆಯೇ ಉಪಜಾತಿಗಳು ಇರಬೇಕು ಎಂದೂ ಸಹ ಹೇಳಿಲ್ಲ. ಆದ್ದರಿಂದ ಬಾಲುರವರನ್ನು ಟೀಕಿಸುವವರು ಅವರ ಬರಹಗಳನ್ನು ಸರಿಯಾಗಿ ಓದದೆ, ತಿರುಚಿ ಮಾತನಾಡುತ್ತಿದ್ದಾರೆ ಈ ಕಾರಣಕ್ಕೆ ಬಾಲುರವರ ಕುರಿತು ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕೆ ಎಂಬ ಅನುಮಾನ ಬರುತ್ತದೆ. ಇನ್ನು ಆಚರಣೆಗಳು ಮತ್ತು ಉಪಜಾತಿಗಳ ನಡುವೆ ಏನು ಸಂಬಂಧ ಎಂದೂ ಸಹ ಮಹಾದೇವ ರವರು ಎಲ್ಲಿಯೂ ವಿವರಿಸಿಲ್ಲ. ನನ್ನ ಪ್ರಕಾರ ಅವೆರಡಕ್ಕೂ ಯಾವ ಸಂಬಂಧವೂ ಇಲ್ಲ, ಅಂದರೆ ಒಂದು ಆಚರಣೆಯನ್ನು ಮಾಡಿಕೊಂಡು ಹೋಗುವುದಕ್ಕೂ ಒಂದು ಜಾತಿ ಅಸ್ತಿತ್ವಕ್ಕೆ ಬರುವುದಕ್ಕೂ ಏನು ಸಂಬಂಧವಿದೆ ಎಂದು ಇದುವರೆಗೂ ಯಾರೂ ವಿವರಿಸಿಲ್ಲ.

೬. ಭಾರತದಲ್ಲಿ ಧರ್ಮಗಳು ಇರಬಾರದು ಎನ್ನುವುದು ಬಾಲು ರವರ ಹುನ್ನಾರ ಎಂದು ಮಹಾದೇವರ ರವರ ಮತ್ತೊಂದು ಆರೋಪ. ಆದರೆ ಬಾಲು ತಮ್ಮ ಹೀದನ್ ಇನ್ ಹಿಸ್ .. ಪುಸ್ತಕದಲ್ಲಿ ಭಾರತದಲ್ಲಿ ಧರ್ಮವಿರಬಾರದು ಎಂದು ವಾದಿಸಿಲ್ಲ, ಬದಲಿಗೆ ರಿಲಿಜನ್ ಎಂದು ಕರೆಯುವಂತಹ ವಿದ್ಯಮಾನ ಭಾರತದಲ್ಲಿ ಇಲ್ಲ, ಇಲ್ಲಿರುವುದು ಸಂಪ್ರದಾಯ ಎನ್ನುತ್ತಾರೆ. ಹಾಗೆಯೇ ರಿಲಿಜನ್ ನ್ನು ಧರ್ಮ ಎಂದು ತಪ್ಪಾಗಿ ಅನುವಾದ ಮಾಡಿಕೊಂಡು ಬಳಸುತ್ತಿದ್ದೇವೆ. ಹಾಗೂ ನಮ್ಮ ಧರ್ಮಕ್ಕೆ ಬೇರೆ ಬೇರೆಯದೇ ಅರ್ಥಗಳಿವೆ, ಅವುಗಳನ್ನು ರಿಲಿಜನ್ ಅಂದು ಅರ್ಥೈಸಲು ಸಾಧ್ಯವಿಲ್ಲ. ಹಾಗಾಗಿ ರಿಲಿಜನ್ ಮತ್ತು ಧರ್ಮ ಇವೆರಡೂ ಒಂದೇ ಅಲ್ಲ. ಒಂದೊಮ್ಮೆ ಬಾಲು ಧರ್ಮದ ಐಕ್ಯತೆಯನ್ನು ಒಡೆಯುತ್ತಿದ್ದಾರೆ, ಧರ್ಮ ಇರಬಾರದು ಎಂದು ಹೇಳುತ್ತಿದ್ದಾರೆ ಎಂದು ದೇವನೂರುರವರು ಹೇಳುತ್ತಿರುವುದನ್ನು ಈ ಮುಂದಿನಂತೆ ಅರ್ಥಮಾಡಿಕೊಳ್ಳಬಹುದೆ: ಭಾರತದಲ್ಲಿ ರಿಲಿಜಿಯನ್ ಇರಬೇಕು, ರಿಲಿಜಿಯನ್ ಐಕ್ಯತೆ ಇರಬೇಕು ‌ಎಂದು ಮಹಾದೇವರವರು ವಾದಿಸುತ್ತಿರಬಹುದೆ? ಒಂದೊಮ್ಮೆ ಹೀಗೆ ವಾದಿಸುತ್ತಿದ್ದಾರೆಂದರೆ ಹಿಂದುತ್ವವನ್ನು ಅವರು ವಿರೋಧಿಸಲು ಹೇಗೆ ಸಾಧ್ಯ? ಹಿಂದೂಯಿಸಂ ಎಂಬ ರಿಲಿಜನ್ ಇಲ್ಲವೆಂದು ಬಾಲುರವರು ಹೇಳಿದರೆ ಅವರು ಬಲಪಂಥೀಯ ಎಂಬ ಆರೋಪ ಬರುತ್ತದೆ, ಆದರೆ ದೇವನೂರುರವರು ಧಾರ್ಮಿಕ ಐಕ್ಯತೆ ಬೇಕು ಎಂದು ಮಾತನಾಡುತ್ತಾರೆ, ಆದರೂ ಅವರು ಬಲಪಂಥೀಯರಾಗುವುದಿಲ್ಲ, ಈ ವಿರೋಧಾಬಾಸವೇ ನನಗೆ ಅರ್ಥವಾಗುತ್ತಿಲ್ಲ. ಆದ್ದರಿಂದ ಬಾಲು ರವರು “ರಿಲಿಜನ್” ಬಗ್ಗೆ ಏನು ಹೇಳುತ್ತಿದ್ದಾರೆಂದು ಅಪಾರ್ಥ ಮಾಡಿಕೊಂಡು ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಘನವ್ಯಕ್ತಿತ್ವ ಹೊಂದಿರುವಂತಹ ದೇವನೂರುರವರಿಗೆ ತಕ್ಕುದಾದುದಲ್ಲ.

೭. ಲೋಕದ ಡೊಂಕ ನೀವೇಕೆ ತಿದ್ದಿವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ ನಮ್ಮ ಕೂಡಲಸಂಗಮದೇವಾ…ಈ ವಚನವನ್ನು ದೇವನೂರು ರವರು ಸರಿಯಾಗಿ ಅರ್ಥೈಸುತ್ತಿದ್ದೇನೆಂದು ಈ ಮುಂದಿನಂತೆ ಹೇಳುತ್ತಾರೆ: “ಲೋಕದ ಡೊಂಕ ನೀವೇಕೆ ತಿದ್ದುವಿರಿ ಎನ್ನುವುದರಲ್ಲಿ ಲೋಕದ ಡೊಂಕು ನಿಮ್ಮಲ್ಲೂ ಇದೆ ಅದನ್ನು ತಿದ್ದಿಕೊಳ್ಳಿ, ಆಗ ಲೋಕದ ಡೊಂಕು ಅದಾಗಿಯೇ ಅಳಿಸಿಹೋಗುತ್ತದೆ.. ಆದರೆ ಲೋಕದ ಡೊಂಕು ನಿಮ್ಮಲ್ಲೂ ಇದೆ ಮತ್ತು ನಿಮ್ಮಲ್ಲೇ ಇದೆ ಎಂದು ಹೇಳುವ ವಿಧಾನದಲ್ಲಿ ವ್ಯತ್ಯಾಸವಿದೆ. ನಿಮ್ಮಲ್ಲೂ ಆ ಡೊಂಕು ಇದೆ ಎಂಬುದರ ಅರ್ಥ ಲೋಕದಲ್ಲಿರುವ ಡೊಂಕು ಅಥವಾ ಅದರ ಪ್ರಭಾವ ನಿಮ್ಮಲ್ಲೂ ಬೇರೂರಿದೆ ಎಂದಾಗುತ್ತದೆ, ಆದರೆ ನಿಮ್ಮಲ್ಲೇ ಇದೆ ಎಂದರೆ, ಲೋಕದಲ್ಲಿ ಏನಿದಿಯೋ ತಿಳಿಯದು ಆದರೆ ಅಲ್ಲಿ ಡೊಂಕಿದೆ ಎಂಬ ತೀರ್ಮಾನ ನಿಮ್ಮ ತಲೆಯಲ್ಲಿ ಇದೆ ಎಂದಾಗುತ್ತದೆ. ಹಾಗಾದರೆ ವಚನಕಾರರು ಇಲ್ಲಿ ಯಾವುದನ್ನು ಹೇಳುತ್ತಿದ್ದಾರೆ. ಖಂಡಿತವಾಗಿಯೂ ಬಸವಣ್ಣನವರು ಈ ವಚನದಲ್ಲಿ ಎರಡನೆಯ ಅರ್ಥವನ್ನು ಹೇಳುತ್ತಿದ್ದಾರೆ. ಅದನ್ನು ಮತ್ತೂ ಸ್ಪಷ್ಟ ಪಡಿಸುವಂತೆ ಅದೇ ವಚನದ ಕೊನೆಯ ಸಾಲುಗಳು ನೆರಮನೆಯ ದುಖಕ್ಕೆ ಅಳಬೇಡಿ ಎಂದೂ ಸಹ ಹೇಳುತ್ತಾರೆ, ಅದರ ಅರ್ಥವೇನು? ಈ ಲೋಕದ ಜಂಜಾಟಕ್ಕೆ ಕಿವಿಗೊಡಬೇಡಿ, ಕೂಡಲ ಸಂಗಮನನ್ನು ಆರಾಧಿಸಿ ಎಂಬ ಅರ್ಥವನ್ನು ನೀಡುತ್ತಿಲ್ಲವೆ? ನಿಮ್ಮನ್ನು ನೀವು ಅರಿತುಕೊಳ್ಳುವುದು ಬಿಟ್ಟು ಜಗತ್ತಿನ ವ್ಯವಹಾರಕ್ಕೆ ಮಾರುಹೋದರೆ ಶರಣರಾಗಿರುವವರಿಗೆ ಕೂಡಲ ಸಂಗಮ ಮೆಚ್ಚುವುದಿಲ್ಲ ಎಂಬ ಅರ್ಥವನ್ನು ಅವರು ಹೇಳುತ್ತಿಲ್ಲವೆ? ಹೆಗಡೆಯವರ ಲೇಖನವೂ ಸಹ ಈ ವಚನವನ್ನು ಹೀಗೆಯೇ ಅರ್ಥಮಾಡಿಕೊಂಡಿರುವುದು. ಲೋಕದಲ್ಲಿ ಡೊಂಕು ಇದೆ ಎಂದು ಭಾವಿಸಿ ನರಳಬೇಡಿ, ಆ ಡೊಂಕು ಇರುವುದು ನಿಮ್ಮಲ್ಲಿ ಅದನ್ನು ಸರಿಪಡಿಸಿಕೊಳ್ಳಿ ಎಂದು, ಹಾಗಾದರೆ ಲೋಕದ ಡೊಂಕು ಅದಾಗಿಯೇ ಸರಿಯಾಗುತ್ತದೆ ಎಂದು ವಚನಕಾರರು ಎಲ್ಲಿ ಹೇಳಿದ್ದಾರೆ? ಅದನ್ನು ಸುಮ್ಮನೆ ಕಲ್ಪಿಸಿಕೊಂಡು ಹೇಳುವ ಅಗತ್ಯವಾದರೂ ಏನಿದೆ? ವಚನಗಳಲ್ಲಿ ಏನನ್ನು ಹೇಳಲಾಗಿದೆಯೋ ಅದನ್ನು ಅರ್ಥೈಸುವುದು ಬಿಟ್ಟು ನಾವು ನಂಬಿಕೊಂಡಿರುವ ಐಡಿಯಾಲಜಿಯನ್ನು ಏಕೆ ವಚನಗಳ ಮೇಲೆ ಹೇರಬೇಕು?

ಹಾಗೆಯೇ ಮತ್ತೊಂದು ವಚನವನ್ನೂ ಉಲ್ಲೇಖಿಸಬಹುದು, ಪರಚಿಂತೆ ಎಮಗೇಕಯ್ಯ?ನಮ್ಮ ಚಿಂತೆ ನಮಗೆ ಸಾಲದೆ? ಕೂಡಲ ಸಂಗಯ್ಯ ಒಲಿದನೋ ಒಲಿಯನೋ ಎಂಬ ಚಿಂತೆ ಹಾಸಲುಂಟು ಹೊದೆಯಲುಂಟು. ಇದನ್ನು ಹೇಗೆ ಅರ್ಥೈಸುತ್ತೀರಿ?

ಇಲ್ಲಿ ದೇವನೂರು ರವರು ಪರ ಚಿಂತೆ ಎಮಗೇಕಯ್ಯ..ವಚನವನ್ನು ಹೇಗೆ ಅರ್ಥೈಸುತ್ತಾರೆಂಬುದು ಕುತೂಹಲಕಾರಿಯಾದ ಸಂಗತಿಯಾಗಿದೆ.

೮. Performative knowledge ಅಥವಾ ಕ್ರಿಯಾಜ್ಞಾನವನ್ನು ಮಹಾದೇವ ಎಷ್ಟು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಬಾಲು ಹೇಳುವುದು ಈ ಮುಂದಿನಂತೆ: ಭಾರತದಲ್ಲಿರುವ ಸಮುದಾಯಗಳು ಬದುಕಲು ಅಗತ್ಯವಿರುವ ಜ್ಞಾನವನ್ನು ಕ್ರಿಯೆಯಲ್ಲಿ ತೊಡಗಿಸಿಕೊಂಡೇ ಕಲಿಯುತ್ತವೆ, ಕ್ರಿಯೆಯನ್ನು ಮಾಡುತ್ತಾ ಮಾಡುತ್ತಾ ಜ್ಞಾನವನ್ನು ಕಟ್ಟಿಕೊಳ್ಳುವ ವಿಧಾನ ಇದಾಗಿದೆ. ಇದು ಭಾರತದಲ್ಲಿ ಪ್ರಧಾನವಾಗಿದೆ, ಹಾಗೆಯೇ ಮತ್ತೊಂದೆಡೆ ಸೈದ್ಧಾಂತಿಕ ಜ್ಞಾನವೂ ಇದೆ ಅದು ಪಾಶ್ಚಿಮಾತ್ಯರಲ್ಲಿ ಪ್ರಧಾನವಾಗಿದ್ದು ಅವರಲ್ಲಿ ಕ್ರಿಯಾಜ್ಞಾನ ಅಧೀನ ವಾಗಿರುತ್ತದೆ ಎಂಬುದು ಬಾಲುರವರ ವಾದ. ಇಷ್ಟು ಸರಳವಾಗಿ ಇಡಲು ಸಾಧ್ಯವಿಲ್ಲ ಆದರೂ ಪ್ರಯತ್ನಿಸಿದ್ದೇನೆ.. ಆದ್ದರಿಂದ, ಕ್ರಿಯಾಜ್ಞಾನವೆಂದರೆ ಸತಿಪದ್ದತಿ, ನರಬಲಿ ಎಂಬಂತಹ ಆಚರಣೆಗಳಿಗೆ ಇಳಿಸಿ ಹೊಸ ರೀತಿಯ ಅರ್ಥವನ್ನು ದೇವನೂರು ರವರು ನೀಡುತ್ತಿದ್ದಾರೆ. ಹಾಗಾದರೆ ಇಡೀ ಭಾರತದಲ್ಲಿ ಸತಿ, ಮತ್ತು ಅಂತಹ ಅಮಾನುಷ ಆಚರಣೆಗಳು ಮಾತ್ರ ಇದ್ದವೆ? ಅದಕ್ಕಿಂತ ಹೊರತಾದ ಯಾವ ಆಚರಣೆಗಳೂ ಇರಲಿಲ್ಲವೆ? ಪ್ರತಿಯೊಂದು ಸಮಾಜದಲ್ಲಿಯೂ ಆದರ್ಶಯುತವಾದ ಮೌಲ್ಯಗಳು ಹಾಗೂ ಅದಕ್ಕೆ ವಿರುದ್ಧವಾದ ಚಟುವಟಿಕೆಗಳು ಇದ್ದೇ ಇರುತ್ತವೆ. ಅಂತೆಯೇ ಭಾರತದಲ್ಲಿಯೂ ಅಂತಹ ಅಮಾನುಷ ಆಚರಣೆಗಳು ಇದ್ದವು ತದನಂತರ ಅವುಗಳ ತೊಂದರೆಯನ್ನು ಮನಗಂಡು ಅವುಗಳನ್ನು ಬಿಟ್ಟರು. ಹಾಗೆಂದು ಆ ಎರಡು ಆಚರಣೆಗಳು ಮಾಯವಾದ ತಕ್ಷಣ ಎಲ್ಲವೂ ಅತ್ಯತ್ತಮವಾದ ಆಚರಣೆಗಳೇ ಇಲ್ಲಿವೆ ಎಂಬುದಾಗಿಯೂ ಹೇಳಲು ಸಾಧ್ಯವಿಲ್ಲ, ಅಲ್ಲಲ್ಲಿ ಇರುವ ಹುಳುಕುಗಳನ್ನು ಸರಿಮಾಡಿಕೊಂಡು ಸಮಾಜ ಮುಂದುವರೆದುಕೊಂಡು ಹೋಗುತ್ತದೆ. ಬಾಲುರವರ ಕ್ರಿಯಾಜ್ಞಾನದ ಸಿದ್ಧಾಂತವನ್ನು ಹೀಗೆ ಅಪಭ್ರಂಶಗೊಳಿಸಿ ಅರ್ಥೈಸಿಕೊಳ್ಳಲು ಏಕೆ ಮುಂದಾಗುತ್ತಿದ್ದಾರೆ ಎಂಬುದು ನನ್ನಂತ ಕಿರಿಯನಿಗೆ ಅರ್ಥವಾಗದ ಸಂಗತಿಯಾಗಿದೆ. ಜೊತೆಗೆ ನನ್ನ ಓದಿನ ಪ್ರಕಾರ,  ಕ್ರಿಯಾಜ್ಞಾನಕ್ಕೂ ಮೇಲಿನ ಆಚರಣೆಗಳಿಗೂ ಸಂಬಂಧವೇ ಇಲ್ಲದಿರುವ ಸಾಧ್ಯತೆಯ ಕುರಿತು ದೇವನೂರಿಗೆ ಒಂದಿಷ್ಟು ಮಾಹಿತಿ ಇರಲಿಕ್ಕಿಲ್ಲ. ಏಕೆಂದರೆ ಬಾಲುರವರು ಅದರ ಕುರಿತು ಬರೆದಿರುವ ಬರಹವನ್ನು ಓದಿರಲಿಕ್ಕಿಲ್ಲ.

ದೇವನೂರು ಮಹಾದೇವರವರಿಂದ ಒಂದು ವೈಚಾರಿಕ ಮತ್ತು ಚರ್ಚಾಸ್ಪದವಾದ ಲೇಖನವನ್ನು ನಿರೀಕ್ಷಿಸಿ ಅವರ ಬರೆಹ ವನ್ನು ಓದಿದೆ. ಆದರೆ ನಿಜವಾಗಿಯೂ ನಿರಾಶೆಯಾಯಿತು. ’ಎದೆಗೆ ಬಿದ್ದ ಅಕ್ಷರ’ ಪುಸ್ತಕದಲ್ಲಿ ದೇವನೂರು ರವರು ಬರೆದಿರುವ ಕೆಲವು ಉತ್ತಮ ಒಳನೋಟಗಳನ್ನು ಹಿನ್ನೆಲೆಯಲ್ಲಿಟ್ಟುಕೊಂಡೇ ಅವರ ಪ್ರತಿಕ್ರಿಯೆಗಳನ್ನು ಓದಿದ್ದಕ್ಕೆ ಬಹುಶಃ ನನಗೆ ನಿರಾಶೆಯಾಗಿರಬಹುದು. ಹಾಗೂ ಚರ್ಚೆ ಮಾಡುವ ಅಂಕಣದಲ್ಲಿ ಆಜ್ಞೆ ಹೊರಡಿಸುವಂತಹ ಲೇಖನವನ್ನು ಅವರಿಂದ ನಾನು ನಿರೀಕ್ಷಿಸಿರಲಿಲ್ಲ. ಇದು ಏನನ್ನು ಸೂಚಿಸುತ್ತದೆ ಎಂಬುದು ಲೇಖನ ಓದಿದಾಗಿನಿಂದ ನನ್ನ ತಲೆ ಕೊರೆಯುತ್ತಿದೆ…

29 April 2013

* ದೇವನೂರು ಮಹಾದೇವ

ಈ ಯುಕ್ತಿ ಈ ಕುಯುಕ್ತಿ ಈ ಸಂಶೋಧನೆ ಯಾಕಾಗಿ? `ನಿಮ್ಮ ತಾಯಿ ಬಂಜೆ' ಅಂದರೆ ಏನು ತಾನೇ ಹೇಳಲು ಸಾಧ್ಯ? `ನಿಮಗೆ ತಲೆ ಕೆಟ್ಟಿದೆಯಾ' ಎಂದು ನಾವು ಪ್ರಶ್ನಿಸಬಹುದು ಅಷ್ಟೇ. ಅದಕ್ಕೆ ಅವರು ಆತ್ಮವಿಶ್ವಾಸದಿಂದ ಹೇಳುತ್ತಾರೆ, `ನಾವು ಸಂಶೋಧನೆ ಮಾಡಿದ್ದೇವೆ' ಅಂತ. `ಏನಪ್ಪಾ ಅಂಥ ಸಂಶೋಧನೆ?' ಅಂದರೆ `ನೀವು ಹುಟ್ಟಿದಾಗಲಿಂದ ಇಷ್ಟು ಕೋಟಿ, ಇಷ್ಟು ಲಕ್ಷ, ಇಷ್ಟು ಸಾವಿರ ಪದಗಳನ್ನು ಉಚ್ಚಾರ ಮಾಡಿರುತ್ತೀರಿ. ಅದರಲ್ಲಿ ಶೇಕಡಾ ಒಂದರಷ್ಟು ತಾಯಿ ಅಥವಾ ಅವ್ವ ಪದ ನಿಮ್ಮ ಬಾಯಿಂದ ಬಂದಿರುವುದಿಲ್ಲ.

ಹಾಗಾಗಿ ನಿಮ್ಮ ತಾಯಿ ಬಂಜೆ ಅಲ್ಲವೇ?' ಎಂದು ದಿಗ್ವಿಜಯ ಸಾಧಿಸಿದವರಂತೆ ಎದೆ ತಟ್ಟಿ ಹೇಳುತ್ತಾರೆ. ಡಂಕಿನ್ ಝಳಕಿಯವರ  ತಳಪಾಯವೇ ಅಲ್ಲಾಡುತ್ತಿದೆ. ಅದರ ಮೇಲೆ ಸಂಶೋಧನಾ ಸೌಧ ಕಟ್ಟಲು ಹೊರಡುತ್ತಾರೆ. ಪ್ರಾಥಮಿಕ ಶಾಲಾ ಮಕ್ಕಳು ಸೂಟುಬೂಟು ಹ್ಯಾಟು ಟೈ ಹಾಕಿಕೊಂಡು ತಲೆಗೆ ಬಿಳಿ ವಿಗ್ ಕಣ್ಣಿಗೆ ಸೋಡಾಗ್ಲಾಸಿನ ಕನ್ನಡಕ ಧರಿಸಿ ಇದನ್ನು ಒಂದು `ಸಂಶೋಧನಾ ಪ್ರಹಸನ'ದಂತೆ ಪ್ರದರ್ಶಿಸಿದ್ದರೆ ಈ ಬಾಲಗುಂಪಿನ ಚಾತುರ್ಯಕ್ಕೆ ನಾವೂ ಸಂತಸಪಡಬಹುದಿತ್ತು.

ಆದರೆ ಇದು ಹಾಗಲ್ಲ. ಸಂತೆಗೆ ಮಾರಲು ಆಡು ಹಿಡಿದುಕೊಂಡು ಹೋಗುವ ಬಡವನೊಬ್ಬನಿಗೆ ನಾಕಾರು ಕಳ್ಳರು ಮೈಲಿಗೊಬ್ಬರಂತೆ ನಿಂತು `ನಾಯಿ ಹಿಡಿದುಕೊಂಡು ಎಲ್ಲಿಗೆ ಹೊರಟೆ?' ಎಂದು ಅಪಹಾಸ್ಯ ಮಾಡುತ್ತಾ ಬಡವನಿಗೆ ಮಂಕು ಕವಿಸಿ ಅವನೂ ಭ್ರಮೆಗೆ ಒಳಗಾಗಿ ತನ್ನ ಆಡನ್ನು ನಾಯಿ ಎಂದೇ ತಾನೂ ಭ್ರಮಿಸಿ ಅಲ್ಲೇ ಬಿಟ್ಟು ಹೋದಮೇಲೆ ಆಗ ಮಾತ್ರವೇ ಆ ಆಡನ್ನು ಕದಿಯುವ ಚತುರ ಚೋರರ ಸಂಚಿನ ಜಾಲದಂತೆ ಈ ಬಾಲಗುಂಪಿನ ಕೃತ್ಯ ಗೋಚರಿಸುತ್ತದೆ. ಆ ನಾಲ್ವರು ಕಳ್ಳರು ಆ ಬಡವನಿಂದ ಆಡನ್ನು ಬಲಾತ್ಕಾರದಿಂದ ಕಿತ್ತುಕೊಂಡೇ ಹೋಗಬಹುದಿತ್ತು. ಆದರೆ ಅವರು ಇಲ್ಲಿ ಮಾಡಿದ್ದು ಅಭಿಪ್ರಾಯ ರೂಪಿಸುತ್ತ ಮಾಡುವ ಮರೆಮೋಸದ ಕಳ್ಳತನ. ಅವರೂ ಸಂಶೋಧಕರೇ ಇರಬಹುದು. ಇಂದು ಕಾರ್ಪೊರೆಟ್ ಸೆಕ್ಟರ್‌ಗಳು ಅಭಿಪ್ರಾಯ ರೂಪಿಸಿ ಕಳ್ಳತನ ಮಾಡುವ ವಂಚನಾ ಕಲೆಯ ಕೌಶಲದಂತೆ ಈ ಸಂಶೋಧನೆ ಎಂಬುದೂ ಈ ಮಾರ್ಗ ಹಿಡಿಯುತ್ತಿದೆ.

ಇಲ್ಲೇನು ಕಳ್ಳತನ? ಅಥವಾ ಇದು ಯಾಕಾಗಿ? `ಸಾಮಾಜಿಕ ನ್ಯಾಯ, ಮೀಸಲಾತಿ, ಸರ್ವರಿಗೂ ಶಿಕ್ಷಣ, ಪ್ರಜಾಪ್ರಭುತ್ವ, ಸೆಕ್ಯುಲರಿಸಂ ಇಂಥವುಗಳೆಲ್ಲ ಪಾಶ್ಚಿಮಾತ್ಯ ವಸಾಹತುಶಾಹಿ ಪ್ರಭಾವದಿಂದ ಕಟ್ಟಲ್ಪಟ್ಟವು, ಇಂಥವುಗಳು ಭಾರತೀಯ ಅಲ್ಲ' ಎಂದು ಇವರು ಸಂಶೋಧನೆ ಜರುಗಿಸುತ್ತಿದ್ದಾರೆ. ಇಂಥವು ಇಲ್ಲಿಯವು ಅಲ್ಲ ಅಂತ ಇವುಗಳನ್ನು ಬುಡಸಮೇತ ಕಿತ್ತುಹಾಕುವ ಹುನ್ನಾರ ಇಲ್ಲಿದೆ. ಅದಕ್ಕಾಗಿ ಜಾತಿ, ಧರ್ಮ, ಅಧ್ಯಾತ್ಮ ಹಿಡಿದುಕೊಂಡು ಇದರ ಸುತ್ತಲೇ ಸುತ್ತುತ್ತಿದ್ದಾರೆ, ಬಲಿಪಶುವಿನ ಸುತ್ತಾ ಸುತ್ತುವ ಆಚರಣೆಯ ಪ್ರದರ್ಶನಕಾರರಂತೆ, ವೈದಿಕಶಾಹಿಯ ಯಾವುದೋ ಪಳೆಯುಳಿಕೆಯಂತೆ.

ಹೀಗೆ ಇವರ ಸಂಶೋಧನೆ `ಜಾತಿಗಳು ಇವೆ. ಆದರೆ ಜಾತಿವ್ಯವಸ್ಥೆ ಎಂಬುದು ಇಲ್ಲ' ಎಂದು  ಹೇಳುತ್ತದೆ. ನನಗೆ ತಲೆಕೆಟ್ಟು ಹೋಗಿ ಪಿಯುಸಿ ಓದಿ, ಗಾರೆ ಕೆಲಸ ಮಾಡುವ ಹುಡುಗನೊಬ್ಬನಿಗೆ `ಏನಪ್ಪಾ ಹೀಗೆ ಅಂದರೆ' ಎಂದು ಕೇಳಿದೆ. ಅದಕ್ಕೆ ಅವ `ಇದು ಯಾವ್ತರಪ್ಪಾ ಅಂದ್ರೆ... ಹುಟ್ಟುಸ್ದೇ ಹೆರದೇ ಮಕ್ಳಾಯ್ತು ಅನ್ನೋತರ ಆಯ್ತದಲ್ಲಾ ಸಾರ್!' ಅಂದ! ಈ ಸಂಶೋಧಕರು ಬೆಟ್ಟ ಅಗೆದು ಇಲಿ ಹಿಡಿಯುತ್ತಿದ್ದಾರೆ ಅನಿಸುತ್ತೆ. ಇದರೊಡನೆ ಜಾತಿಗಳ ನಡುವೆ ಮೇಲು ಕೀಳು ಇಲ್ಲ ಅಂತ ತೋರಿಸಲು ದಣಿವರಿಯದ ಸಂಶೋಧನೆ ನಡೆಸುತ್ತಿದ್ದಾರೆ. ಜಾತಿವ್ಯವಸ್ಥೆ, ಜಾತಿಗಳ ನಡುವೆ ಮೇಲು ಕೀಳು ಇದ್ದರೆ ತಾನೇ ಸಾಮಾಜಿಕ ನ್ಯಾಯ, ಮೀಸಲಾತಿ ಇತ್ಯಾದಿಗಳಿಗೆ ಅರ್ಥ. ಅದೇ ಇಲ್ಲ ಎಂದು ಭ್ರಮಿಸುವಂತೆ ಮಾಡಿಬಿಟ್ಟರೆ? ಮೀಸಲಾತಿ, ಸಾಮಾಜಿಕ ನ್ಯಾಯ ಇತ್ಯಾದಿಗಳನ್ನು ಕದಿಯುವುದಲ್ಲದೆ ಇದು ಮತ್ತೇನು? ಅದಕ್ಕಾಗಿ ಭಾರತದಲ್ಲಿ ಜಾತಿವ್ಯವಸ್ಥೆಯನ್ನು ಹುಟ್ಟು ಹಾಕಿದ್ದೇ ಬ್ರಿಟಿಷ್ ವಸಾಹತುಶಾಹಿ ಅಂತ `ಅನಿಷ್ಟಕ್ಕೆಲ್ಲ ಶನೇಶ್ವರನೇ ಕಾರಣ' ಎಂಬಂತೆ ಮಾಡುತ್ತಿದ್ದಾರೆ. ಕಣ್ಣೆದುರು ಕಾಣುವುದನ್ನು ಮರೆಮಾಚಿ ತಮಗೆ ಬೇಕಾದ್ದನ್ನು ವಿಜೃಂಭಿಸಿ ವಾದಿಸುವ ವಕೀಲರಂತಾಗಿಬಿಟ್ಟಿದ್ದಾರೆ.

ಮುಂದುವರೆದಂತೆ ಇವರು ಜಾತಿಯನ್ನು ಜಾತಿಯಷ್ಟಕ್ಕೇ ಉಳಿಯಗೊಡಲೂ ಬಿಡುವುದಿಲ್ಲ. ಇವರ ಚಿಂತನಾ ಲಹರಿ ಹೀಗಿದೆ: “ಜಾತಿಗಣತಿಯು ಸಮಾಜದಲ್ಲಿ ಬದುಕುತ್ತಿರುವ ಜನರ  ಸ್ವ-ಅನುಭವವನ್ನು ಗ್ರಹಿಸುವಂತಿರಬೇಕು. ಲಿಂಗಾಯತ ಎಂಬುದನ್ನು (ಒಂದು) ಜಾತಿಯನ್ನಾಗಿ ಗುರುತಿಸದೆ ಸಾದರು, ಬಣಜಿಗ, ಪಂಚಾಚಾರ್ಯ ಮುಂತಾದ ಸಮಾಜದ ಹತ್ತು ಹಲವು ವಾಸ್ತವ ಗುಂಪುಗಳನ್ನು ಜಾತಿ ಎಂದು ಗುರುತಿಸಬೇಕಾಗುತ್ತದೆ. ಅಂತೆಯೆ ಕುರುಬರನ್ನು ಒಂದು ಜಾತಿಯಾಗಿಸದೆ ಅದರಲ್ಲಿನ ಕಾಡುಕುರುಬ, ಊರುಕುರುಬ, ಹತ್ತಿ ಕಂಕಣ, ಉಣ್ಣೆ ಕಂಕಣ ಎಂಬ `ಸಾಮಾಜಿಕವಾಗಿ ಗುರುತಿಸುವಿಕೆಯುಳ್ಳ' ಜಾತಿಗಳನ್ನು ಗುರುತಿಸಬೇಕಾಗಿದೆ. ಹೀಗೆ ಜನರ ಅನುಭವಕ್ಕೆ ಪೂರಕವಾಗಿಯೇ ಗುರುತಿಸಬೇಕಾಗುತ್ತದೆ”. ಇದು ಈ ಗುಂಪಿನ ವಾದ.  ಇದರ ಜೊತೆಗೆ,  ಭಾರತೀಯತೆ ಎಂದರೆ ಅದು ಆಚರಣೆ ಮತ್ತು ಸಂಪ್ರದಾಯ ಎಂದು ಈ ಸಂಶೋಧಕರು ವಾದಿಸುತ್ತಾರೆ. ಭಾರತದಲ್ಲಿ ಆಚರಣೆ ಮತ್ತು ಸಂಪ್ರದಾಯ ಅಂದರೆ ಏನು? ಇದನ್ನು ಕಣ್ಣು ಮುಚ್ಚಿಕೊಂಡು ಆಚರಣೆ ಉರುಫ್ ಉಪಜಾತಿ ಎಂದುಬಿಡಬಹುದಲ್ಲವೇ? ಅಂದರೆ ಈ ಸಂಶೋಧಕರು ಉಪಜಾತಿಗಳನ್ನು ಉಳಿಸಿಕೊಳ್ಳಲು ಉರುಳುಸೇವೆ ಮಾಡುತ್ತಿದ್ದಾರೆ. ಇವರಿಗೆ ಉಪಜಾತಿಗಳೆಲ್ಲವೂ ಸೇರಿ ಜಾತಿಯಾಗುವುದೂ ಬೇಕಿಲ್ಲ. ಆ ಜಾತಿ ಈ ಜಾತಿ ಬೆರೆತು ಒಂದು ಧರ್ಮವಾಗುವುದೂ ಬೇಕಿಲ್ಲ. ಒಟ್ಟಿನಲ್ಲಿ ಭಾರತೀಯರು ತಂತಮ್ಮ ಉಪಜಾತಿ ಬಚ್ಚಲೊಳಗೆ ಹುಳಗಳಂತಿರಬೇಕು. ಇದನ್ನೆ ಇವರು ಭಾರತೀಯತೆ ಅಂತಾರೆ. ಈ ಹಿಂದೆ ಬ್ರಿಟಿಷರು ಆಳ್ವಿಕೆ ನಡೆಸಲು ಭಾರತವನ್ನು ಜಾತಿಗಳಾಗಿ ಒಡೆದರು ಎಂದು ವಾದಿಸುವ ಇವರು ಈಗ ಯಾರು ಆಳ್ವಿಕೆ ನಡೆಸಲಿ ಎಂದು ಉಪಜಾತಿಗಳನ್ನು ಉಲ್ಬಣಿಸುತ್ತಿದ್ದಾರೆ? ದುಡಿಯುವ ವರ್ಗ ಎಂದೂ ಒಂದಾಗಬಾರದು ಎಂಬ ಈ ಆಶಯದೊಳಗೆ ಏನೇನಿದೆ? ಇಂದು ಕಾರ್ಪೊರೆಟ್ ಸೆಕ್ಟರ್ ಕೃಪಾಪೋಷಿತರಾದ ಕೆಲವು ಎನ್.ಜಿ.ಓ.ಗಳು ಭಾರತದಲ್ಲಿ ಇರುವ ಸಮಸ್ಯೆ, ಪ್ರತ್ಯೇಕತೆಗಳನ್ನು ಉಲ್ಬಣಿಸಿ ದುಡಿಯುವ ವರ್ಗ ಒಂದಾಗದಂತೆ ಕಾಯುವ ಕೆಲಸ ಮಾಡುತ್ತಾ ಸಮುದಾಯ ಆಂದೋಲನಕ್ಕೆ (mass movement) ತೊಡರುಗಾಲು ಹಾಕುತ್ತಿರುವಂತೆಯೇ ಈ ಬಾಲುಗುಂಪೂ ಕೂಡ ಭಾರತದ ಸಾಮಾಜಿಕ ಛಿದ್ರತೆಗಳನ್ನು ಮತ್ತೂ ಛಿದ್ರಗೊಳಿಸುವ ಕೃತ್ಯದಲ್ಲಿ ತೊಡಗಿರಬಹುದಾ? ಭಾರತವು ಉಪಜಾತಿಗಳಾಗಿ ಛಿದ್ರಾತಿಛಿದ್ರವಾದರೆ ಅಮೆರಿಕಾ ಅಥವಾ ಐರೋಪ್ಯ ವಸಾಹತುಶಾಹಿಗೆ ಭಾರತವನ್ನೇ ಆಹಾರವಾಗಿಸಿ ಉಣಬಡಿಸಿದಂತಾಗುವುದಿಲ್ಲವೇ? ದುಡಿಯುವ ವರ್ಗ ಒಂದಾಗದಂತೆ ಮಾಡುವ ಈ ಸಂಶೋಧನೆಯು ಯೂರೋ ಲಿಂಕ್ ಸಂಚಿನ ಫಲವೇ? ಗುಮಾನಿ ಹುಟ್ಟುತ್ತಿದೆ. ಇವರ ಚಲನವಲನಗಳ ಮೇಲೆ ಕಣ್ಣಿಡಬೇಕಾಗಿದೆ.

ಹಾಗೆ ಇವರು ಜಾತಿಗಳನ್ನು ಉಳಿಸಿಕೊಂಡು ಜಾತಿವ್ಯವಸ್ಥೆ ಇಲ್ಲ ಎನ್ನುವುದರಲ್ಲಿ ಮತ್ತೊಂದು ಒಳಮರ್ಮವೂ ಇದ್ದಿರಬಹುದೇ? ಈ ಭ್ರಮಾಧೀನ ಬಾಲಸಂಶೋಧಕರಿಗೆ, ಜಾತಿ ಹುಟ್ಟುಹಾಕಿದ ಪಿತೃಗಳು ಮೋಕ್ಷ ಕಾಣದೆ ಭೂಮಿ ಮೇಲೆ ಅಲೆದಾಡುತ್ತಿರುವಂತೆ ಆಗಾಗ ಗೋಚರಿಸುತ್ತಾ, ಅದನ್ನು ಮರೆಮಾಚುವ ಹತಾಶ ಪ್ರಯತ್ನ ಇಲ್ಲಿರಬಹುದೇ? ಜಾತಿ ವ್ಯವಸ್ಥೆಯೇ ಇಲ್ಲ ಎಂದು ವಾದ ಕಟ್ಟಿಬಿಟ್ಟರೆ(Fabricated), ಆಗ ಜಾತಿಗಳ ಹುಟ್ಟಿಗೆ ಕಾರಣರು ಯಾರೂ ಅಲ್ಲ ಅಂತಾಗಿ ಬಿಟ್ಟರೆ, ಆಗ ಯಾವ ತಪ್ಪಿನ ಭಾವನೆಯೂ ಇಲ್ಲದೆ ನೆಮ್ಮದಿಯಿಂದ ಇರಬಹುದಲ್ಲ ಎಂದು ಇವರು ಹೊರಟಿದ್ದಾರೆಯೆ?  ಹಾಗಾದರೆ ನೆನಪಿರಲಿ, ಈ ಮರೆಮಾಚಿ ಬರುವ ನೆಮ್ಮದಿಯು- ಆತ್ಮ ಎಂಬುದು ಇದ್ದರೆ ಅದನ್ನೇ ಕೊಂದುಬಿಡುತ್ತದೆ, ಸತ್ಯಕ್ಕೆ ಮುಖಾಮುಖಿಯಾಗುವುದನ್ನು ತಪ್ಪಿಸಿಬಿಡುತ್ತದೆ; ಸಂವೇದನಾಶೀಲ ಸೃಷ್ಟಿಶೀಲ ಮನಸ್ಸಿಗೆ ಎಳ್ಳು ನೀರು ಬಿಟ್ಟಂತೂ ಆಗುತ್ತದೆ. ಇಂಥದೇನಾದರೂ ಇದ್ದಲ್ಲಿ ಈ ಸಂಶೋಧಕರು ಅದನ್ನು ನಿವಾರಿಸಿಕೊಂಡರೆ ಅವರಿಗೇ ಕ್ಷೇಮ. ಹಾಗೂ ಸುತ್ತಲಿನ ಸಮಾಜಕ್ಕೂ ಒಳ್ಳೆಯದು.

ಈ ಜಾತಿಯಾದ ಮೇಲೆ ಈ ಸಂಶೋಧಕರು ಮುಂದೆ ಭಾರತದ ಧರ್ಮಗಳ ಕತ್ತು ಹಿಸುಕಲು ಹೊರಡುತ್ತಾರೆ. ಅದಕ್ಕಾಗಿ ಈ ಸಂಶೋಧಕರು, ಕ್ರಿಶ್ಚಿಯನ್ ಥಿಯಾಲಜಿ ಪರಿಭಾಷೆಯಲ್ಲಿ ಭಾರತವನ್ನು ನೋಡಿದ ದೃಷ್ಟಿಕೋನದಿಂದಾಗಿ ಇಲ್ಲಿ ರಿಲಿಜನ್ ಪರಿಕಲ್ಪನೆ ಬಂತೆಂದೂ ಈ ದೃಷ್ಟಿಕೋನದ ಕಾರಣವಾಗೆ ಬುದ್ಧ ಅಲ್ಲಮ ಬಸವಣ್ಣ ಮುಂತಾದವರನ್ನು ಪ್ರೊಟೆಸ್ಟೆಂಟ್ ಸುಧಾರಕರಂತೆ ಭಾವಿಸಲು ಕಾರಣವಾಯಿತು ಎಂದೂ ವಾದಿಸುತ್ತಾರೆ. ಭಾರತದ ದೇವಸ್ಥಾನಗಳನ್ನು, ಮಸೀದಿಗಳನ್ನು ಅಗೆಯುತ್ತ ಆಳಕ್ಕೆ ಹೋದರೆ ಬೌದ್ಧ,ಜೈನ, ಲಿಂಗಾಯತ ಎಲ್ಲವೂ ಒಂದರೊಳಗೊಂದು ಸಿಕ್ಕುವುವು. ಕ್ರಿಸ್ತ ಹುಟ್ಟುವ ಮೊದಲು ಇಲ್ಲಿ ಮತಾಂತರ ಜರುಗಿದೆ. ಕೇವಲ ಸಂಪ್ರದಾಯ ಆಚರಣೆಗಳೇ ಭಾರತವಾಗಿದ್ದರೆ ಇದೆಲ್ಲ ಹೇಗಾಗುತ್ತಿತ್ತು? ಇವರ ಉದ್ದಿಶ್ಯ ಇಷ್ಟೆ ಅನ್ಸುತ್ತೆ: ಭಾರತದಲ್ಲಿ ಯಾವುದೇ ಧರ್ಮಗಳು ಇರಬಾರದು. ಜಾತಿಗಳೂ ಇರಬಾರದು. ಉಪಜಾತಿಗಳು ಮಾತ್ರ ಇದ್ದು ಇದು ಭಾರತವಾಗಿರಬೇಕು. ಇದು ಭಾರತ ಇವರಿಗೆ.

ಜೊತೆಗೆ, ಈ ಸಂಶೋಧಕರು ಭಾರತವನ್ನು ತಮಗೆ ಬೇಕಾದಂತೆ ಗ್ರಹಿಸುತ್ತಾರೆ ಎಂಬುದಕ್ಕೆ ಉದಾಹರಣೆ- ವಚನಗಳನ್ನು ಕುರಿತು ಇವರು ಆಡುತ್ತಿರುವ ಮಾತು. ವಚನಗಳು ಇಡೀ ಕರ್ನಾಟಕವನ್ನು ಉದ್ದೇಶಿಸಿ ಮಾತಾಡುತ್ತಿದ್ದರೂ, ಈ ವಚನಗಳು ತನ್ನ ಮಾರ್ಗದ ಸಾಧಕರ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತವೆ ಎನ್ನುವ ಇವರು ತಾವು ಮಾತ್ರ ಇಡೀ ಭಾರತವನ್ನೇ ತಮ್ಮದು ಎನ್ನುವಂತೆ ಮಾತಾಡುತ್ತಾರೆ. ಹಾಗೇ ಬಾಲಗಂಗಾಧರರು ಅಧ್ಯಾತ್ಮದ ಬಗ್ಗೆ ಬರೆಯತ್ತಾ `ಪಾಶ್ಚಾತ್ಯರ ಆನಂದದ ಕಲ್ಪನೆಯಲ್ಲಿ ಈ ಪ್ರಪಂಚವನ್ನೇ ಬದಲಾಯಿಸುವ ಕಾರ್ಯಕ್ರಮ ಮೂಲಭೂತವಾಗಿರುತ್ತದೆ. ಆದರೆ ಭಾರತೀಯರ ಅಧ್ಯಾತ್ಮವು ಕಂಡುಕೊಂಡ ಉತ್ತರವೆಂದರೆ ಪ್ರಪಂಚವು ಈಗಿರುವಂತೆಯೇ ಮನುಷ್ಯನು ಯಾವುದೇ ಅವಸ್ಥೆಯಲ್ಲೂ ಆ ಆನಂದವನ್ನು ಹೊಂದುವುದು ಸಾಧ್ಯ. ಈ ಸ್ಥಿತಿಯನ್ನು ತಲುಪಲಿಕ್ಕೆ ಪ್ರಪಂಚವನ್ನು ಬದಲಿಸುವುದರ ಬದಲಾಗಿ ಒಬ್ಬನು ತನ್ನ ಪ್ರಾಪಂಚಿಕ ಅನುಭವದಿಂದಲೇ ಮುಕ್ತನಾಗಬೇಕು' ಎನ್ನುತ್ತಾರೆ. ತನ್ನ ಸುತ್ತಲಿನ ಸಮಾಜದ ಬಿಡುಗಡೆಯೊಳಗೇ ತನ್ನ ಬಿಡುಗಡೆಯೂ ಇದೆ ಎಂಬ ಆಶಯದ ಮಹಾಯಾನ, ವಚನಧರ್ಮ ಮುಂತಾದವು ಇವರ ಕಣ್ಣಿಗೆ ಕಾಣುತ್ತಿಲ್ಲ. ಕಂಡರೂ ಭೂಗತಮಾಡುತ್ತಿದ್ದಾರೆ. ವೈದಿಕದ `ಅಹಂ'ಕಾರವು ವೈದಿಕ `ಶಾಹಿ'ಯಾಗಿ  ಭಾರತದಲ್ಲಿ ತಾನು ಮಾತ್ರವೇ  ವ್ಯವಸ್ಥೆ,  ತಾನು ಮಾತ್ರವೇ ಆಳ್ವಿಕೆ ಎಂಬ `ಶಾಹೀ' ಕುಬುದ್ಧಿ ಕುತಂತ್ರವನ್ನು ಬಿಟ್ಟು `ವೈದಿಕ'ವಾಗಿ ತನ್ನಷ್ಟಕ್ಕೆ ತಾನೇ ಇದ್ದರೆ ಅದಕ್ಕೂ ಕ್ಷೇಮ. `ವೈದಿಕ'ದ ಹಿತವೂ ಇಲ್ಲಿದೆ. ಯಾಕೆಂದರೆ, ಈಗ ಇವರು ಆರಂಭಿಸಿರುವ ಕ್ರಿಶ್ಚಿಯನ್ ವಸಾಹತುಶಾಹಿ ಮುಗಿದು, ಮುಂದೆ ಈ ಸಂಶೋಧಕರು ಇಸ್ಲಾಂ ವಸಾಹತುಶಾಹಿಗೆ ಬಂದು ಅಬ್ಬರಿಸಿ, ಈ ಪರಿಪಾಠ ಮುಂದುವರೆದರೆ ಅದು ಎಲ್ಲಿಗೆ ತಲುಪುತ್ತದೆ? ಈ ನವಗೋಸುಂಬೆ ವೈದಿಕಶಾಹಿಯ ಕುತ್ತಿಗೆಗೆ ಕವೆಗೋಲು ಬೀಳುವಲ್ಲಿಗೆ ಬಂದು ನಿಲ್ಲುತ್ತದೆ.

ವೈದಿಕಶಾಹಿಯ ಇತಿಹಾಸ ಪುರಾಣವು ಈ ಸಂಶೋಧಕರ ಇಂಥದೇ ಪಟ್ಟುಗಳನ್ನು  ಹಾಕಿಕೊಂಡು ಲಾಗಾಯ್ತಿನಿಂದ ಬರುತ್ತ- ಇಲ್ಲಿನ ಧರ್ಮಗಳನ್ನು ಜಾತಿಯನ್ನಾಗಿ ಉಳಿಸಿಕೊಂಡು ನೀಚಗೊಳಿಸಿದೆ. ಉದಾ: ಜೈನ, ಲಿಂಗಾಯತ. ಆದರೆ ಜಾತಿಯಾಗಿ ಬಗ್ಗದ ಧರ್ಮಗಳನ್ನು ಇದೇ ವೈದಿಕಶಾಹಿಯು ಭಾರತದ ಆಚೆಗೆ ಪಲಾಯನ ಮಾಡುವಂತೆ ಮಾಡಿದೆ. ಉದಾ-ಬೌದ್ಧ. ಈಗ ಬೌದ್ಧವು ತನ್ನ ಮನೆಗೆ ಅಂದರೆ ಭಾರತಕ್ಕೆ ಮರಳುತ್ತಿದೆ. ಹಾಲಿ ಜಾತಿಯಾಗಿಬಿಟ್ಟಿರುವ ವಚನಧರ್ಮವೂ ತನ್ನೊಳಗಿನ ವಚನಗಳೊಳಗಿನ ಅಂತಃಸತ್ವದಿಂದಲೇ ಮುಂದೊಂದು ದಿನ ಜಾತಿ ಬಚ್ಚಲಿನಿಂದ ಹೊರಬಂದು ಧರ್ಮವೂ ಆಗಿಬಿಡುವ ಸಾಧ್ಯತೆಯನ್ನು ಒಳಗೊಂಡಿದೆ. ಇದಾದರಂತೂ ಕರ್ನಾಟಕದ ನೆಲದ ಫಸಲಾದ ವಚನಧರ್ಮವು ಇಡೀ ಜಗತ್ತಿನ ದುಡಿಯುವ ವರ್ಗದ ಧರ್ಮವಾಗುವ ಸಾಧ್ಯತೆಯೂ ಅದರೊಳಗೇ ಇದೆ. ಇದೆಲ್ಲದರ ವಾಸನೆ ಹಿಡಿದ ವೈದಿಕಶಾಹಿಗೆ ನಿದ್ದೆ ಬರುತ್ತಿಲ್ಲ. ಅದಕ್ಕಾಗಿ ಈ ಉಪಜಾತಿ ಸಿದ್ಧಾಂತಿಗಳು ಈ ಸಂಶೋಧನೆಯ ಮಡೆಮಡೆಸ್ನಾನದ ಉರುಳುಸೇವೆ ಮಾಡುತ್ತಿದ್ದಾರೆ. ಬೌದ್ಧ, ವಚನ ಇತ್ಯಾದಿ ಸತ್ವಶಾಲಿ ಧರ್ಮಗಳನ್ನು ಹಿಡಿದು ಹಿಡಾಹೊಡೆದು ಅವುಗಳನ್ನು ಜಾತಿ ಉಪಜಾತಿಗಳಾಗಿಸಲು ಬ್ಯುಸಿಯಾಗಿದ್ದಾರೆ. ಇವರ ಪ್ರಕಾರ, ಧರ್ಮಗಳು ಭಾರತದಲ್ಲಿ ಬದುಕುಳಿಯಲೇಬೇಕಾದರೆ ಅವು ಜಾತಿ ಉಪಜಾತಿಯಾಗಿ, ಅಂದರೆ ಸಂಪ್ರದಾಯ ಆಚರಣೆಗಳಾಗಿ ಜೀವಚ್ಛವಗಳಂತೆ ನೀಚವಾಗಿ ಉಳಿಯಬೇಕು- ಇದಕ್ಕಾಗಿ ನಡೆಯುತ್ತಿರುವ ಬೌದ್ಧಿಕ ಕಸರತ್ತಲ್ಲದೆ ಇದು ಮತ್ತೇನು? ಯಾವುದೋ ಕಾಲದಲ್ಲಿ ಕಟ್ಟಲ್ಪಟ್ಟ ಸಂಪ್ರದಾಯ,ಆಚರಣೆಗಳೂ ಅವು ಕಟ್ಟಲ್ಪಟ್ಟ ಕಾಲದಲ್ಲಿ ಆಹಾರವಾಗಿರಲೂಬಹುದು. ಆದರೆ ಅದೇ ಆಹಾರ ಕಾಲಾನಂತರ ಮಲವಾಗಿ ಪರಿಣಮಿಸಿಬಿಟ್ಟಿರುತ್ತದೆ. ಈ ಮಲದೇವತಾ ಅರ್ಚಕರಿಗೆ ಏನೆನ್ನಬೇಕು?

ಇವರಿಗೆ ಹೇಗೆ ಹೇಳಲಿ? ಏನು ಹೇಳಲಿ?

ಭಾರತದಲ್ಲಿ ಆಚರಣೆ, ಸಂಪ್ರದಾಯಗಳು ಆಳ್ವಿಕೆ ನಡೆಸುವುದಾದರೆ ಏನೇನು ದೃಶ್ಯಾವಳಿಗಳನ್ನು ನಾವು ಕಾಣಬೇಕಾಗಿಬರಬಹುದು: ಕುದುರೆ ಮೇಲೆ ಓರ್ವ ಮಹಿಳೆ ಅಲಂಕೃತಳಾಗಿ ಒಂದು ಕೈಲಿ ಕನ್ನಡಿ ಇನ್ನೊಂದು ಕೈಲಿ ನಿಂಬೆಹಣ್ಣು ಹಿಡಿದು ಹಸನ್ಮುಖಳೋ ಉನ್ಮತ್ತಳೋ ಆಗಿ ಪಯಣಿಸುತ್ತಿರುತ್ತಾಳೆ. ಸುತ್ತ ಜನ ಜೈಕಾರ ಹಾಕುತ್ತಾ ಸಾಗುತ್ತಾ ಗಂಡನ ಹೆಣದೊಡನೆ ಚಿತೆಗೆ ಆಹುತಿಯಾಗುತ್ತಾಳೆ. ಅವಳೇನಾದರು ಬೆದರಿ ಓಡಿದರೆ ಸುತ್ತ ಆವರಿಸಿಕೊಂಡವರು ಹಿಡಿದು ತಂದು ಅವಳನ್ನು ಆ ಚಿತೆಗೆ ಎಸೆಯುತ್ತಾರೆ. ಆಗ ಸತಿ ಸಹಗಮನ ಪೂರ್ಣಗೊಂಡು ಮಾಸ್ತಿಕಲ್ಲು ಅಲ್ಲಿ ನಿಲ್ಲುತ್ತದೆ. ಇನ್ನೊಂದು ಕಡೆ  ಪುಟ್ಟ ಬಾಲೆಯೊಬ್ಬಳಿಂದ ವಯಸ್ಕನಿಗೆ ಮಾಲೆ ಹಾಕಿಸುತ್ತಾರೆ, ಅವ ಸತ್ತರೆ ಈ ಕಂದಮ್ಮಗೆ ತಲೆ ಬೋಳಿಸಿ ವಿಧವೆ ಪಟ್ಟ ಕಟ್ಟಿ ಯಾಕಾದರೂ ಬದುಕಿದೆನೊ ಎನ್ನಿಸಿಬಿಡುತ್ತಾರೆ. ಅಸ್ಪೃಶ್ಯ, ತಳಸಮುದಾಯ, ಮಹಿಳೆ, ಶೂದ್ರರನ್ನು ಶಿಕ್ಷಣ, ಸಾಮಾಜಿಕ ನ್ಯಾಯ ಎಲ್ಲಾ ಕ್ಷೇತ್ರದಲ್ಲೂ ವಂಚಿತರನ್ನಾಗಿಸಿ ಸಮಾನತೆ, ಸಾಮಾಜಿಕ ನ್ಯಾಯದಿಂದ ಮತ್ತೂ ದೂರದೂರವಾಗಿಸುತ್ತಾರೆ- ಇತ್ಯಾದಿ ಇತ್ಯಾದಿಯಾಗಿ ಈ ಸಂಪ್ರದಾಯ, ಆಚರಣೆಗಳು ಹೆಚ್ಚಾದಂತೆ ಇದು ಕೊನೆಗೆ ನರಬಲಿ ಕೇಳುತ್ತದೆ. ಈ ಸಂಶೋಧಕರ ಪ್ರಕಾರ ಇದೆಲ್ಲಾ ಆಚರಣೆ ಪ್ರಧಾನ ಜ್ಞಾನದ (Performative Knowled-ge) ಭಾರತೀಯತೆ ಆಗುತ್ತದೆ!

ಇವರಿಗೆ ಹೇಗೆ ಹೇಳಲಿ? ಏನು ಹೇಳಲಿ?

`ಲೋಕದ ಡೊಂಕ ನೀವೇಕೆ ತಿದ್ದುವಿರಯ್ಯ' ಎಂಬ ಬಸವಣ್ಣನ ವಚನ ಉದ್ಧರಿಸಿ `ಇಂಥ ವಚನಗಳನ್ನು ಸಾಮಾಜಿಕ ಹೋರಾಟಗಾರರು ರಚಿಸಲು ಸಾಧ್ಯವಿಲ್ಲ' ಎನ್ನುವ ಈ ಸಂಶೋಧಕರಿಗೆ- ಅಯ್ಯೊ, ಲೋಕದ ಡೊಂಕಿನ ಭಾಗವಾಗಿಯೇ ನಿನ್ನೊಳಗೂ ಡೊಂಕಿರುತ್ತದೆ, ಈ ಡೊಂಕನ್ನು ನೀನೂ ತಿದ್ದಿಕೊಂಡರೆ ಅಷ್ಟರ ಮಟ್ಟಿಗೆ ಲೋಕದ ಡೊಂಕೂ ಸರಿಯಾಗುತ್ತದೆ ಎಂಬ ಅಂತರಂಗ ಬಹಿರಂಗ ಶುದ್ಧಿಯ ಧ್ವನಿ ತಿಳಿಯದವರಿಗೆ ಹೇಗೆ ಹೇಳಲಿ?

ಗಾಂಧಿ ತಾನೊಬ್ಬ ಹಿಂದೂ, ಹಿಂದೂ ಎಂದು ಬಾಯಿ ತೆರೆದಾಗಲೆಲ್ಲಾ ಜಪಿಸಿದರೂ `ಸತ್ಯವೇ ನನ್ನ ಧರ್ಮ, ನಿತ್ಯ ಪ್ರಾರ್ಥನೆಯ ಮೂಲಕ ನಾನು ಸತ್ಯದ ಸಾಮೀಪ್ಯವನ್ನು ಬಯಸುತ್ತೇನೆ. ಎಲ್ಲಾ ಜೀವಿಗಳ ಸೇವೆಗಾಗಿ ನಿರಂತರ ತನ್ನನ್ನು ವ್ಯಯಿಸುವುದು ಧರ್ಮ' ಎಂದು ಹೇಳುವ ಗಾಂಧಿಯೊಳಗೆ ಏಸುಕ್ರಿಸ್ತ  ಕುಳಿತಿರುವುದನ್ನು ಕಾಣದ, ಈ ಒಳಗಣ್ಣು ಇಲ್ಲದವರಿಗೆ ಏನು ತಾನೆ ಹೇಳುವುದು?

ಊರಾಚೆ ಎಸೆಯಲ್ಪಟ್ಟ ಅಸ್ಪೃಶ್ಯ ಕುಟುಂಬವೊಂದಕ್ಕೆ ಊರ ನಡುವೆ ವಸತಿ ಕಲ್ಪಿಸಿಕೊಟ್ಟಲ್ಲಿ ಆಗ, ಸುಮ್ಮನಿದ್ದಂತೆ ಇದ್ದ ಜಾತಿಗಳು ತಾವೇ ಒಂದು ವ್ಯವಸ್ಥೆಯಾಗಿ ರೂಪು ತಳೆದು ಭುಗಿಲೇಳುವುದನ್ನು ಕಾಣಲಾಗದ ಪರದೇಶಿಗಳಿಗೆ ಹೇಗೆ ಹೇಳುವುದು? ಹೇಗೆ ತಿಳಿಸುವುದು?

ಈ ಎಸ್.ಎನ್.ಬಾಲಗಂಗಾಧರ ಮತ್ತವರ ಸಂಶೋಧನಾ ತಂಡದ ರೋಗಿಷ್ಟ ಸಂಶೋಧನಾ ವಿಚಾರಗಳು `ಭಾರತದಲ್ಲಿ ಜಾತಿ ವ್ಯವಸ್ಥೆ ಇದೆಯೇ?' ಎಂಬ ಡಂಕಿನ್ ಝಳಕಿ ಸಂಪಾದಿಸಿ ನಿರೂಪಿಸಿದ ಪುಸ್ತಕದಲ್ಲಿ ಹೇಗಿವೆ ಅಂದರೆ, (ರಾಜೇಂದ್ರ ಚೆನ್ನಿಯವರು ಪ್ರಸ್ತಾಪಿಸಿರುವ) ಈ ಪುಸ್ತಕದ ಪುಟ 123ರಲ್ಲಿ “ಒಟ್ಟೂ ಜನಸಂಖ್ಯೆಯಲ್ಲಿ ಸುಮಾರು 24 ಪ್ರತಿಶತ ದಲಿತರೇ (1999-2000ದಲ್ಲಿ) ಇರುವಾಗ ಕೇವಲ 38 (ದಲಿತರ) ಕೊಲೆಗಳಿಂದ ಭಾರತದಲ್ಲಿ ಜಾತಿಯ ತಾರತಮ್ಯ ಇದೆಯೆಂದು ನಿರ್ಣಯಕ್ಕೆ ಬರಲು ಹೇಗೆ ಸಾಧ್ಯ?' ಎಂದು ಈ ಸಂಶೋಧಕರು ಪ್ರಶ್ನಿಸುತ್ತಾರೆ. ಭಾರತದಲ್ಲಿ ಜಾತಿಯ ತಾರತಮ್ಯ ಇದೆಯೆಂದು ತೋರಿಸಲು ಹೆಚ್ಚು ದಲಿತರ ಕೊಲೆಗಳ ದಾಖಲಾತಿ ಕೇಳುವ ಈ ಸಂಶೋಧಕರು ಮನುಷ್ಯರಾ ಎಂದು ಮೊದಲು ಸಂಶೋಧಿಸಬೇಕಾಗಿದೆ. ಮನುಧರ್ಮಶಾಸ್ತ್ರದ ಹೆಣದೊಳಗಿಂದ ಉತ್ಪತ್ತಿಯಾದ ಹುಳುಗಳಂತಾಡುತ್ತಿರುವ ಈ ಬಾಲೂಗ್ಯಾಂಗ್ ಅನ್ನು ಯಾರು ಕಾಪಾಡಬೇಕೋ ತಿಳಿಯದಾಗಿದೆ.

18 April 2013

* ಪ್ರೊ.ಎಸ್‌.ಎನ್‌ ಬಾಲಗಂಗಾಧರ 


ವಚನಗಳ ಉದ್ದೇಶವು ಜಾತಿವಿನಾಶ ಚಳವಳಿಯಲ್ಲ ಎಂಬ ನನ್ನ ಹಾಗೂ ನನ್ನ ಸಹಸಂಶೋಧಕರ ವಾದವು `ಪ್ರಜಾವಾಣಿ'ಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನನ್ನ ವಾದಕ್ಕೆ ಪ್ರತಿಕ್ರಿಯಿಸಿದವರೆಲ್ಲರೂ ನನ್ನ ವಾದವು ವಚನಗಳ ಹಿರಿಮೆಯನ್ನು ಅಲ್ಲಗಳೆಯುತ್ತಿದೆ ಎಂಬುದಾಗಿ ಭಾವಿಸಿದ್ದಾರೆ. ಅದನ್ನು ಸ್ಪಷ್ಟೀಕರಿಸಲು ವಚನಗಳನ್ನು ಆಧ್ಯಾತ್ಮಿಕ ಸಂದರ್ಭದಲ್ಲಿಟ್ಟು ನೋಡಬೇಕೆಂಬುದು ನಮ್ಮ ವಾದವೆಂಬುದನ್ನು ಓದುಗರ ಗಮನಕ್ಕೆ ತಂದಿದ್ದೂ ಆಗಿದೆ. ಆ ಹೇಳಿಕೆಯ ಕುರಿತೂ ಅನೇಕ ಪ್ರತಿಕ್ರಿಯೆಗಳು ಬಂದವು. ಈ ಪ್ರತಿಕ್ರಿಯೆಗಳಲ್ಲಿ ಪರೋಕ್ಷವಾಗಿ ಇವರೆಲ್ಲರೂ ಅಧ್ಯಾತ್ಮ ಸಂಪ್ರದಾಯವನ್ನು ಬ್ರಾಹ್ಮಣರಿಗೆ ಸಮೀಕರಿಸುವುದು ಕಂಡುಬರುತ್ತದೆ. ಇಲ್ಲಿ ಬಹುಶಃ ಈ ಅಭಿಪ್ರಾಯಗಳಿಗೆ ಉತ್ತರ ನೀಡುವುದಕ್ಕಿಂತ ನಾನು ಏನು ಹೇಳುತ್ತಿದ್ದೇನೆ ಎಂಬುದನ್ನು ಮತ್ತೂ ಸ್ಪಷ್ಟೀಕರಿಸುವುದು ಸೂಕ್ತ ಎನ್ನಿಸುತ್ತದೆ.

ಭಾರತೀಯ ಅಧ್ಯಾತ್ಮ ಪರಂಪರೆಯು ಇಂದಿನವರೆಗೂ ಐತಿಹಾಸಿಕ ಏಳು ಬೀಳುಗಳನ್ನೆಲ್ಲ ದಾಟಿಕೊಂಡು ಅವ್ಯಾಹತವಾಗಿ ಮುಂದುವರಿದುಕೊಂಡು ಬಂದಿದೆ.

08 April 2013

* ಚಂದ್ರಶೇಖರ ಕಂಬಾರ 


ಈಚಿನ ದಿನಗಳಲ್ಲಿ  `ಪ್ರಜಾವಾಣಿ' ಯ ಸಂಗತದಲ್ಲಿ ಅಚ್ಚಾಗುತ್ತಿರುವ ವಚನಕಾರರ ಬಗೆಗಿನ ಚರ್ಚೆಯನ್ನು ಕುತೂಹಲದಿಂದ ಗಮನಿಸುತ್ತಾ ಬಂದಿದ್ದೇನೆ. ಕರ್ನಾಟಕದ ಸಂಸ್ಕೃತಿ ಮತ್ತು ಚಿಂತನೆಯ ನಿರ್ಮಾಣದಲ್ಲಿ ಅತ್ಯಂತ ವಿಶಿಷ್ಟ ಮತ್ತು ನಿರ್ಣಾಯಕ ಪಾತ್ರ ವಹಿಸಿದ ವಚನ ಪರಂಪರೆಯ ಕುರಿತ ಯಾವುದೇ ಚರ್ಚೆ ತುಂಬಾ ಮಹತ್ವಪೂರ್ಣವಾದುದು. ಅದರಲ್ಲೂ ಒಬ್ಬ ವ್ಯಕ್ತಿಯಾಗಿ, ಬರಹಗಾರನಾಗಿ, ಕನ್ನಡ ಜಾನಪದ ಮತ್ತು ಸಾಹಿತ್ಯದ ವಿದ್ಯಾರ್ಥಿಯಾಗಿರುವ ನನ್ನ ಸಂವೇದನೆ ಮತ್ತು ಸೃಜನಶೀಲತೆಗೆ ಬಹು ದೊಡ್ಡ ಕೊಡುಗೆ ನೀಡಿರುವ, ಕಳೆದ ನಾಲ್ಕೈದು ದಶಕಗಳಿಂದ ನನ್ನ ಆತ್ಮಸಂಗಾತದಲ್ಲಿರುವ ವಚನಕಾರರ ಕುರಿತ ಚರ್ಚೆಯಲ್ಲಿ ನಾನೂ ದನಿಗೂಡಿಸಬೇಕು ಅನಿಸಿದೆ.

ಪ್ರಸ್ತುತ ಚರ್ಚೆಯಲ್ಲಿರುವ ಸಂಗತಿಗಳಿಗೆ ನನ್ನ ಪ್ರತಿಕ್ರಿಯೆ ನೀಡುವ ಮೊದಲು ಅವಕ್ಕೆ ಭಿತ್ತಿಯಾಗಿ ಕೆಲವು ಅಂಶಗಳನ್ನು ದಾಖಲಿಸಬಯಸುತ್ತೇನೆ.

20 March 2013

* ಡಾ ರಾಜಾರಾಮ ಹೆಗಡೆ

ಎಂ. ಎಂ. ಕಲಬುರ್ಗಿಯವರು ತಮ್ಮ ಪ್ರತಿಕ್ರಿಯೆಯಲ್ಲಿ ಭಾರತೀಯ ಇತಿಹಾಸವನ್ನು ಆಧಾರವಾಗಿ ತೋರಿಸಿ ವಚನ ಚಳವಳಿಗಳ ಸಿದ್ಧಾಂತವು ಜಾತಿವಿನಾಶವೇ ಆಗಿದೆ ಎನ್ನುತ್ತಾರೆ. ಅವರ ಪ್ರಕಾರ ಬಾಲಗಂಗಾಧರ ಹಾಗೂ ನಾವು ಇದನ್ನು ಅಲ್ಲಗಳೆಯುತ್ತಿರುವುದು ಕನ್ನಡ ಸಂಸ್ಕೃತಿಗೆ ಒಳ್ಳೆಯದಲ್ಲ.

ಕಲಬುರ್ಗಿಯವರ ಪ್ರಕಾರ ವಚನಗಳು ಜಾತಿವಿರೋಧಿ ಎಂದರೇನೇ ಕನ್ನಡ ಸಂಸ್ಕೃತಿಗೆ ಒಳ್ಳೆಯ ಹೆಸರು ಬರುತ್ತದೆ. ಆದರೆ ನಮ್ಮ ಪ್ರಕಾರ ಕನ್ನಡಿಗರು ಒಂದು  ಒಳ್ಳೆಯ ಸಂಶೋಧನೆಯನ್ನು ಮಾಡುವುದರಿಂದ ಹಾಗೂ ಅದನ್ನು ಕನ್ನಡದಲ್ಲಿ ಬರೆಯುವುದರಿಂದ ಕನ್ನಡದ ಸ್ಥಾನಮಾನವು ಜಾಗತಿಕ ಮಟ್ಟದಲ್ಲಿ ನಿಜವಾಗಿಯೂ ಹೆಚ್ಚುತ್ತದೆಯೇ ಹೊರತು ಯಾವುದಾದರೂ ಐಡಿಯಾಲಜಿಯನ್ನು ಸಮರ್ಥಿಸುವುದರಿಂದಲ್ಲ.

 ಒಂದು ಕಾಲದ ಇತಿಹಾಸವನ್ನು ತಿಳಿದುಕೊಳ್ಳದಿದ್ದರೆ ಆ ಕಾಲದ ಸಾಹಿತ್ಯವು ಅರ್ಥವಾಗುವುದಿಲ್ಲವೆಂಬುದು ಎಷ್ಟು ನಿಜವೊ, ಅಷ್ಟೇ ನಿಜ, ಸಾಹಿತ್ಯವನ್ನು ಸರಿಯಾಗಿ ಓದದಿದ್ದರೆ ಅದೇ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳಲೂ ಸಾಧ್ಯವಿಲ್ಲ ಎಂಬುದು. ಏಕೆಂದರೆ ಇತಿಹಾಸ ರಚನೆಗೆ ಸಾಹಿತ್ಯವು ಆಧಾರವಲ್ಲವೆ? ಕಲಬುರ್ಗಿಯವರ ಪ್ರತಿಕ್ರಿಯೆಯಲ್ಲಿ ಏನಾಗಿದೆಯೆಂದರೆ ವಸಾಹತು ಕಾಲದಲ್ಲಿ ಭಾರತದಲ್ಲಿ ರಿಲಿಜನ್ನುಗಳಿವೆ ಎಂಬ ತಪ್ಪು ತಿಳಿವಳಿಕೆಯಿಂದ ಬರೆದ ಇತಿಹಾಸವನ್ನೇ ಅವರು ನಮಗೆ ತಿಳಿಸುತ್ತಾರೆ.

ಅದೇ ಇತಿಹಾಸವು ವಚನ ಚಳವಳಿಯು ಜಾತಿ ವ್ಯವಸ್ಥೆಯ ವಿರುದ್ಧದ ಹೋರಾಟ ಎನ್ನುತ್ತದೆ. ಅದು ವಚನ ಸಾಹಿತ್ಯವನ್ನು ಅಧ್ಯಯನ ಮಾಡಿ ಕಂಡುಕೊಂಡ ಸತ್ಯವಲ್ಲ, ಬದಲಾಗಿ ಪ್ರೊಟೆಸ್ಟಾಂಟ್ ಪೂರ್ವಗ್ರಹಗಳಿಂದ ಹುಟ್ಟಿಕೊಂಡ ಇತಿಹಾಸ ಹಾಗೂ ಪಾಶ್ಚಾತ್ಯರು ಭಾರತಕ್ಕೆ ಬಂದು ವಚನಗಳನ್ನು ಓದುವುದಕ್ಕೆ ಮೊದಲೇ ಹುಟ್ಟಿಕೊಂಡ ಇತಿಹಾಸ ಎಂಬುದನ್ನು ಡಂಕಿನ್ ಸ್ಪಷ್ಟವಾಗಿ ತೋರಿಸಿದ್ದಾರೆ. ಆ ಇತಿಹಾಸವನ್ನು ಇಟ್ಟುಕೊಂಡೇ ವಚನ ಸಾಹಿತ್ಯವನ್ನು ನಾವು ಓದತೊಡಗಿದೆವು.
ಈಗ ವಚನ ಸಾಹಿತ್ಯವನ್ನು ಮರು ಓದಿಗೆ ಒಳಪಡಿಸಿ ಸರಿಯಾದ ಇತಿಹಾಸದ ರಚನೆಗೆ ಬುನಾದಿಯನ್ನು ಹಾಕಬೇಕೆಂಬುದು ನಮ್ಮ ಒತ್ತಾಸೆ. ಹಾಗಾಗಿ ಕಲಬುರ್ಗಿಯವರು ನೀಡುವ ಇತಿಹಾಸ ನಮಗೆ ಪ್ರಸ್ತುತವಲ್ಲ.

ಜಾತಿ ವಿನಾಶವೇ ವಚನ ಚಳವಳಿಗಳ ಸೈದ್ಧಾಂತಿಕ ಹಿನ್ನೆಲೆ ಎಂಬ ವಾದವನ್ನು ಸಮರ್ಥಿಸಬೇಕಾದರೆ ಈ ಮುಂದಿನ ವಾಕ್ಯಗಳು ಅನಿವಾರ್ಯ ಎಂಬುದನ್ನು ಈ ಕುರಿತ ಚರ್ಚೆಗಳು ತೋರಿಸಿಕೊಟ್ಟಿವೆ.   `ನಮಗೆ ಸಿಗದಿರುವ ಇನ್ನೂ ಎಷ್ಟೋ ವಚನಗಳಿರಬಹುದು' ,  `ವಚನಗಳಲ್ಲಿ ಶಬ್ದಗಳು ಇಲ್ಲದಿದ್ದರೂ ಅವುಗಳ ಧ್ವನಿ ಹಾಗಿದೆ' ,  `0.3% ವಚನಗಳಲ್ಲಿ ಇರುವ ವಿಚಾರವನ್ನೇ ಅವರೇಕೆ ಪ್ರತಿಪಾದಿಸಿರಬಾರದು? ಇದನ್ನೆಲ್ಲ ಅಂಕಿ ಅಂಶದಿಂದ ಹೇಳಲು ಸಾಧ್ಯವಿಲ್ಲ' , ಇತ್ಯಾದಿ.
ಅಂದರೆ ಅವರೆಲ್ಲರೂ ತಮ್ಮ ಜಾತಿ ವಿನಾಶದ ಸಿದ್ಧಾಂತವು ಲಭ್ಯವಿರುವ ವಚನಗಳನ್ನಾಧರಿಸಿಲ್ಲ ಹಾಗೂ ಆಧರಿಸಬಾರದು ಎಂಬ ಅಭಿಪ್ರಾಯವನ್ನು ಸ್ಪಷ್ಟವಾಗಿ ತಿಳಿಸುತ್ತಿದ್ದಾರೆ. ಅದೇ ರೀತಿಯಲ್ಲಿ 0.3% ವಚನಗಳಲ್ಲಿ ಬರುವ ಬ್ರಾಹ್ಮಣರ ಆಚರಣೆಗಳ ಹಾಗೂ ಗ್ರಂಥಗಳ ಟೀಕೆ, ಜಾತಿ ಮದ, ಭೇದಗಳ ಟೀಕೆ, ಇತ್ಯಾದಿಗಳೇ ಈ ವಾದಕ್ಕೆ ಬುನಾದಿ ಎಂಬುದೂ ಧೃಡಪಡುತ್ತದೆ. ಇಂಥ ಸಾಲುಗಳಿಗೆಲ್ಲ ಜಾತಿ ವಿನಾಶಕ್ಕಿಂತಲೂ ಸೂಕ್ತವಾದ ವಿವರಣೆಯನ್ನು ನೀಡಿದಲ್ಲಿ ಈ ಮೇಲಿನ ಅಂತೆ ಕಂತೆಗಳ ಸಂತೆ ಮಾಯವಾಗುವುದರಲ್ಲಿ ಸಂದೇಹವೇ ಇಲ್ಲ.

ಬಾಲಗಂಗಾಧರರು ಅಂಥದ್ದೊಂದು ವಾದವನ್ನು ಇಡುತ್ತಾರೆ. ವಚನಗಳ ಸಿದ್ಧಾಂತವನ್ನು ಜಾತಿ ವಿರೋಧದ ನೆಲೆಯಿಂದ ತೆಗೆದು ಆಧ್ಯಾತ್ಮಿತೆಯ ನೆಲೆಯಲ್ಲಿ ಇಡಿರಿ. ಈ ಮೇಲಿನ ಸಮಸ್ಯೆಗಳೆಲ್ಲ ಪರಿಹಾರವಾಗಿ ಬಿಡುತ್ತವೆ. ನಮ್ಮ ಆಧ್ಯಾತ್ಮಿಕ ಮಾರ್ಗಗಳನ್ನೆಲ್ಲ ನಾವು ಸಾಮಾಜಿಕ ಚಳವಳಿಗಳನ್ನಾಗಿ ಮಾಡಿಟ್ಟಿದ್ದು ನಮ್ಮ ಸಾಂಸ್ಕೃತಿಕ ವಿಸ್ಮತಿಗಳಲ್ಲೊಂದು. ಅದು ಪ್ರೊಟೆಸ್ಟಾಂಟ್ ಲೋಕದೃಷ್ಟಿಯ ಕೊಡುಗೆ. ಭಾರತೀಯ ಆಧ್ಯಾತ್ಮಿಕ ಪರಂಪರೆಯಲ್ಲಿ ಉಪನಿಷತ್ತುಗಳ ಕಾಲದಿಂದಲೂ ಜಾತಿ, ಅಂತಸ್ತು, ಐಶ್ವರ್ಯ ಇತ್ಯಾದಿಗಳು ಅಹಂಕಾರರೂಪದಲ್ಲಿ ಆತ್ಮಜ್ಞಾನಕ್ಕೆ ಅಡ್ಡಿಯಾಗಿವೆ ಎಂಬುದಾಗಿಯೇ ಪ್ರತಿಪಾದಿಸಲಾಗಿದೆ.
ಆತ್ಮಜ್ಞಾನಿಗೆ ಇದಾವುದೂ ಇರುವುದಿಲ್ಲ. ಅದು ಪರಮಾನಂದದ ಸ್ಥಿತಿ. ಹಾಗಾಗುವುದೆಂದರೆ ಜನನ ಮರಣಗಳ ಚಕ್ರದಿಂದ ಮುಕ್ತಿ ಹೊಂದಿದಂತೆಯೇ. ಅದನ್ನೇ ಅವರು ಮೋಕ್ಷ ಎನ್ನುತ್ತಾರೆ. ವರ್ಣಧರ್ಮದಲ್ಲಿ ಶ್ರದ್ಧೆ ಇಟ್ಟವರು, ಪ್ರಾಪಂಚಿಕ ಅರ್ಥ ಸಿದ್ಧಿಗಾಗಿ ದೇವತೆಗಳು ಹಾಗೂ ಪೂಜೆಯಲ್ಲಿ ಶ್ರದ್ಧೆ ಇಟ್ಟವರು ಮುಕ್ತಿಯನ್ನು ಪಡೆಯುವುದರ ಬದಲಾಗಿ ಈ ಸಂಸಾರಚಕ್ರದಲ್ಲೇ ಸುತ್ತುತ್ತಿರುತ್ತಾರೆ ಎಂಬುದಾಗಿ ಉಪನಿಷತ್ತುಗಳೂ, ಅವುಗಳ ಭಾಷ್ಯಕಾರರೂ ಒತ್ತಿ ಹೇಳಿದ್ದಾರೆ.

ಸಾಂಸಾರಿಕ ಉಪಾಧಿಗಳಿಂದ ಬಿಡುಗಡೆ ಪಡೆಯುವುದಕ್ಕಾಗಿ ಭಾರತೀಯ ಆಧ್ಯಾತ್ಮಿಕ ಪರಂಪರೆಯು ಸನ್ಯಾಸ, ಶ್ರಮಣ  ಇತ್ಯಾದಿ ವೈವಿಧ್ಯಪೂರ್ಣವಾದ ವಿರಕ್ತ ಮಾರ್ಗಗಳನ್ನು ಬೆಳೆಸಿತು. ಈ ವಿರಕ್ತ ಪರಂಪರೆಯೇ ಬೌದ್ಧ, ಜೈನರಲ್ಲೂ ಇರುವುದರಿಂದ ಸಂಸಾರ ಚಕ್ರದಿಂದ ಬಿಡುಗಡೆಯನ್ನು ಹೊಂದುವುದೇ ನಿಜವಾದ ಮೋಕ್ಷ ಎಂಬುದಾಗಿ ಅವರೂ ಪ್ರತಿಪಾದಿಸುತ್ತಾರೆ. ಸಂಸಾರಸ್ಥರು ಮುಖ್ಯ  ಎಂಬುದಾಗಿ ಭಾವಿಸಿಕೊಂಡ ಅನೇಕ ಪದ್ಧತಿಗಳನ್ನು ಹಾಗೂ ಆಚರಣೆಗಳನ್ನು ಆಧ್ಯಾತ್ಮ ಜ್ಞಾನಕ್ಕೆ ಅಡ್ಡಿಗಳೆಂಬುದಾಗಿ ಅವರು ಭಾವಿಸಿದರು.

ವರ್ಣ,  ಜಾತಿಭೇದ ಅದರಲ್ಲಿ ಮುಖ್ಯವಾದುದು. ಬ್ರಾಹ್ಮಣರು ಸನ್ಯಾಸ ಸ್ವೀಕರಿಸಬೇಕಾದರೆ ವರ್ಣದ ಸಂಕೇತವಾದ ಜನಿವಾರವನ್ನೂ, ಕರ್ಮಗಳನ್ನೂ ತ್ಯಜಿಸಿ ತಮ್ಮ ಶ್ರಾದ್ಧವನ್ನೂ ಮಾಡಿಕೊಳ್ಳವುದು ಇವತ್ತಿಗೂ ಪ್ರಚಲಿತದಲ್ಲಿರುವ ಆಚರಣೆ.  ಶಿವ ಶರಣರು ಶಿವಭಕ್ತಿಯನ್ನು ಆಧ್ಯಾತ್ಮಿಕ ಮಾರ್ಗವನ್ನಾಗಿ  ಭಾವಿಸಿದವರು. ಇಲ್ಲಿ ಮುಕ್ತಿ ಎಂಬುದು ಈಶ್ವರ ಸಾಯುಜ್ಯದ ರೂಪದಲ್ಲಿ ಇದೆ. ಹಾಗಾಗಿ ಬ್ರಾಹ್ಮಣ ಜಾತಿಯನ್ನು ವಿರೋಧಿಸಲಿಕ್ಕೆ ಬಸವಣ್ಣನು ಜನಿವಾರವನ್ನು ಕಿತ್ತು ಹಾಕಿದ ಎಂಬುದೇ  ಪ್ರೊಟೆಸ್ಟಾಂಟ್ ವಿವರಣೆ.

ಇವರೆಲ್ಲ ತಮ್ಮ ಮಾರ್ಗವನ್ನು ತುಳಿಯುವವರಿಗೆ ಮಾತ್ರವೇ ಅಂಥ ಜೀವನವನ್ನು ವಿಧಿಸಿದ್ದರು ಎಂಬುದನ್ನು ಮರೆಯಬಾರದು. ಸಂಸಾರವೆಂದರೆ ಈ ಭೇದಗಳೆಲ್ಲ ಇರುವವೇ, ಆದರೆ ಅದರಿಂದ ಮುಕ್ತಿಯನ್ನು ಪಡೆಯಲು ಬಯಸುವವರು ಈ ಭೇದಗಳನ್ನು ಮರೆಯಬೇಕು. ವಚನಗಳು ಕೂಡ ಶಿವ ಶರಣರಲ್ಲಿ ಜಾತಿ ಭೇದ ಎಣಿಸಬಾರದು ಎಂದು ನಿರ್ದಿಷ್ಟವಾಗಿ ಹೇಳುತ್ತಿವೆ ಎಂಬುದನ್ನು ತರ್ಕಬದ್ಧವಾಗಿ ತೋರಿಸಬಹುದು.

ಅವರು ಜಾತಿಗಳೇ ಹೋಗಬೇಕು ಎಂಬುದಾಗಿಯೂ ಹೇಳುತ್ತಿರಲಿಲ್ಲ ಅಥವಾ ಇಲ್ಲದ ಜಾತಿ ವ್ಯವಸ್ಥೆಯ ಕುರಿತೂ ಹೇಳುತ್ತಿರಲಿಲ್ಲ. ಜಾತಿವಿನಾಶ ಚಳವಳಿಯನ್ನು ಮಾಡುತ್ತಿರುವ ಆಧುನಿಕರು ತಾವು ಇಂಥವರ ಜೊತೆಗೆ ಎಲ್ಲಿಯವರೆಗೆ ನಿಲ್ಲುತ್ತೇವೆಂಬುದನ್ನು ಸರಿಯಾಗಿ ನೋಡಿಕೊಳ್ಳಬೇಕು. ನೀವು ಜಾತಿಯನ್ನು ತಲೆಯೊಳಗಿಟ್ಟುಕೊಂಡಿರೆಂದರೆ ಅವರ ಲೋಕವನ್ನು ತ್ಯಜಿಸಿದಂತೆಯೇ. ` ಪರಚಿಂತೆ ಎನಗೇಕಯ್ಯ' ,  `ಲೋಕದ ಡೊಂಕ ನೀವೇಕೆ ತಿದ್ದುವಿರಯ್ಯ'  ಇಂಥ ವಚನಗಳನ್ನು ಸಾಮಾಜಿಕ ಹೋರಾಟಗಾರರು ರಚಿಸಲು ಸಾಧ್ಯವಿಲ್ಲ.

 ಆಧ್ಯಾತ್ಮ ಸಂಪ್ರದಾಯಗಳು, ಬ್ರಾಹ್ಮಣ ಆಚರಣೆಗಳು, ಯಜ್ಞಯಾಗಾದಿಗಳು, ಮಂತ್ರ ತಂತ್ರಗಳು, ದೇವಾಲಯ, ಪೂಜೆ ಇತ್ಯಾದಿಗಳನ್ನೇ ಕೇಂದ್ರವಾಗಿಟ್ಟುಕೊಂಡು ಟೀಕೆಗಳನ್ನು ಮಾಡಲೂ ಒಂದು ಕಾರಣವಿದೆ. ಇವೂ ಕೂಡ ಆಧ್ಯಾತ್ಮ ಮಾರ್ಗಗಳೇ. ಆದರೆ ಈ ಆಚರಣೆಗಳಿಂದ ಹುಟ್ಟಿದ ಅಹಂಕಾರ, ಮೋಹ, ಇತ್ಯಾದಿಗಳೇ ಆತ್ಮಜ್ಞಾನಕ್ಕೆ ಅಡ್ಡಿಯಾಗುತ್ತವೆ ಎಂಬುದನ್ನು ಈ ಟೀಕೆಗಳು ತಿಳಿಸುತ್ತಿವೆ.

ಅಂದರೆ ಹೆಚ್ಚೆಂದರೆ ಒಂದು ರೀತಿಯಲ್ಲಿ ಆಧ್ಯಾತ್ಮ ಮಾರ್ಗವನ್ನಿಟ್ಟುಕೊಂಡು ದಾರಿ ತಪ್ಪಿಸುವವರ ಖಂಡನೆ ಎಂಬುದಾಗಿ ಇಂಥ ಟೀಕೆಗಳನ್ನು ಪರಿಗಣಿಸಬಹುದು. ಇಂಥ ಟೀಕೆಗಳು ಆಯಾ ಸಂಪ್ರದಾಯಗಳಿಗೆ ಆಂತರಿಕವಾದವುಗಳು ಎಂಬುದನ್ನೂ ಗಮನಿಸಬೇಕು. ಉದಾಹರಣೆಗೆ ಇಡೀ ವಚನ ಸಾಹಿತ್ಯದಲ್ಲಿ ಯಾವುದನ್ನು ಕ್ರಾಂತಿಕಾರಕ ವಿಷಯ ಎನ್ನುತ್ತಾರೋ ಅವೆಲ್ಲವೂ ಸಂಸ್ಕೃತ ಆಗಮಗಳಲ್ಲಿ ಬಂದಿರುವ ವಿಚಾರಗಳ ಕನ್ನಡ ರೂಪಗಳೇ ಆಗಿವೆ ಎಂಬುದು ಸ್ಪಷ್ಟ.

ಶಿವಶರಣರ ಮಾರ್ಗವನ್ನು ಭಾರತೀಯ ಆಧ್ಯಾತ್ಮಿಕ ಪರಂಪರೆಯ ಅಖಂಡತೆಯಲ್ಲಿ ಇಟ್ಟರೆ ಮಾತ್ರವೇ ಅಲ್ಲಿ ನಾವು ಯಾವ ಪ್ರಶ್ನೆಗಳನ್ನು ಕೇಳಬೇಕು, ಉತ್ತರವನ್ನು ಹೇಗೆ ಪಡೆಯಬೇಕು ಎಂಬುದಕ್ಕೆ ವಿಧಾನಗಳು ಸಿಗುತ್ತವೆ. ಬದಲಾಗಿ ಈ ಜಾತಿವಿರೋಧದ ಸಿದ್ಧಾಂತವು ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ಬ್ರಾಹ್ಮಣ, ಬ್ರಾಹ್ಮಣೇತರ ಎಂಬುದಾಗಿ ಜಾತಿಯನ್ನೇ ಆಧಾರವಾಗಿಟ್ಟುಕೊಂಡು ವಿಭಾಗಿಸುವುದರ ಮೂಲಕ ಅದನ್ನು ತಿಳಿವಳಿಕೆಗೆ ದಕ್ಕದಂತೆ ಮಾಡುತ್ತದೆ. ವಚನ ಚಳವಳಿ ಇದಕ್ಕೊಂದು ಜ್ವಲಂತ ಉದಾಹರಣೆ.
ವಚನಕಾರರು ಜಾತಿವಿರೋಧಿ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು ಎಂದು ವಾದಿಸುವವರು ಈ ಮುಂದಿನ ಕೆಲಸವನ್ನು ಮಾಡಲೇಬೇಕು:

1) 0.3% ವಚನಗಳಲ್ಲಿ ಏನು ಹೇಳುತ್ತಾರೊ ಅವು ಭಾರತೀಯ ಆಧ್ಯಾತ್ಮಿಕ ಪರಂಪರೆಯಲ್ಲಿ ಸಾಮಾನ್ಯವಾಗಿ ಕಾಣಿಸುವಂಥ ಪ್ರತಿಪಾದನೆಗಳಲ್ಲ ಎಂಬುದನ್ನು ತೋರಿಸಬೇಕು.

2) ಅಷ್ಟರ ನಂತರ ಅದು ಜಾತಿ ವಿರೋಧ ಹಾಗೂ ಜಾತಿ ವ್ಯವಸ್ಥೆಯ ವಿರೋಧ ಹೇಗಾಗುತ್ತದೆ ಎಂಬುದನ್ನು ಪ್ರತ್ಯೇಕವಾಗಿ ತೋರಿಸಬೇಕು. ಈ ಎರಡು ಹೆಜ್ಜೆಗಳನ್ನು ಇಡದೇ ಹೇಳಿದ ಮಾತುಗಳೆಲ್ಲ  ಪ್ರೊಟೆಸ್ಟಾಂಟ್ ಪೂರ್ವಗ್ರಹಗಳೇ ಹೊರತೂ ಬೇರೇನೂ ಆಗಲು ಸಾಧ್ಯವಿಲ್ಲ.